ವಿಟ್ಲ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
Team Udayavani, Feb 9, 2021, 5:38 PM IST
ವಿಟ್ಲ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಯತಪ್ಪಿ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಪುಣಚ ಗ್ರಾಮದ ಪೊಯ್ಯಮೂಲೆ ನಿವಾಸಿ ಮಹಾಲಿಂಗ (63 ) ಮೃತಪಟ್ಟ ವ್ಯಕ್ತಿ.
ಫೆ.8ರಂದು ಮಹಾಲಿಂಗ ಅವರು ಪೊಯ್ಯಮೂಲೆ ಎಂಬಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಫೆ.9ರಂದು ಮುಂಜಾನೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಇಳಕಲ್ಲದಲ್ಲಿ ಬೃಹತ್ ಕಟ್ಟಡಕ್ಕೆ ಬೆಂಕಿ: 12 ಕೋಟಿ ಆಸ್ತಿಪಾಸ್ತಿ ಹಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.