ಜೀವನದಿ ಕಾವೇರಿಗೆ ನಮಿಸಿದ ರಾಷ್ಟ್ರಪತಿ


Team Udayavani, Feb 7, 2021, 6:00 AM IST

ಜೀವನದಿ ಕಾವೇರಿಗೆ ನಮಿಸಿದ ರಾಷ್ಟ್ರಪತಿ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಗೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗೂ ಪತ್ನಿ ಸವಿತಾ ಕೋವಿಂದ್‌ ಅವರು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದರೊಂದಿಗೆ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಪ್ರಥಮ ರಾಷ್ಟ್ರಪತಿ ಎಂಬ ಕೀರ್ತಿಗೂ ಅವರು ಭಾಜನರಾದರು.

ರಾಷ್ಟ್ರಪತಿ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಮುಖ್ಯ ಅರ್ಚಕರಾದ ರಾಜೇಶ್‌ ಆಚಾರ್ಯ, ಸುಧೀರ್‌ ಆಚಾರ್ಯ, ಸಹಾಯಕ ಅರ್ಚಕರಾದ ಅಖೀಲೇಶ್‌, ಪ್ರಸಾದ್‌, ಶ್ರೀನಿವಾಸ್‌ ಪೂಜಾ ವಿಧಿ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಉಪಸ್ಥಿತ ರಿದ್ದರು. ಭಾಗಮಂಡಲದ ಹೆಲಿಪ್ಯಾಡ್‌ಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ರಾಷ್ಟ್ರಪತಿಗಳನ್ನು ಕೊಡಗು ಜಿಲ್ಲಾಡಳಿತ ಬರ ಮಾಡಿಕೊಂಡಿತು.

Kodagu: President Ram Nath Kovind pays tributes at a memorial after inaugurating a museum at the erstwhile ancestral house of General Thimayya at Madikeri in Kodagu district

ಸೇನಾ ಪರಂಪರೆಯ ಅಪೂರ್ವ ಮಾಹಿತಿ
ರಾಷ್ಟ್ರಪತಿಗಳಿಂದ ಲೋಕಾರ್ಪ ಣೆಗೊಂಡಿರುವ ಜನರಲ್‌ ತಿಮ್ಮಯ್ಯ ಜನರ ಗಮನಸೆಳೆಯುತ್ತಿದೆ. ಈ ಮನೆಯಲ್ಲೇ ತಿಮ್ಮಯ್ಯ ಅವರು ಬಾಲ್ಯದ ದಿನಗಳನ್ನು ಕಳೆದಿದ್ದರು.
ಮ್ಯೂಸಿಯಂನ ಆವರಣದಲ್ಲಿ 1947ರ ಬಳಿಕ ರಾಷ್ಟ್ರ ರಕ್ಷಣೆಗೆ ಬಲಿದಾನ ಗೈದ ಯೋಧರ ಸ್ಮರಣಾರ್ಥ ಸಜ್ಜುಗೊಳಿಸಿರುವ ಯುದ್ಧ ಸ್ಮಾರಕ ಕಣ್ಮನ ಸೆಳೆೆಯುತ್ತದಾದರೆ, ರಷ್ಯಾ ನಿರ್ಮಿತ ಭಾರತೀಯ ಸೇನೆಯ ಹಲ ವಾರು ಯುದ್ಧಗಳಲ್ಲಿ ಬಳಸಲಾಗಿದ್ದ ಹಿಮ್ಮತ್‌ ಹೆಸರಿನ ಟಿ.50 ಯುದ್ಧ ಟ್ಯಾಂಕರ್‌, ಮಿಗ್‌-20 ಯುದ್ಧ ವಿಮಾನ ಗಮನ ಸೆಳೆ‌ಯುತ್ತದೆ.
ಜನರಲ್‌ ತಿಮ್ಮಯ್ಯ ಅವರ ಬಾಲ್ಯ, ಸೇನಾ ಕ್ಷೇತ್ರದಲ್ಲಿನ ವಿವಿಧ ಛಾಯಾಚಿತ್ರಗಳು ಆಕರ್ಷಿಸುತ್ತವೆ. ಜನರಲ್‌ ತಿಮ್ಮಯ್ಯ ಅವರ ಬದುಕು, ಭಾರತೀಯ ಸೇನೆಯ ಇತಿಹಾಸವನ್ನು ವಸ್ತು ಸಂಗ್ರಹಾಲಯದಲ್ಲಿ ನೋಡ ಬಹುದಾಗಿದೆ.
ಭಾರತೀಯ ಸೇನಾಧಿಕಾರಿಯಾಗಿ ಜನರಲ್‌ ತಿಮ್ಮಯ್ಯ ಅವರು ನಡೆದು ಬಂದ ದಾರಿಯ ಇತಿಹಾಸ ಸಾರುವುದರ ಜತೆಗೆ ಭಾರತೀಯ ಸೇನಾ ಪರಂಪರೆಯ ಮಾಹಿತಿ ನೀಡುವ ಮಹತ್ವದ ಸಂದೇಶ ವಸ್ತುಸಂಗ್ರಹಾಲಯದಲ್ಲಿದೆ.

