ಉತ್ತಮ ಫಲಿತಾಂಶಕ್ಕೆ ಸಹಕರಿಸಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಕರೆ
Team Udayavani, Feb 8, 2021, 5:37 PM IST
ಬಳ್ಳಾರಿ: ಜಿಲ್ಲೆಯ ಫಲಿತಾಂಶದ ಸುಧಾರಣೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಈ ಬಾರಿಯ ಎಸ್ಸೆಸ್ಸೆಲ್ಸಿಯ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಅತ್ಯುತ್ತಮ ಸ್ಥಾನಕ್ಕೇರಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಹೇಳಿದರು.
ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿ ಸಿದಂತೆ ಶನಿವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೂ 100 ದಿನಗಳು ಉಳಿದಿವೆ. ಈ ಅವಧಿ ಯನ್ನು ಸಮರ್ಪಕವಾಗಿ ಬಳಸಿಕೊಂಡು ಫಲಿತಾಂಶ ಸುಧಾರಣೆಗಾಗಿ ಶಾಲಾವಾರು ಮತ್ತು ತಾಲೂಕುವಾರು ಹಾಗೂ ಜಿಲ್ಲಾವಾರು
ಕ್ರಿಯಾಯೋಜನೆಯನ್ನು ತಯಾರಿಸಬೇಕು. ಅದರಂತೆ ಕ್ರಮವಹಿಸುವುದರ ಮೂಲಕ ಜಿಲ್ಲೆಯ ಫಲಿತಾಂಶ ಅತ್ಯುತ್ತಮ ಸ್ಥಾನಕ್ಕೇರಲು ಶ್ರಮಿಸಬೇಕು ಎಂದರು.
“ಬಳ್ಳಾರಿ ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯ ಹಣೆಬರಹವನ್ನು ಬದಲಾಯಿಸುವ ಶಕ್ತಿ ಜಿಲ್ಲೆಯಶಿಕ್ಷಕರಿಗೆ ಇದೆ’ ಎಂಬ ಘೋಷವಾಕ್ಯದ ಮೂಲಕ
ಜಿಲ್ಲೆಯ ಫಲಿತಾಂಶವನ್ನು ರಾಜ್ಯದಲ್ಲಿ ಅತ್ಯುತ್ತಮ ಸ್ಥಾನಕ್ಕೇರಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಎಲ್ಲ ಅಧಿ ಕಾರಿಗಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಚೇರಿಯ ಸಹ ನಿರ್ದೇಶಕ(ಪರೀಕ್ಷೆಗಳು) ಅಮಿತಾ ಯರಗೋಳಕರ್ ಅವರು ಸಭೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ಜಿಲ್ಲೆಗೆ ಸಂದರ್ಶನ ನೀಡಿ ಫಲಿತಾಂಶ ಸುಧಾರಣೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಮರ್ಪಕ ಮಾರ್ಗದರ್ಶನವನ್ನು ನೀಡುತ್ತಿರುವುದಾಗಿ ಹಾಗೂ ಶಾಲೆಗಳಿಗೆ ಸಂದರ್ಶನ ನೀಡಿ ಕಲಿಕೆ ಗುಣಮಟ್ಟ ಪರಿಶೀಲಿಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲಾಗುತ್ತಿದೆ ಎಂದವರು ವಿವರಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಪ್ಪ ಮಾತನಾಡಿ, ಬಳ್ಳಾರಿ ಜಿಪಂ ಸಿಇಒ ಕೆ.ಆರ್. ನಂದಿನಿ ಅವರ ಸೂಚನೆ ಮೇರೆಗೆ ಫಲಿತಾಂಶಸುಧಾರಣೆಗೆ 100 ದಿನಗಳಲ್ಲಿ ವಿಷಯವಾರು ಶಿಕ್ಷಕರು, ಮುಖ್ಯ ಗುರುಗಳು, ಅ ಧಿಕಾರಿಗಳು ಕೈಗೊಳ್ಳಬಹುದಾದ ಅಗತ್ಯ ಕಾರ್ಯಗಳ ಕುರಿತು ಕ್ರಿಯಾಯೋಜನೆ ಸಿದ್ಧಪಡಿಸಿ ಫೆ. 10ರೊಳಗೆ ಸಲ್ಲಿಸಲು ತಿಳಿಸಿದರು.
ಡಯಟ್ ಉಪನಿರ್ದೇಶಕ (ಅಭಿವೃದ್ಧಿ) ಅವರು ಫಲಿತಾಂಶ ಸುಧಾರಣೆಗೆ ಪೂರಕವಾಗಿ ತರಬೇತಿ ಕಾರ್ಯಗಳನ್ನು ನಡೆಸುತ್ತಿರುವುದಾಗಿ
ಮತ್ತು ಶಾಲೆಗಳಿಗೆ ಸಂದರ್ಶನ ನೀಡಿ ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಅಕ್ಷರ ದಾಸೋಹ ಅ ಧಿಕಾರಿಗಳು, ಬಿಆರ್‌ಸಿಗಳು, ಎಸ್ ಎಸ್‌ಎಲ್‌ಸಿ ನೋಡಲ್ ಅಧಿ ಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಅನುದಾನಿತ ಮುಖ್ಯಶಿಕ್ಷಕರುಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.