ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಬಿಜೆಪಿ ಸಮಿತಿಗಿಲ್ಲ: ಈಶ್ವರಪ್ಪ


Team Udayavani, Feb 8, 2021, 2:53 PM IST

k-s-eshwarappa

ಶಿವಮೊಗ್ಗ: ಶಾಸಕ ಬಸನಗೌಡ ಯತ್ನಾಳ್ ಮತ್ತೆ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ. ಸಿಎಂ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಆದರೆ ರಾಜ್ಯ ಬಿಜೆಪಿ ಸಮಿತಿಗೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗಳು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಗಮನಕ್ಕೂ ಬಂದಿದೆ. ಅವರು ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ಈ ವಿಷಯ ತಂದಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಯತ್ನಾಳ್ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಡಬೇಕಿದೆ ಎಂದರು.

ಕುರುಬ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಕುರುಬರು ಒಟ್ಟಿಗೆ ಸೇರಿದ್ದು ಇದೇ ಮೊದಲ ಬಾರಿ. ಫೆ. 7 ರಾಜ್ಯದ ಕುರುಬರ ಪಾಲಿಗೆ ಐತಿಹಾಸಿಕ ದಿನ. ನಿರಂಜನಾನಂದ ಪುರ ಶ್ರೀಗಳು, ಈಶ್ವರಾನಂದಪುರಿ ಶ್ರೀಗಳ ಪಾದಯಾತ್ರೆ ಅಭೂತಪೂರ್ವವಾಗಿತ್ತು ಎಂದರು.

ರಾಜ್ಯದಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಿಗಬೇಕು. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಇದೆ. ಇದು ರಾಜ್ಯದ ಎಲ್ಲ ಜಿಲ್ಲೆಯ ಕುರುಬರಿಗೆ ಸಿಗಬೇಕು. ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು‌ ಎಂದರು.

ಸಮಾವೇಶಕ್ಕೆ ಪ್ರತಿಯೊಬ್ಬರೂ ತಮ್ಮ ಖರ್ಚಿನಲ್ಲಿ ಬಂದಿದ್ದಾರೆ. ಊಟದ ವ್ಯವಸ್ಥೆಯನ್ನು ದಾನಿಗಳ ನೆರವಿನಿಂದ ಮಾಡಿದ್ದೇವೆ. ಸಮಾವೇಶದ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದ ಸಚಿವ ಈಶ್ವರಪ್ಪ,  ನಿರಂಜನಾನಂದಪುರಿ ಶ್ರೀಗಳು ಹಾಗೂ ಶ್ರೀ ಈಶ್ವರಾನಂದ ಪುರಿಗಳೇ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಸಮಾವೇಶಕ್ಕೆ ಆಹ್ವಾನಿಸಿದ್ದರು. ನಾನು ಕರೆ ಮಾಡಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದೆ. ಆದರೆ‌ ಮೊದಲು ನನ್ನನ್ನು ಸಮಾವೇಶಕ್ಕೆ ಕರೆದಿಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಬಳಿಕ ಈ ಹೋರಾಟದ ಹಿಂದೆ ಆರ್ ಎಸ್ಎಸ್ ಇದೆ ಹಾಗಾಗಿ ಹೋಗುವುದಿಲ್ಲ ಎಂದಿದ್ದರು. ಸಿದ್ದರಾಮಯ್ಯ ಎಷ್ಟು ಸುಳ್ಳು ಹೇಳುತ್ತಾರೆ ಎಂಬುದಕ್ಕೆ ಇದು‌ ನಿದರ್ಶನ ಎಂದರು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.