ಪರಿಷತ್‌ ಘನತೆ ಎತ್ತಿ ಹಿಡಿಯಲು ಪ್ರಯತ್ನ: ಹೊರಟ್ಟಿ

"ಉದಯವಾಣಿ' ಕಚೇರಿಯಲ್ಲಿ ಸಂವಾದ

Team Udayavani, Feb 11, 2021, 7:10 AM IST

ಪರಿಷತ್‌ ಘನತೆ ಎತ್ತಿ ಹಿಡಿಯಲು ಪ್ರಯತ್ನ: ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ನ ಘನತೆಯನ್ನು ಎತ್ತಿ ಹಿಡಿಯಲು, ಅದರ ಪರಂಪರೆ ಮುಂದುವರಿಸಲು, ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಲು ಪ್ರಯತ್ನಿಸುತ್ತೇನೆ. ಸರಕಾರಕ್ಕೂ ಮುಜುಗರ ಉಂಟು ಮಾಡದೆ, ವಿಪಕ್ಷಕ್ಕೂ ಅವಕಾಶ ನೀಡಿ ಎಲ್ಲರನ್ನೂ ವಿಶ್ವಾಸದಿಂದ ತೆಗೆದುಕೊಂಡು ಹೋಗುತ್ತೇನೆ ಎಂದು ನೂತನ ಸಭಾಪತಿ ಬಸವರಾಜ್‌ ಹೊರಟ್ಟಿ ಹೇಳಿದ್ದಾರೆ.

ಉದಯವಾಣಿ ಬೆಂಗಳೂರು ಕಚೇರಿಯಲ್ಲಿ “ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಷತ್ತಿನ ಘನತೆ ಎತ್ತಿ ಹಿಡಿಯುವ ಕೆಲಸವಾಗಬೇಕಿದೆ. ಇದೊಂದು ಗಂಜಿ ಕೇಂದ್ರ, ವೃದ್ಧಾಶ್ರಮ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಈ ಸದನದ ಬಗ್ಗೆ ಸಾಮಾನ್ಯರಿಗೂ ಗೌರವ ಮೂಡುವಂತೆ ಮಾಡುವ ಪ್ರಯತ್ನಿಸಲಾಗುವುದು. ಕಚೇರಿಯಲ್ಲಿ ಕೆಳ ಹಂತದಿಂದ ಮೇಲ್ವರ್ಗ ದವರೆಗೂ ಇರುವ ಅಧಿಕಾರಿಗಳಲ್ಲಿ ಎಲ್ಲರಿಗೂ ಗೌರವ ದೊರೆಯುವಂತೆ ಮಾಡುತ್ತೇನೆ. ಬಹಳ ವರ್ಷಗಳಿಂದ ಇಲ್ಲಿಯೇ ಠಿಕಾಣಿ ಹೂಡಿರು ವವರನ್ನು ವರ್ಗಾಯಿಸುವ ಕಾರ್ಯಕ್ಕೆ ಚಾಲನೆ ನೀಡುತ್ತೇವೆ ಎಂದರು.

ಈ ಸದನದಲ್ಲಿ ಅನೇಕ ಮಹಾನ್‌ ನಾಯಕರು ಆಗಿ ಹೋಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು ಕೆಲಸ ಮಾಡಿದ್ದಾರೆ. ಆದರೆ, ಈಗ ಈ ಸದನಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಸೋತವರು ಬರುವಂತಹ ಪರಿಸ್ಥಿತಿ ಉಂಟಾಗಿದೆ. ಕಲೆ, ಸಂಗೀತ, ಸಾಹಿತ್ಯ, ಪತ್ರಿಕೋದ್ಯಮ ಕ್ಷೇತ್ರ ದವರು ಬರುತ್ತಿದ್ದರು. ಈಗ ಎಲ್ಲ ರಾಜಕೀಯ ಪಕ್ಷಗಳು ಈ ಬಗ್ಗೆ ಆತ್ಮಾವಲೋಕನ ಮಾಡಿ ಕೊಳ್ಳಬೇಕಿದೆ. ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದವರನ್ನು ಗುರುತಿಸುವ ಕೆಲಸವಾಗಬೇಕಿದೆ. ಸದ್ಯಕ್ಕೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂಬ ಅಸಹಾಯಕತೆ ಇದ್ದರೂ ಭರವಸೆ ಇದೆ. ಮುಂದೊಂದು ದಿನ ಪ್ರಕೃತಿಯೇ ಈ ವ್ಯವಸ್ಥೆ ಯನ್ನು ಬದಲಾಯಿಸಬಹುದು ಎಂದರು.

ಎಲ್‌ಎಚ್‌ ಸಮಸ್ಯೆಗೆ ಪರಿಹಾರ
ಶಾಸಕರ ಭವನದಲ್ಲಿ 15 ಸಾವಿರ ಜನಸಂಖ್ಯೆ ಇರುವ ಪಟ್ಟಣಕ್ಕೆ ಬೇಕಾಗುವಷ್ಟು ನೀರು ಮತ್ತು ವಿದ್ಯುತ್‌ ಬಳಕೆಯಾಗುತ್ತದೆ. ಆದರೆ, ಅಲ್ಲಿ ಶೇ. 15ರಷ್ಟು ಶಾಸಕರು ಮಾತ್ರ ಉಳಿದುಕೊಳ್ಳುತ್ತಾರೆ. ಉಳಿದಂತೆ ಅವರ ಆಪ್ತರು, ಗನ್‌ಮ್ಯಾನ್‌ಗಳು ಉಳಿದುಕೊಳ್ಳುತ್ತಾರೆ.

ಅಲ್ಲಿ ನಿರಂತರ ಅಭಿವೃದ್ಧಿ ಹೆಸರಿನಲ್ಲಿ ಕೆಲಸಗಳು ನಡೆಯುತ್ತಿರುತ್ತವೆ. ಅದು ಅನಗತ್ಯ ವೆಚ್ಚ ಮಾಡಲಾಗುತ್ತದೆ. ಶಾಸಕರ ರೂಮುಗಳ ನವೀಕರಣದ ಹೆಸರಿನಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಲಾಗುತ್ತಿದೆ. ಆ ರೀತಿಯ ಚಟುವಟಿಕೆಗಳನ್ನು ನಿಯಂತ್ರಣಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ ಒಮ್ಮೆಲೆ ಎಲ್ಲವನ್ನೂ ಸರಿಪಡಿಸುವ ಭ್ರಮೆ ಇಲ್ಲ. ಹಂತ ಹಂತವಾಗಿ ಶಾಸಕರ ಮನ ಪರಿವರ್ತನೆಯನ್ನೂ ