ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
Team Udayavani, Feb 8, 2021, 7:02 PM IST
ತೆಕ್ಕಟ್ಟೆ : ಕೋಟ ಠಾಣಾ ವ್ಯಾಪ್ತಿಯ ಕೆದೂರು ಗ್ರಾಮದಲ್ಲಿ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದ್ದು ಉಡುಪಿ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇದರ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ (ಅಸಾಂಸ್ಥಿಕ ) ಕಪಿಲಾ ಇವರು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಸಂಬಂಧಿಯಾಗಿರುವ 27 ವರ್ಷ ಪ್ರಾಯದ ಯುವಕ ಮದುವೆ ಆಗುವುದಾಗಿ ನಂಬಿಸಿ ಮದುವೆ ಮುಂಚೆ ದೈಹಿಕ ಹಿಂಸೆ ನೀಡಿರುದಾಗಿ ತಿಳಿಸಿದ್ದಾಳೆ. ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸುವಂತೆ ಕಾನೂನು ಪರಿವೀಕ್ಷಣಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಮಹಿಳಾ ಠಾಣಾ ನಿರೀಕ್ಷಕ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕಂಗನಾ ರಾಣಾವತ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಪಾಟೀಲ್
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಕೋಟ ಪೊಲೀಸ್ ಠಾಣೆ ಸಹಾಯಕ ಉಪ ನಿರೀಕ್ಷಕಿ ಮುಕ್ತಾ ಅವರು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಹಾಗೂ ಸ್ಥಳೀಯರಿಗೆ ಪೋಕ್ಸೋ ಮತ್ತು ಬಾಲ್ಯ ವಿವಾಹ ಪದ್ಧತಿ ಬಗ್ಗೆ ಅರಿವು ಮೂಡಿಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.