ಸರ್ಕಾರದಿಂದ ರೈತ-ಕಾರ್ಮಿಕರ ಕಡೆಗಣನೆ
ಗುಡಿಹಳ್ಳಿಯಲ್ಲಿ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಗ್ರಾಮ ಶಾಖೆ ಉದ್ಘಾಟನೆ ನಡೆಯಿತು.
Team Udayavani, Feb 8, 2021, 3:13 PM IST
ದಾವಣಗೆರೆ: ಸರ್ಕಾರಗಳು ರೈತ-ಕಾರ್ಮಿಕ ಕಾನೂನು ತಿದ್ದುಪಡಿಯ ಮೂಲಕ ರೈತ-ಕಾರ್ಮಿಕರ ಜೀವನವನ್ನೇ ಸಮಾ ಧಿ ಕಟ್ಟಲು ಹೊರಟಿವೆ ಎಂದು ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆವರಗೆರೆ ಎಚ್.ಜಿ. ಉಮೇಶ್ ಆರೋಪಿಸಿದರು.
ನ್ಯಾಮತಿ ತಾಲೂಕಿನ ಗುಡಿಹಳ್ಳಿಯಲ್ಲಿ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಶ್ರಮದ ಪ್ರತಿಫಲದಿಂದ ಕೂಡಿ ಕಟ್ಟಿರುವ ಹಣ ಇತರರ ಪಾಲಾಗುವ ಹಂತದಲ್ಲಿದೆ ಎಂದರು.
ಹಲವಾರು ವರ್ಷಗಳಿಂದ ಸಲ್ಲಿಸಿರುವ ಅರ್ಜಿಗಳನ್ನು ಕಲ್ಯಾಣ ಮಂಡಳಿ ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದೆ. ಕಾರ್ಮಿಕ ಇಲಾಖೆಯ ದ್ವಂದ್ವ ನೀತಿ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಾಗಿದೆ ಎಂದರು. ಪಿ.ಕೆ. ಲಿಂಗರಾಜ್, ಸಂಘದ ಜಿಲ್ಲಾಧ್ಯಕ್ಷ ವಿ. ಲಕ್ಷ್ಮಣ, ಉಪಾಧ್ಯಕ್ಷ ಭೀಮಾರೆಡ್ಡಿ, ಗ್ರಾಮ ಶಾಖೆಯ ಪದಾಧಿ ಕಾರಿಗಳಾದ ಎ.ಕೆ. ರಾಜಪ್ಪ, ಹನುಮಂತಪ್ಪ, ರವಿಕುಮಾರ್, ಭರತ್, ನಿಂಗಪ್ಪ, ಡಿ. ಮೈಲಾರಪ್ಪ, ನಿಂಗಪ್ಪ, ನರಸಿಂಹ, ವೀರಣ್ಣ ಗೌಡ, ಲೋಕೇಶ್, ಫಯಾಜ್ ಅಹ್ಮದ್ ಇದ್ದರು. ಹನುಮಂತಪ್ಪ ಸ್ವಾಗತಿಸಿದರು. ಶಿಕ್ಷಕ ರಾಜಪ್ಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.