ಶಿಡ್ಲಘಟ್ಟ ನಗರದಲ್ಲಿ ಯುವಕನ ಭೀಕರ ಕೊಲೆ
Team Udayavani, Feb 7, 2021, 5:30 PM IST
ಶಿಡ್ಲಘಟ್ಟ: ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಹನುಮಂತಪುರ ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಡಾವಣೆಯೊಂದರಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಇಲ್ಲಿನ ಆಝಾದ್ ನಗರದ ಸೈಯದ್ ಫರ್ಹಾನ್(25) ಕೊಲೆಗೀಡಾದ ಯುವಕ. ನಗರದ ಹೊರವಲಯಕ್ಕೆ ಈತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.
ಈತ ಇತ್ತೀಚಿಗೆ ರೇಷ್ಮೆ ನೂಲು ಬಿಚ್ಚಾಣಿಕೆದಾರರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದ್ದು, ಕೊಲೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ,
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್‍ಐ ಲಿಯಾಖತ್ತುಲ್ಲಾ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಶ್ವಾನದಳ ತಜ್ಞರು ಮತ್ತು ಬೆರಳೆಚ್ಚು ತಜ್ಞರ ಮೂಲಕ ತಪಾಸಣೆ ನಡೆಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಸಾರ್ವಜನಿಕ ಆರೋಗ್ಯ ಕ್ಷೇತ್ರ ವಿಶ್ವಮಟ್ಟದಲ್ಲಿ ಸುಧಾರಿಸಬೇಕು: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.