ದೋಣಿಮಡಗು: ಮರು ಚುನಾವಣೆಗೆ ಕೈ ಪಟ್ಟು

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಒಂದು ಮತದಿಂದ ಪರಾಭವ! ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ

Team Udayavani, Feb 9, 2021, 2:15 PM IST

Donimadagu GP

ಬಂಗಾರಪೇಟೆ: ತಾಲೂಕಿನ ದೋಣಿಮಡಗು ಗ್ರಾಪಂನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಒಂದು ಮತದಿಂದ ಪರಾಭವಗೊಂಡಿದ್ದರಿಂದ ಮರು ಚುನಾವಣೆ ನಡೆಸಲು ಕಾಂಗ್ರೆಸ್‌ ಬೆಂಬಲಿಗರು ಪಟ್ಟುಹಿಡಿದಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾದ ಘಟನೆ ನಡೆಯಿತು.

ದೋಣಿಮಡಗು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಣೆಗೂ ಮೊದಲೇ ಕಾಂಗ್ರೆಸ್‌ ನಾಯಕರು ಸದಸ್ಯರನ್ನು ಪ್ರವಾಸಕ್ಕೆ ಕಳುಹಿಸಿ ಎಲ್ಲರ ಗಮನ ಸೆಳೆದಿದ್ದರು. ಇಲ್ಲಿಯೂ ಕಳೆದ ಬಾರಿ ಕಾಂಗ್ರೆಸ್‌ ವಶದಲ್ಲಿದ್ದ ಗ್ರಾಪಂನ್ನು ಬಿಜೆಪಿ ವಶ ಮಾಡಿಕೊಳ್ಳಲು ಮಾಜಿ ಶಾಸಕ ವೆಂಕಟಮುನಿಯಪ್ಪ ಮತ್ತು ಜಿಪಂ ಸದಸ್ಯ ಬಿ.ವಿ.ಮಹೇಶ್‌ ಕಾರ್ಯತಂತ್ರ ರೂಪಿಸಿದ್ದರು.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಬಿಜೆಪಿ ಬೆಂಬಲಿಗರಾಗಿ ಮಂಜುಳಾ ಮಹಾದೇವ್‌ ಮತ್ತು ಕಾಂಗ್ರೆಸ್‌ ಬೆಂಬಲಿತರಾಗಿ ಮಂಜುಳಾ ಜಯಣ್ಣ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪ್ರಿಯ ಮತ್ತು ವೆಂಕಟಲಕ್ಷ್ಮಮ್ಮ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಒಂದು ಮತದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದರೂ ಕಾಂಗ್ರೆಸ್‌ ಮುಖಂಡರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮೊದಲು ಮರು ಮತಗಳ ಎಣಿಕೆಗೆ ಆಗ್ರಹಿಸಿದರು. ಅದರಂತೆ ಮರು ಎಣಿಕೆ ಮಾಡಿದಾಗ ಫ‌ಲಿತಾಂಶದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಇದಕ್ಕೆ ಒಪ್ಪದ ಕಾಂಗ್ರೆಸ್‌ ಮುಖಂಡರು ಅಸಲಿಗೆ ಚುನಾವಣೆ ಸರಿಯಾಗಿ ನಡೆದಿಲ್ಲ. ಮರು ಚುನಾವಣೆ ನಡೆಸಬೇಕೆಂದು ಪಟ್ಟುಹಿಡಿದು ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದರು.

ಇದನ್ನೂ ಓದಿ :ಹಳೇ ವೈಷಮ್ಯ: ತಡರಾತ್ರಿ ಜೋಡಿ ಕೊಲೆ

ಇದಕ್ಕೆ ಪ್ರತಿರೋಧವಾಗಿ ಬಿಜೆಪಿ ಬೆಂಬಲಿತರು ಚುನಾವಣೆ ಸಕ್ರಮವಾಗಿಯೇ ನಡೆದಿದೆ ಸದಸ್ಯರು ತಮ್ಮ ಪರವಾಗಿ ತೀರ್ಪನ್ನು ನೀಡಿದ್ದಾರೆ ಅದನ್ನು ಅಂಗೀಕರಿಸಿ ಘೋಷಣೆ ಮಾಡಬೇಕೆಂದು ಚುನಾವಣೆ ಅಧಿಕಾರಿಯಾಗಿದ್ದ ಬಿಇಒ  ಬಿ.ಪಿ.ಕೆಂಪಯ್ಯ ಮೇಲೆ ಒತ್ತಡ ಹೇರಿದಾಗ ಮಾತಿನ ಚಕಮಕಿ ನಡೆದಿದ್ದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಯಿತು. ಕೊನೆಗೆ ಚುನಾವಣಾಧಿಕಾರಿ ಬಿ.ಪಿ.ಕೆಂಪಯ್ಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಂಜುಳಾ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ವೆಂಕಟಲಕ್ಷ್ಮಮ್ಮ ಆಯ್ಕೆಯನ್ನು ಘೋಷಣೆ ಮಾಡಿ ಗೊಂದಲಗಳಿಗೆ ತೆರೆ ಎಳೆದರು.

ಟಾಪ್ ನ್ಯೂಸ್

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.