ಜಿಲ್ಲೆ ವಿಭಜನೆ ಖಂಡಿಸಿ ಕಾನೂನು ಹೋರಾಟ
ಪ್ರತ್ಯೇಕ ವಿಜಯನಗರ ಜಿಲ್ಲೆ ಘೋಷಣೆ ವಿರೋಧಿಸಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ
Team Udayavani, Feb 10, 2021, 3:55 PM IST
ಬಳ್ಳಾರಿ: ಜಿಲ್ಲೆಯ ವಿಭಜನೆಗೆ ಆಕ್ಷೇಪಣೆ ಸಲ್ಲಿಸಿದರೂ ಅಧಿಕಾರ ದುರುಪಯೋಗ ಪಡಿಸಿಕೊಂಡು ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನಾಗಿ ಘೋಷಿಸಿ ಸರ್ಕಾರ ಅ ಧಿಕೃತಗೊಳಿಸಿದೆ. ಆದರೂ ನಮ್ಮ ಹೋರಾಟ ಇಲ್ಲಿಗೆ ನಿಲ್ಲದೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಕುಡತಿನಿ ಶ್ರೀನಿವಾಸ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯನ್ನು ಅಖಂಡವಾಗಿ ಮುಂದುವರೆಸಬೇಕು ಎಂದು ಕಳೆದ ಒಂದು ವರ್ಷದಿಂದ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್ ಸೇರಿ ಸರ್ಕಾರಕ್ಕೆ ಸಾವಿರಾರು ಆಕ್ಷೇಪಣೆಗಳನ್ನು ಸಹ ಸಲ್ಲಿಸಿದ್ದೇವೆ. ಆದರೂ, ನಮ್ಮ ಆಕ್ಷೇಪಣೆಗಳನ್ನು ಸಮರ್ಪಕವಾಗಿ ಪರಿಗಣಿಸದ ರಾಜ್ಯ ಸರ್ಕಾರ ಅ ಕಾರವನ್ನು ದುರುಪಯೋಗ ಪಡಿಸಿಕೊಂಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ, ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನು ಘೋಷಿಸಿ ಅಧಿಕೃತಗೊಳಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದ್ದು, ಮದ್ರಾಸ್ ಆಡಳಿತ ಅವಧಿ ಯಲ್ಲಿನ ಜಿಲ್ಲೆಗೆ ಸಂಬಂಧಿಸಿದ ದಾಖಲೆಗಳ ಸಂಗ್ರಹಿಸಲಾಗುತ್ತಿದೆ. ಇನ್ನೆರಡೂ¾ರು ದಿನಗಳಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದವರು ಸ್ಪಷ್ಟಪಡಿಸಿದರು.
ಸಮಿತಿಯ ದರೂರು ಪುರುಷೋತ್ತಮಗೌಡ ಮಾತನಾಡಿ, ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವುದಾದರೆ ಜಿಲ್ಲಾ ಕೇಂದ್ರವನ್ನು ಭೌಗೋಳಿಕವಾಗಿ ಪಶ್ಚಿಮ ತಾಲೂಕನ್ನೇ ಗುರುತಿಸಬೇಕು. ಪ್ರಸ್ತುತ ದಿನಗಳಲ್ಲಿ ಸರ್ಕಾರಗಳು ಯಾವಾಗಲಾದರೂ ಬದಲಾವಣೆಯಾಗಬಹುದು. ಹಾಗೇನಾದರೂ ಆದರೆ, ವಿಜಯನಗರ ಜಿಲ್ಲಾ ಕೇಂದ್ರವನ್ನು ಪಶ್ಚಿಮ ತಾಲೂಕುಗಳಿಗೆ ನೀಡಿ, ಹೊಸಪೇಟೆಯನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿಕೊಳ್ಳಲಾಗುವುದು ಎಂದವರು ತಿಳಿಸಿದರು.
ಇದನ್ನೂ ಓದಿ :ವಿಜಯನಗರ ಜಿಲ್ಲೆ ಘೋಷಣೆಗೆ ವಿಜಯೋತ್ಸವ
ಬಳಿಕ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸಮಿತಿಯ ಸದಸ್ಯರೆಲ್ಲರೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹಿಸಿ ಕರಾಳ ದಿನವನ್ನು ಆಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಅರ್ಥಕಿಂಗ್ ಜಗದೀಶ್, ಸಿದ್ಮಲ್ ಮಂಜುನಾಥ್, ಬಂಡೆಗೌಡ, ಸಿಂಗಾಪುರ ನಾಗರಾಜ್ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.