ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಯೂತ್ ಕಾಂಗ್ರೆಸ್ ಗುರಿ: ಡಿ.ಕೆ ಶಿವಕುಮಾರ್


Team Udayavani, Feb 7, 2021, 8:10 PM IST

All our candidates who contested the Youth Congress elections are our boys: DK Shivakumar

ಬೆಂಗಳೂರು: ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದವರು, ಸೋತವರು, ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲರೂ ನಮ್ಮ ಹುಡುಗರೇ. ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು, ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಅವರ ಗುರಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಪಕ್ಷದಲ್ಲಿ ಆಂತರಿಕವಾಗಿ ಚುನಾವಣೆ ನಡೆದಿದೆ. ಅದರ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಗೆಲುವು, ಸೋಲು ನನಗೆ ಮುಖ್ಯ ಅಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಹೋರಾಟದ ಛಲ ತೋರಿರುವುದು ಬಹಳ ಮುಖ್ಯ. ಗೆದ್ದವರು ಹಾಗೂ ಸೋತವರನ್ನು ಸಮಾನಾಗಿ ತೆಗೆದುಕೊಂಡು ಹೋಗುವ ಕೆಲಸ ನಾನು ಮಾಡುತ್ತೇನೆ ಎಂದು ನುಡಿದರು.

ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಕಾಳಜಿ ಮುಖ್ಯ. ನಾವು ಎಲ್ಲರ ಶಕ್ತಿಯನ್ನು ಬಳಕೆ ಮಾಡಿಕೊಳ್ಳಬೇಕು. ಅದನ್ನು ಮಾಡುತ್ತೇವೆ ಎಂದ ಅವರು, ಈ ಫಲಿತಾಂಶದಿಂದ ಯಾವ ಗೊಂದಲವೂ ಸೃಷ್ಟಿ ಆಗಿಲ್ಲ. ಕೇಸಿನ ವಿಚಾರವಾಗಿ ಕೆಲವು ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಮೇಲೂ ಬಿಜೆಪಿ ಸ್ನೇಹಿತರು ಕೇಸು ಹಾಕಿಸಿದ್ದಾರೆ. ಹೈಕಮಾಂಡ್ ಯಾರನ್ನು ನೇಮಕ ಮಾಡುತ್ತದೆಯೋ ಅವರ ಜತೆಗೂ ಕೆಲಸ ಮಾಡುತ್ತೇನೆ. ಯಾರು ನೇಮಕ ಆಗುವುದಿಲ್ಲವೋ ಅವರನ್ನೂ ಸೇರಿಸಿಕೊಂಡು ಕೆಲಸ ಮಾಡುತ್ತೇನೆ. ಅವರಲ್ಲೂ ನಾಯಕತ್ವ ಗುಣಗಳಿವೆ. ನಾನು ಕೂಡಾ ವಿದ್ಯಾರ್ಥಿ ಚುನಾವಣೆಯಲ್ಲಿ ಮೊದಲು ಸೋತಿದ್ದೆ. ನಂತರ ಗೆದ್ದೆ ಎಂದರು.

ಸಚಿವರು ಮೀಸಲಾತಿಗೆ ಹೋರಾಟ ಮಾಡುತ್ತಿರುವುದು ಅಚ್ಚರಿ:

ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಚಾರದಲ್ಲಿ ಸರ್ಕಾರ ಮಾತನಾಡಬೇಕು. ನಾನು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಇಂತಹ ವಿಚಾರಗಳ ಬಗ್ಗೆ ಮಾತನಾಡುವ ಮುನ್ನ ಪಕ್ಷದ ಒಳಗೆ ಚರ್ಚೆ ಮಾಡಬೇಕು. ಪಕ್ಷದ ಅಭಿಪ್ರಾಯ ತೆಗೆದುಕೊಳ್ಳಬೇಕು. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರ ಅಲ್ಲ ಎಂದು ನುಡಿದರು.

ಈ ವಿಚಾರದಲ್ಲಿ ನನಗೆ ಆಘಾತ ಎನಿಸಿದ್ದು, ಸಚಿವರೇ ಬೀದಿಗಿಳಿದು ಹೋರಾಟ ಮಾಡುತ್ತಿರುವುದು. ಅವರ ಬಳಿಯೇ ಅಧಿಕಾರ ಇದೆ. ಅವರ ಕೈಯಲ್ಲಿ ಪೆನ್ನು, ಪೇಪರ್ ಇದೆ. ಆದರೂ ಅವರು ಬೀದಿಗೆ ಯಾಕೆ ಇಳಿದಿದ್ದಾರೋ ಗೊತ್ತಾಗುತ್ತಿಲ್ಲ . ಸ್ವಾಮೀಜಿಗಳು ಹೋರಾಟ ಮಾಡುವುದರಲ್ಲಿ ಒಂದು ಅರ್ಥ ಇದೆ. ಅವರಿಗೆ ಧ್ಯೇಯ, ಉದ್ದೇಶ ಇರುತ್ತದೆ. ಆದರೆ ಮಂತ್ರಿಗಳು ಹೋರಾಟ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದರು.

ಇದನ್ನೂ ಓದಿ:ಉತ್ತರಾಖಂಡ ಹಿಮಪಾತ; ಪ್ರವಾಹ ಪೀಡಿತರ ರಕ್ಷಣೆಗೆ ಕೇಂದ್ರ ಸಿದ್ಧ: ಅಮಿತ್ ಶಾ

ಸಭಾಪತಿ ಸ್ಥಾನಕ್ಕೆ ನಜೀರ್ ಪಕ್ಷದ ಅಭ್ಯರ್ಥಿ:

ವಿಧಾನ ಪರಿಷತ್ತಿನ ಸಭಾಪತಿ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ನಜೀರ್ ಅಹ್ಮದ್ ಅವರನ್ನು ಕಣಕ್ಕಿಳಿಸುತ್ತೇವೆ. ಯಾವ ಯಾವ ಪಕ್ಷದವರು ಏನು ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡೋಣ  ಎಂದರು.

ಉತ್ತರಾಖಂಡದ ಘಟನೆ ದುರಾದೃಷ್ಟಕರ:

ಉತ್ತರಾಖಂಡದಲ್ಲಿ ಹಿಮಪಾತದಿಂದ 150ಕ್ಕೂ ಹೆಚ್ಚು ಜನ ಕಾಣೆಯಾಗಿರುವುದು ದುರಾದೃಷ್ಟಕರ ಘಟನೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಕೆಲವು ಶವಗಳು ಸಿಕ್ಕಿರುವ ವರದಿ ಬರುತ್ತಿವೆ. ಆ ಘಟನೆಯಲ್ಲಿ ನೊಂದ ಜನರ ಜತೆ ಇಡೀ ಮಾನವ ಕುಲವೇ ನಿಲ್ಲಬೇಕು. ಭಗವಂತ ಒಳ್ಳೆಯದು ಮಾಡಲಿ, ಯಾರಿಗೂ ತೊಂದರೆಯಾಗುವುದು ಬೇಡ. ಕಾಣೆಯಾಗಿರುವವರು ಜೀವಂತವಾಗಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡೋಣ. ಕೇಂದ್ರ ಸರ್ಕಾರ ಕೂಡಲೇ ಸೇನೆ ಬಳಸಿ ಅಲ್ಲಿನ ಜನರಿಗೆ ರಕ್ಷಣೆ ನೀಡಬೇಕು ಎಂದು ನುಡಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.