ನಿರಂತರ ಓದಿನಿಂದ ಆತ್ಮ ವಿಶ್ವಾ ಸ
ತರಬೇತಿ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ| ಸತೀಶ್ ಪಾಟೀಲ್ ಉದ್ಘಾಟಿಸಿದರು
Team Udayavani, Feb 8, 2021, 5:07 PM IST
ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗದರ್ಶನ ನೀಡುವ ಮೂಲಕ ಓದಿನಲ್ಲಿ ಆಸಕ್ತಿ ಬೆಳೆಸಬೇಕು ಎಂದು ಕೆಎಎಸ್ ತರಬೇತುದಾರ ಎಸ್. ಕೆ. ಕಿಶೋರಕುಮಾರ ತಿಳಿಸಿದರು.
ಪಟ್ಟಣದ ಜಿವಿಪಿಪಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಗರಿಬೊಮ್ಮನಹಳ್ಳಿಯ ಏಕದಂತ ಗ್ರೂಪ್ ಸಹಯೋಗದಲ್ಲಿ ನಡೆದ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ನಿರಂತರ ಓದುವುದು ಅತ್ಯಗತ್ಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಓದುವ ಸಾಮರ್ಥ್ಯವಿದ್ದರೂ ಉತ್ತಮ ತರಬೇತಿ ಇಲ್ಲದಿರುವುದರಿಂದ ಯಶಸ್ಸು ಪಡೆಯುವುದು ಕಷ್ಟವಾಗುತ್ತಿದೆ. ಉತ್ತಮ ಪುಸ್ತಕಗಳನ್ನು ಆಯ್ದುಕೊಂಡು ನಿರಂತರ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿ ವೀರೇಶ್ ಬಡಿಗೇರ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಆತ್ಮವಿಶ್ವಾಸದಿಂದ ಎದುರಿಸುವ ನಿಟ್ಟಿನಲ್ಲಿ ಉತ್ತಮ ತರಬೇತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ ಹಾಗೂ
ಉಪನ್ಯಾಸಕರುಗಳ ಸಹಕಾರ ಪಡೆದು ಯಶಸ್ವಿಯತ್ತ ಸಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಸತೀಶ್ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯಗಳ ಪುಸ್ತಕಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ವಿದ್ಯಾಭ್ಯಾಸದ ಸಮಯ ಅತ್ಯಮೂಲ್ಯ ಎಂಬುದನ್ನು ಅರಿತುಕೊಳ್ಳಬೇಕು. ಚಂಚಲತೆಯನ್ನು ದೂರವಿಟ್ಟು ಏಕಾಗ್ರತೆಯಿಂದ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ನಿರಂತರ ಓದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸ್ಪರ್ದಾತ್ಮಕ ಪರೀಕ್ಷೆಗಳ ಬಗ್ಗೆ ಭಯಬೇಡ ಎಂದು ತಿಳಿಸಿದರು.
ಏಕದಂತ ಗ್ರೂಪ್‌ನ ಎಂಪಿಎಂ ಮಂಜುನಾಥ ಮಾತನಾಡಿದರು. ಉಪನ್ಯಾಸಕರಾದ ಡಾ| ಮಲ್ಲಿಕಾರ್ಜುನ, ಡಾ| ಹರಾಳು ಬುಳ್ಳಪ್ಪ, ವರುಣ್ ಪಾಟೀಲ್ ಇದ್ದರು. ಸತ್ಯನಾರಾಯಣ, ಮಂಜುನಾಯ್ಕ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.