ಇಒ-ಸದಸ್ಯರ ತಿಕ್ಕಾಟಕ್ಕೆ ಮೂರು ಸಭೆ ಬಲಿ
ಸಮನ್ವಯ ಕೊರತೆಯಿಂದ ಸಾರ್ವಜನಿಕ ಕೆಲಸಗಳು ಸ್ಥಗಿತ ! ಇಒ ವರ್ಗಾವಣೆಗೆ ಸದಸ್ಯರ ಪಟ್ಟು
Team Udayavani, Feb 7, 2021, 3:01 PM IST
ಮಂಡ್ಯ: ತಾಪಂ ವ್ಯವಸ್ಥೆ ರದ್ದುಪಡಿಸುವ ಶಿಫಾರಸ್ಸು ಮಾಡಿರುವ ಹೊತ್ತಲ್ಲೇ ಮಂಡ್ಯ ತಾಪಂನಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯರ ನಡುವಿನ ತಿಕ್ಕಾಟಕ್ಕೆ ಮೂರು ಸಾಮಾನ್ಯ ಸಭೆಗಳು ಬಲಿಯಾಗಿವೆ.
ಕಳೆದ 6 ತಿಂಗಳಿನಿಂದ ಒಂದೂ ಸಭೆಯೂ ನಡೆದಿಲ್ಲ.ಕಳೆದ ಬಾರಿ ನಡೆದ ಸಭೆಯಲ್ಲಿ ಶಾಸಕ ಎಂ.ಶ್ರೀನಿವಾಸ್ ಅವರ ಎದುರೇ ತಾಪಂ ಇಒ ಎಂ.ಗಂಗಣ್ಣ ವಿರುದ್ಧ ಸದಸ್ಯರು ದೂರುಗಳ ಸುರಿಮಳೆಗೈದು ಸಭೆ ಮುಂದೂಡಿದ್ದರು. ಈಗ ಶನಿವಾರ ನಡೆಯಬೇಕಿದ್ದ ಸಭೆಯನ್ನೂ ಮುಂದೂಡಲಾಗಿದೆ. ಇದರಿಂದ ತಾಪಂನಲ್ಲಿ ನಡೆಯಬೇಕಿದ್ದ ಯೋಜನೆ, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳುವಂತಾಗಿದೆ. ತಾಪಂ ಇಒ ಮೇಲೆ ಸದಸ್ಯರ ಆರೋಪ: ತಾಪಂ ಇಒ ಎಂ.ಗಂಗಣ್ಣ ವಿರುದ್ಧ ಸದಸ್ಯರು ಆರೋಪ ಮಾಡುತ್ತಿದ್ದಾರೆ.
ಯಾವುದೇ ಸಾರ್ವಜನಿಕ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ. ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಸದಸ್ಯರನ್ನು ಕರೆದು ಮಾತನಾಡಿಸುವ ಸೌಜನ್ಯವಿಲ್ಲ. ನಮ್ಮ ಕ್ಷೇತ್ರಗಳ ಯೋಜನೆಗಳನ್ನು ನಮ್ಮ ಗಮನಕ್ಕೆ ತರದೆ ನೇರವಾಗಿ ಅವರೇ ಮಾಡುತ್ತಿದ್ದಾರೆ. ಇದರಿಂದ ಕ್ಷೇತ್ರದ ಜನರಿಗೆ ಉತ್ತರ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸುತ್ತಿದ್ದಾರೆ.
ಸಮನ್ವಯದ ಕೊರತೆ: ತಾಪಂ ಆಡಳಿತದಲ್ಲಿ ಸಮನ್ವಯ ಕೊರತೆ ಉಂಟಾಗಿದೆ. ಇಒ ಹಾಗೂ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳಿಂದ ಅಭಿವೃದ್ಧಿ ಕೆಲಸ ಕುಂಠಿತಗೊಂಡಿವೆ. ಕಳೆದ 6 ತಿಂಗಳಿನಿಂದ ಸರಿಯಾಗಿ ಕೆಲಸಗಳು ಆಗುತ್ತಿಲ್ಲ. 2 ಸಭೆಗಳು ಯಾವುದೇ ಅಭಿವೃದ್ಧಿ ಚರ್ಚೆಯಾಗದೆ ಆರೋಪ- ಪ್ರತ್ಯಾರೋಪಗಳಲ್ಲೇ ಮುಂದೂಡಿಯಾಗಿತ್ತು.
ಇದನ್ನೂ ಓದಿ :ಕೃಷಿ ಕಾಯ್ದೆ ವಾಪಸ್‌ಗೆ ಹೆದ್ದಾರಿ ತಡೆ
ಜಿಪಂ ಹಾದಿಯಲ್ಲಿ ತಾಪಂ?: ಜಿಪಂನಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ನಡುವಿನ ಪ್ರತಿಷ್ಠೆಯ ರಾಜಕಾರಣಕ್ಕೆ ಈಗಾಗಲೇ ಜಿಪಂ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಅಧ್ಯಕ್ಷರನ್ನು ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದಾರೆ. ಇತ್ತ ಅಧ್ಯಕ್ಷರು ರಾಜೀನಾಮೆ ನೀಡದಿರುವುದರಿಂದ ಯಾವುದೇ ಯೋಜನೆಗಳಿಗೆ ಅನುಮೋದನೆ ಸಿಕ್ಕಿರಲಿಲ್ಲ. ಇದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅನುದಾನದ ಕ್ರಿಯಾಯೋಜನೆಗೆ ಅನುಮೋದನೆ ನೀಡಿತ್ತು. ಇದಕ್ಕೆ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅದೇ ರೀತಿ ತಾಪಂನಲ್ಲೂ ಅಧಿಕಾರಿ ಹಾಗೂ ಸದಸ್ಯರ ನಡುವಿನ ಗುದ್ದಾಟಕ್ಕೆ ಸಭೆಗಳು ನಡೆಯುತ್ತಿಲ್ಲ. ಇದರಿಂದ ಕಳೆದ 6 ತಿಂಗಳಿನಿಂದ ಆಡಳಿತ ಯಂತ್ರ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.