ಜೋ ಬೈಡೆನ್ ಜೊತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ದಿಯ ಕುರಿತು ಚರ್ಚೆ
Team Udayavani, Feb 9, 2021, 9:01 AM IST
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆ, ಕೋವಿಡ್-19, ಆರ್ಥಿಕತೆ, ಹವಾಮಾನ ಬದಲಾವಣೆ ವಿಚಾರದಲ್ಲಿ ಜತೆಯಾಗಿ ಕೆಲಸ ಮಾಡುವುದು, ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ವಿಚಾರಗಳ ಕುರಿತಾಗಿ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ.
ಜೋ ಬೈಡೆನ್ ಅವರು ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ:ಶಶಿಕಲಾ ಹಿಂದಿರುಗುವುದು ಎಐಎಡಿಎಂಕೆ ಕಾರ್ಯಕರ್ತರಿಗೂ ಬೇಕಿಲ್ಲ
ಈ ಬಗ್ಗೆ ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಅಮೆರಿಕದ ನೂತನ ಅಧ್ಯಕ್ಷರಿಗೆ ಶುಭ ಕೋರಿದ್ದೇನೆ. ಪ್ರಾದೇಶಿಕ ಸಮಸ್ಯೆಗಳ ಹಾಗೂ ಆದ್ಯತೆಯ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹವಾಮಾನ ಬದಲಾವಣೆಗೆ ಸಂಬಂಧಿಸಿ ಇನ್ನಷ್ಟು ಸಹಕಾರ ನೀಡಲು ಸಮ್ಮತಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.
Spoke to @POTUS @JoeBiden and conveyed my best wishes for his success. We discussed regional issues and our shared priorities. We also agreed to further our co-operation against climate change.
— Narendra Modi (@narendramodi) February 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.