ವಿವಿಧ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
3,4,5ನೇ ವಾರ್ಡ್‌ನ ತ್ಯಾಜ್ಯ ವಿಲೇವಾರಿಗೆ ಒತ್ತಾಯಿಸಿ ಮನವಿ
Team Udayavani, Feb 7, 2021, 5:08 PM IST
ಬಳ್ಳಾರಿ: ನಗರದ 3,4,5ನೇ ವಾರ್ಡ್‌ನಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕು. ಸೊಳ್ಳೆಗಳನ್ನು ನಿಯಂತ್ರಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು
ಈಡೇರಿಸಬೇಕು ಎಂದು ಒತ್ತಾಯಿಸಿ ಸಮಾಜ ಸೇವಕ, ಯುವ ಮುಖಂಡ ಪ್ರಭಂಜನ್ ಕುಮಾರ್ ನೇತೃತ್ವದಲ್ಲಿ ವಾರ್ಡ್‌ಗಳ ಸ್ಥಳೀಯ
ನಿವಾಸಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 3,4, 5ನೇ ವಾರ್ಡ್‌ನ ರಸ್ತೆಗಳ ಇಕ್ಕೆಲಗಳಲ್ಲಿ ನಿರ್ಮಿಸಲಾಗಿರುವ ತೆರೆದ ಚರಂಡಿಗಳು ಅವೈಜ್ಞಾನಿಕವಾಗಿವೆ. ಪರಿಣಾಮ ಚರಂಡಿಯಲ್ಲಿ ಕೊಚ್ಚೆ ನೀರು ಮುಂದಕ್ಕೆ ಹರಿಯದೇ ಒಂದೆಡೆ ನಿಂತು ರಸ್ತೆಗಳ ಮೇಲೆಲ್ಲ ಹರಡಿ ಅವಾಂತರ ಸೃಷ್ಟಿಸುತ್ತಿದೆ.
ದುರ್ವಾಸನೆ ಬೀರುವುದರ ಜತೆಗೆ ಸೊಳ್ಳೆಗಳ ಹಾವಳಿ ಹೆಚ್ಚಿ ಜನರ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಕೂಡಲೇ ತೆರೆದ ಚರಂಡಿಗಳನ್ನು
ಸ್ವತ್ಛಗೊಳಿಸಬೇಕು ಎಂದು ಪ್ರಭಂಜನ್ ಕುಮಾರ್ ಆಗ್ರಹಿಸಿದ್ದಾರೆ.
ವಾರ್ಡ್‌ಗಳ ವಿವಿಧೆಡೆ ತಿಪ್ಪೆಗುಂಡಿಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಎರಡು ಮೂರು ವಾರಗಳು ಕಳೆದರೂ ತೆರವುಗೊಳಿಸದ ಹಿನ್ನೆಲೆಯಲ್ಲಿ ಹಂದಿಗಳ ಹಾವಳಿಯೂ ಅಧಿಕವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಸಾಂಕ್ರಾಮಿಕ ರೋಗ, ಬೀದಿ ನಾಯಿಗಳ ಹಾವಳಿಯೂ ಹೆಚ್ಚಾಗಿದೆ. ಈ ಕುರಿತು ಸಂಬಂಧಪಟ್ಟ ಪಾಲಿಕೆ ಅಧಿ ಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗುತ್ತಿಲ್ಲ.
ಇನ್ನು ವಾರ್ಡ್‌ನ ವಿವಿಧೆಡೆ ಒಳಚರಂಡಿಗಳ ಚೇಂಬರ್‌ಗಳು ಸೋರಿಕೆಯಾಗುತ್ತಿದ್ದು, ಕೊಚ್ಚೆ ನೀರು ಮನೆಗಳ ಮುಂದೆಲ್ಲಾ ಹರಡಿ ಅವಾಂತರ ಸೃಷ್ಟಿಸುತ್ತಿದೆ. ನಗರದ ವಿವಿಧೆಡೆ ಸಾರ್ವಜನಿಕ ಶೌಚಾಲಯಗಳ ಕೊರತೆ ಎದುರಾಗಿದೆ. ಹಳ್ಳಿಗಳಿಂದ ಬರುವ ಮಹಿಳೆಯರ ಪರಿಸ್ಥಿತಿ ಹೇಳತೀರದಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ. ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗೆ
ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಯಸಿಂಹ, ಕುಮಾರ್ ಸೇರಿದಂತೆ ವಾರ್ಡ್‌ನ ನೂರಾರು ನಿವಾಸಿಗಳು ಇದ್ದರು.
ಓದಿ :ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.