ಮಾನನಷ್ಟ ಮೊಕದ್ದಮೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ಮನೇಕಾಗೆ ಕೋರ್ಟ್ ಸೂಚನೆ
Team Udayavani, Feb 7, 2021, 7:32 PM IST
ಮೈಸೂರು: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 1 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಮೈಸೂರಿನ ನಿವಾಸಿ, ಅನಿಮಲ್ ವೆಲ್ಫೆರ್ ಬೋರ್ಡ್ ಆಫ್ ಇಂಡಿಯಾದ ಸದಸ್ಯ ಡಾ.ಎಸ್.ಕೆ. ಮಿತ್ತಲ್, ತಮಗೆ ಮಾನಹಾನಿ ಮಾಡಲಾಗಿದೆ ಎಂದು ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಶನಿವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು, ಮನೇಕಾ ಗಾಂಧಿವರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದರು.
ಏನಿದು ಪ್ರಕರಣ?:
ಮಿತ್ತಲ್ ಅನಿಮಲ್ ವೆಲ್ಫೆರ್ ಬೋರ್ಡ್ ಆಫ್ ಇಂಡಿಯಾದ ಸದಸ್ಯರಾಗಿದ್ದು, ಕರ್ನಾಟಕ ಮತ್ತು ಕೇರಳ ರಾಜ್ಯ ಉಸ್ತುವಾರಿ ಹೊತ್ತಿದ್ದರು. ಈ ವೇಳೆ ಕಸಾಯಿಖಾನೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಮಿತ್ತಲ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಮನೇಕಾ ಗಾಂಧಿ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ “ಮಂಡಳಿಯ ಸದಸ್ಯರ ವಿರುದ್ಧ ಆರೋಪ ಮಾಡಿ’ ಅಂದಿನ ಕೇಂದ್ರದ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್ ಅವರಿಗೆ ಪತ್ರವನ್ನೂ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಎಸ್.ಕೆ.ಮಿತ್ತಲ್, ಮನೇಕಾ ಅವರಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದರು. ಆದರೂ ಇದಕ್ಕೆ ಕಿವಿಗೊಡದೆ, ಮನೇಕಾ ಆರೋಪ ಮಾಡುವುದನ್ನು ಮುಂದುವರಿಸಿದ್ದರು.
ಇದನ್ನೂ ಓದಿ:ಪ.ಬಂಗಾಳದಲ್ಲಿ ಬದಲಾವಣೆ ತರಲು ಬಿಜೆಪಿಯಿಂದ ಮಾತ್ರ ಸಾಧ್ಯ: ಮಮತಾ ವಿರುದ್ಧ ಮೋದಿ ವಾಗ್ದಾಳಿ
ಇದರಿಂದ ಬೇಸರಗೊಂಡ ಮಿತ್ತಲ್ ಅವರು ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ವಜಾ ಮಾಡಿತ್ತು. ಮತ್ತೆ ಒಂದನೇ ಜಿಲ್ಲಾ ಮತು ¤ಸತ್ರ ನ್ಯಾಯಾಲಯದ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.