ರಾಷ್ಟ್ರಪತಿಗಳಿಂದ ಜ| ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆ
Team Udayavani, Feb 7, 2021, 7:20 AM IST
ಮಡಿಕೇರಿ: ಅಪ್ರತಿಮ ಸೇನಾನಿ ಮತ್ತು ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಜ|ತಿಮ್ಮಯ್ಯ ಅವರ ಸ್ಮಾರಕ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಲೋಕಾರ್ಪಣೆಗೊಳಿಸಿದರು.
ಜ| ತಿಮ್ಮಯ್ಯ ಅವರು ಹುಟ್ಟಿ ಬೆಳೆದ ನಿವಾಸವಾದ ಜ|ತಿಮ್ಮಯ್ಯ ರಸ್ತೆಯ “ಸನ್ನಿಸೈಡ್’ ನಲ್ಲಿ ಮ್ಯೂಸಿಯಮ್ಮನ್ನು ರಾಷ್ಟ್ರಪತಿಗಳು ಉದ್ಘಾಟಿಸಿದರು. ಕೋವಿಂದ್ ಅವರು ಕೊಡಗಿಗೆ ಆಗಮಿಸಿದ ತೃತೀಯ ರಾಷ್ಟ್ರಪತಿ. ಶನಿವಾರ ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ನಗರದ ಹೆಲಿಪ್ಯಾಡ್‌ಗೆ ಬಂದಿಳಿದ ರಾಷ್ಟ್ರಪತಿಯವರನ್ನು ಸಚಿವರಾದ ಅರವಿಂದ ಲಿಂಬಾವಳಿ, ವಿ. ಸೋಮಣ್ಣ ಬರ ಮಾಡಿ ಕೊಂಡರು.
ಬಳಿಕ ನಗರದ ಹೊರವಲಯದ ರೆಸಾರ್ಟ್‌ಗೆ ತೆರಳಿದ ರಾಷ್ಟ್ರಪತಿಯವರು ಅಪರಾಹ್ನ 3 ಗಂಟೆಗೆ ಜನರಲ್ ತಿಮ್ಮಯ್ಯ ವಸ್ತುಸಂಗ್ರಹಾಲಯಕ್ಕೆ ಆಗಮಿಸಿದರು. ಯುದ್ಧ ಟ್ಯಾಂಕ್, ಯುದ್ಧ ವಿಮಾನ ವೀಕ್ಷಿಸಿ ಅನಂತರ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಥಮ ಮಹಿಳೆ ಸವಿತಾ ಕೋವಿಂದ್, ಮೂರು ಪಡೆಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಉಪಸ್ಥಿತರಿದ್ದರು.
ಪ್ರೇರಕ ಶಕ್ತಿ
ಮ್ಯೂಸಿಯಂ ಜ| ತಿಮ್ಮಯ್ಯ ಅವರಂತಹ ವೀರ ಪರಂಪರೆಯನ್ನು ಮುನ್ನಡೆಸಲು ಯುವ ಸಮೂಹಕ್ಕೆ ಪ್ರೇರಕ ಶಕ್ತಿಯಾಗಿದೆ. ಜ| ಕೆ.ಎಸ್. ತಿಮ್ಮಯ್ಯ ಮತ್ತು ಫೀ|ಮಾ| ಕೆ.ಎಂ. ಕಾರ್ಯಪ್ಪ ಅವರಂತಹ ವೀರ ಸೇನಾನಿಗಳನ್ನು ನೀಡಿರುವ ಹೆಮ್ಮಯ ನಾಡು ಕೊಡಗು.
ಸಂದರ್ಶಕರ ಪುಸ್ತಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.