ವಾಲ್ಮೀಕಿ ಸಮಾಜ ಅಭ್ಯುದಯವೇ ಗುರಿ


Team Udayavani, Feb 9, 2021, 2:16 PM IST

Valmiki’s goal is social prosperity

ಹರಿಹರ: ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ಬೆಳಿಗ್ಗೆ ಶ್ರೀ ವಾಲ್ಮೀಕಿ ಧರ್ಮ ಧ್ವಜಾರೋಹಣ ನೆರವೇರಿಸುವ ಮೂಲಕ ದೊಡ್ಡೇರಿ ಗುರು ದತ್ತಾವದೂತ ಆಶ್ರಮದ ಉಪಾಸಿ ಮಲ್ಲಪ್ಪ ಶ್ರೀಗಳು ಮೂರನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಸಾನಿಧ್ಯ ವಹಿಸಿದ್ದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಬುಡಕಟ್ಟು ಸಂಸ್ಕೃತಿ ಸೇರಿದಂತೆ ಸಮುದಾಯದ ಪರಂಪರೆ, ಕಲಾ ವೈಭವವನ್ನು ಅನಾವರಣಗೊಳಿಸುವುದರ ಜೊತೆಗೆ ಸಾಹಿತ್ಯ, ಸಂಘಟನೆ, ಹೋರಾಟಗಳ ಬಗ್ಗೆ ಚಿಂತನೆ ನಡೆಸಲು ಪ್ರತಿ ವರ್ಷ ಜಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ಹಿಂದುಳಿದ ವಾಲ್ಮೀಕಿ ಸಮಾಜವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ,ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು  ಮುಖ್ಯವಾಗಿ ರಾಜಕೀಯವಾಗಿಜಾಗೃತಗೊಳಿಸಿ, ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರೀಮಠ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು. ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಬೆಳಿಗ್ಗೆ 8ಕ್ಕೆ ರಾಜನಹಳ್ಳಿ  ಗ್ರಾಮದಿಂದ ಶ್ರೀಮಠದವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಬೃಹತ್‌ ಮೆರವಣಿಗೆ ನಡೆಸಲಾಯಿತು. ನೂರಾರು ಜನರು ಶ್ರೀಮಠದವರೆಗೆ ವಾಲ್ಮೀಕಿ ವಿಜಯ ಘೋಷಗಳನ್ನು ಕೂಗುತ್ತಾ ಕಾಲ್ನಡಿಗೆಯಲ್ಲಿ ಸಾಗಿದರು. ನಂತರ ನಡೆದ ಸಾಮೂಹಿಕ ವಿವಾಹ ಮಹೋತ್ಸವವನ್ನುವಿಧಾನಸಭೆಯ ಮಾಜಿ ಸಭಾಪತಿ  ಕೆ.ಬಿ. ಕೋಳಿವಾಡ ಉದ್ಘಾಟಿಸಿದರು. ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಸೇರಿದಂತೆ ಗಣ್ಯರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಧು-ವರರಿಗೆ ಆಶೀರ್ವದಿಸಿ ಶುಭ ಕೋರಿದರು. ಶಾಸಕ ಎಸ್‌.ರಾಮಪ್ಪ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಮಾಜಿ ಶಾಸಕ ಎಚ್‌.ಪಿ. ರಾಜೇಶ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಡಿ.ಜಿ. ಶಾಂತನಗೌಡ,ಶಿವಮೂರ್ತಿ ನಾಯ್ಕ, ಬಸವರಾಜ ನಾಯಕ್‌ ಮತ್ತಿತರರು  ಇದ್ದರು. ಬಳಿಕ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು, ತಾಲೂಕಿನ ಎಲ್ಲಾ ಸಮಾಜಗಳ ಅಧ್ಯಕ್ಷರು, ರಾಜನಹಳ್ಳಿ ಗ್ರಾಪಂ ಜನಪ್ರತಿನಿಧಿ ಗಳು ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳನ್ನು ಗೌರವಿಸಲಾಯಿತು.

ಇದನ್ನೂ ಓದಿ:ಸುವರ್ಣಾವತಿ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ನಿರ್ಧಾರ

ಎಲ್ಲವೂ ಅಚ್ಚುಕಟ್ಟು

ಮೊದಲ ದಿನದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಭಾಗವಹಿಸಿದ್ದರು. 50ಕ್ಕಿಂತ ಹೆಚ್ಚು ಊಟದ ಕೌಂಟರ್‌ಗಳಲ್ಲಿ ನಿಂತು ಗೋಧಿ ಪಾಯಸ, ರೊಟ್ಟಿ, ಪಲ್ಯ, ಚಟ್ನಿಪುಡಿ, ಅನ್ನ ಸಾಂಬಾರ್‌ ಪಡೆದು ಸೇವಿಸಿದರು. ಮಹಿಳೆಯರು, ಪೊಲೀಸ್‌ ಸಿಬ್ಬಂದಿಗಳಿಗೆ ಪ್ರತ್ಯೇಕ ಕೌಂಟರ್‌ ತೆರೆಯಲಾಗಿತ್ತು. ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಮಠದ ಆವರಣದಲ್ಲಿ ತೆರೆದಿರುವ 30 ಕೌಂಟರ್‌ಗಳಲ್ಲಿ ವಿವಿಧ ಇಲಾಖೆಯ ಅ ಧಿಕಾರಿಸಿಬ್ಬಂದಿ ಉಪಸ್ಥಿತರಿದ್ದರು.

ಆಸಕ್ತರಿಗೆಸಂಬಂಧಿ ತ ವಿವರಣಾ ಪತ್ರ ವಿತರಿಸಿ  ಮಾಹಿತಿ ನೀಡುತ್ತಿದ್ದರು. ಪೀಠದ ಆವರಣದಲ್ಲಿ ಅಲ್ಲಲ್ಲಿ 6-7 ಬೃಹತ್‌ ಶೌಚಾಲಯ, ಸ್ನಾನಗƒಹ ನಿರ್ಮಿಸಿರುವುದು ಸೇರಿದಂತೆ ಈ ಸಲದ ಜಾತ್ರೆಯಲಲ್ಲಿ ಬಂದಂತ ಜನರಿಗೆ ಅಗತ್ಯ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಲಾಗಿತ್ತು. ಪೊಲೀಸ್‌, ಗೃಹರಕ್ಷಕ ದಳದವರು ಬಂದೋಬಸ್ತ್ ನಿರ್ವಹಿಸಿದರೆ,ಸಮಾಜದ ಯುವಕರು ಸ್ವಯಂಸೇವಕರಾಗಿ ಕಾರ್ಯ  ನಿರ್ವಹಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.