ಜನರತ್ತ ಕೈಬೀಸಿದ ಪ್ರಥಮ ಪ್ರಜೆ!
ಮಡಿಕೇರಿ, ಫೆ. 6: ರಾಷ್ಟ್ರಪತಿಗಳ ತಲ ಕಾವೇರಿ ಭೇಟಿ, ಮ್ಯೂಸಿಯಂ ಉದ್ಘಾ ಟನೆ ಇವೆಲ್ಲವು ಬೆರಳೆಣಿಕೆಯ ಗಣ್ಯರ ಸಮ್ಮುಖದಲ್ಲಿ ನಡೆದವು. ಅವರು ಸಾಗುವ ಮಾರ್ಗಗಳಲ್ಲೆಲ್ಲ ಬಿಗಿ ಪಹರೆ ಇತ್ತು. ಇದರ ನಡುವೆ ರಾಷ್ಟ್ರದ ಪ್ರಥಮ ಪ್ರಜೆಯನ್ನು ಕಾಣುವುದು ಅಸಾಧ್ಯದ ಮಾತು. ಆದರೂ ಕನಿಷ್ಠ ಕಾರಿನೊಳಗೆ ಕುಳಿತ ರಾಷ್ಟ್ರಪತಿಗಳನ್ನಾದರೂ ನೋಡಬಹುದೆಂದು ಮ್ಯೂಸಿಯಂ ಬಳಿಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸಿಬಂದಿಹಾಗೂ ಸಾರ್ವಜನಿಕರು ಕಾದುಕುಳಿತಿ ದ್ದರು. ರಾಷ್ಟ್ರಪತಿಗಳು ಅವರನ್ನು ನಿರಾಸೆ ಗೊಳಿಸಲಿಲ್ಲ. ವಿಶೇಷ ವಾಹನದಲ್ಲಿ ತೆರಳುತ್ತಿದ್ದ ಅವರು ಜಿಲ್ಲಾಸ್ಪತ್ರೆಯ ಬಳಿ ಕಾರಿನಿಂದಿಳಿದು ಜನರತ್ತ ಕೈಬೀಸಿ ಹರ್ಷ ಮೂಡಿಸಿದರು.

ಕೊಡಗಿಗೆ ಬಂದ ತೃತೀಯ ರಾಷ್ಟ್ರಪತಿ
ಈ ಹಿಂದೆ ಕೊಡಗಿಗೆ 1982ರಲ್ಲಿ ಜಿಲ್ಲಾಸ್ಪತ್ರೆಯ ಶಂಕುಸ್ಥಾಪನೆಗಾಗಿ ಆರನೇ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಭೇಟಿ ನೀಡಿದ್ದರೆ, 2006ರ ಎ. 7ರಂದು 11ನೇ ರಾಷ್ಟ್ರಪತಿಯಾಗಿದ್ದ ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಜನರಲ್‌ ತಿಮ್ಮಯ್ಯ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಗೆ ಬಂದಿದ್ದರು. ರಾಮನಾಥ ಅವರು ಇದೀಗ ಕೊಡಗಿಗೆ ಭೇಟಿ ನೀಡಿರುವ ತೃತೀಯ ಹಾಗೂ ದೇಶದ 14ನೇ ರಾಷ್ಟ್ರಪತಿಯಾಗಿದ್ದಾರೆ.

Kodagu: President Ram Nath Kovind inaugurates a museum at the erstwhile ancestral house of General Thimayya at Madikeri in Kodagu district

ಪ್ರಯಾಣಿಕರ ಪರದಾಟ
ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ರಾಷ್ಟ್ರಪತಿಯವರು ಹೆಲಿಪ್ಯಾಡ್‌ನಿಂದ ಸುದರ್ಶನ ಅತಿಥಿ ಗೃಹಕ್ಕೆ ತೆರಳುವ ಮಾರ್ಗದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಪೂರ್ವಾಹ್ನ 11 ರಿಂದ ಸಂಜೆ 5ರ ವರೆಗೆ ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದ್ದರೂ ಬಹು ತೇಕ ಅಂಗಡಿ ಮುಂಗಟ್ಟುಗಳು ಬೆಳಗಿನಿಂದಲೇ ಮುಚ್ಚಲ್ಪಟ್ಟಿದ್ದವು. ವಾಹನ ಸಂಚಾರ ವಿರಳವಾಗಿತ್ತು. ಇದ ರಿಂದಾಗಿ ಮಡಿಕೇರಿ ನಗರದಲ್ಲಿ ಅಘೋಷಿತ ಬಂದ್‌ನ ವಾತಾವರಣ ನಿರ್ಮಾಣ ವಾಗಿತ್ತು. ಕೆಎಸ್ಸಾರ್ಟಿಸಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ನಿಲ್ದಾಣದಲ್ಲೇ ಸಂಜೆಯವರೆಗೆ ಕಾಯು ವಂತಾಯಿತು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.