ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ KSRTC ಬಸ್ ಕಂಡಕ್ಟರ್
Team Udayavani, Feb 10, 2021, 9:46 PM IST
ಉಳ್ಳಾಲ : ಕೌಟುಂಬಿಕ ಕಲಹ ಮತ್ತು ಸಂಸ್ಥೆಯ ಕಿರುಕುಳ ಹಿನ್ನಲೆ ಕೆಎಸ್ಆರ್ ಟಿಸಿ ಕಂಡೆಕ್ಟರ್ ರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನೆಡೆದಿದೆ.
ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಡೆತ್ ನೋಟ್ ನಲ್ಲಿ ತನ್ನ ಸಹೋದರ ಮತ್ತು ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ ಆರ್ ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು , ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.