ನೆರೂಲ್‌ ಶ್ರೀ ಬಾಲಾಜಿ ಮಂದಿರ: ಶ್ರೀವರಿ ಬ್ರಹ್ಮೋತ್ಸವಂ ಪ್ರಾರಂಭ

Team Udayavani, Feb 7, 2021, 6:57 PM IST

balaji

ಮುಂಬಯಿ: ನೆರೂಲ್‌ ಶ್ರೀ ಬಾಲಾಜಿ ಮಂದಿರದಲ್ಲಿ ಶ್ರೀವರಿ ಬ್ರಹ್ಮೋತ್ಸವಂ ಫೆ. 6ರಿಂದು ಪ್ರಾರಂಭಗೊಂಡಿದ್ದು, ಫೆ. 11ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಪ್ರತಿದಿನ ಬೆಳಗ್ಗೆ 6.30ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದ್ದು, ಪರಿಸರದಲ್ಲಿ ಪ್ರಸಿದ್ಧಿ ಪಡೆದು ವಿಜೃಂಭಣೆಯಿಂದ ಜರಗುವ ಉತ್ಸವ ಇದಾಗಿದೆ. 5 ದಿನಗಳ ಉತ್ಸವದ ಈ ಸಂದರ್ಭದಲ್ಲಿ ಬ್ರಹ್ಮದೇವರು ಭೂಮಿಗಿಳಿದು ಎಲ್ಲ ದೇವತೆಗಳ ಜತೆಗೆ ಶ್ರೀ ಬಾಲಾಜಿಯ ಉತ್ಸವವನ್ನು ವೀಕ್ಷಿಸುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ. ಆರಂಭದ ದಿನ ಗರುಡ ಲಾಂಛನದ ಧ್ವಜಾರೋಹಣ ನಡೆಯಿತು.

ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ಪೂಜೆಯೊಂದಿಗೆ ಸುಂದರವಾದ ಮೆರವಣಿಗೆ ವೇದಪಾರಾಯಣ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ಜರಗಲಿದೆ. ಜಾತ್ರೆಯ ಕೊನೆಯ ದಿನದಂದು ದ್ವಾದಶ ಆರಾಧನ ಮತ್ತು ಪುಷ್ಪಯಾಗಂ ಜರಗಲಿದ್ದು. ಅನಂತರ ಧ್ವಜ ಕೆಳಗಿಳಿಸಲಾಗುವುದು. ಈ ಬ್ರಹ್ಮೋತ್ಸವ ಪೋಷಕ ಸಂತರಾದ ಪಾರಂಪರಿಕ ಪುರೋಹಿತ ಪೇರಿಯ ಕೋವಿಲ್‌ ಕಲ್ವಿ ಅಪ್ಪನ್‌ ಶ್ರೀ ಸತಗೋಪ ರಾಮಾನುಜಾಜೀ ಸ್ವಾಮೀಜಿ ತಿರುಮಲ ತಿರುಪತಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಭಕ್ತಾದಿಗಳಿಂದ ಭಕ್ತಿಪೂರ್ವಕವಾಗಿ ಹೂ-ವಸ್ತ್ರ, ಪ್ರಸಾದ ಪೂಜಾ ಸಾಮಗ್ರಿಗಳನ್ನು ವಿನಮ್ರತೆಯಿಂದ ಸ್ವೀಕರಿಸಲಾಗುವುದು ಎಂದು ಶ್ರೀ ಲಕ್ಷ್ಮೀನಾರಾಯಣ ಸಭಾ ಅಧ್ಯಕ್ಷ ಗೋಪಾಲ ವೈ. ಶೆಟ್ಟಿ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪ.ಬಂಗಾಳದಲ್ಲಿ ಬದಲಾವಣೆ ತರಲು ಬಿಜೆಪಿಯಿಂದ ಮಾತ್ರ ಸಾಧ್ಯ: ಮಮತಾ ವಿರುದ್ಧ ಮೋದಿ ವಾಗ್ದಾಳಿ

ನೆರೂಲ್‌ ಶ್ರೀ ಲಕ್ಷ್ಮೀನರಸಿಂಹ ಸಭಾ 1999 ಎಪ್ರಿಲ್‌ ಅಕ್ಷಯ ತೃತೀಯದಂದು ಸ್ಥಾಪನೆಗೊಂಡಿದ್ದು ಇಲ್ಲಿ ಆಧ್ಯಾತ್ಮಿಕ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಗಳು ನಿರಂತರವಾಗಿ ಕ್ಷೇತ್ರದಲ್ಲಿ ನೋಂದಣಿಗೊಂಡ ಪಬ್ಲಿಕ್‌ ಟ್ರಸ್ಟಿನ ಮೂಲಕ ಜರಗುತ್ತಿದೆ. 1999ರಲ್ಲಿ ಭಗವಾನ್‌ ಶ್ರೀ ಬಾಲಾಜಿ ಮಂದಿರವನ್ನು ಹಾಗೂ ಮಂದಿರದ ಪರಿಸರದಲ್ಲಿ ಭಗವಾನ್‌ ಶ್ರೀ ಬಾಲಾಜಿ ಜತೆಗೆ ಪದ್ಮಾವತಿ ಶ್ರೀ ದೇವಿ, ಶ್ರೀ ವಿದ್ಯಾಗಣಪತಿ, ಶ್ರೀ ಲಕ್ಷ್ಮೀನರಸಿಂಹ ಶ್ರೀ ರಾಮಾನುಜ ಶ್ರೀ ಯೋಗ ಆಂಜನೇಯ ಮೊದಲಾದ ಸುಂದರವಾದ ಉಪ ಮಂದಿರಗಳನ್ನು ನಿರ್ಮಿಸಲಾಗಿದೆ. ಸುಂದರವಾದ ರಾಜಗೋಪುರ ದೊಂದಿಗೆ ಭಕ್ತಾದಿಗಳನ್ನು ತನ್ನೆಡೆಗೆ ಆಕರ್ಷಿಸುತ್ತಿದೆ. ಕೊರೊನಾ ಮಾರ್ಗಸೂಚಿಗಳಿಗೆ ಅನುಗು ಣವಾಗಿ ನಡೆಯಲಿರುವ ಈ ಉತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ಅನುಗ್ರಹಕ್ಕೆ ಪಾತ್ರರಾಗುವಂತೆ ಮಂದಿರದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.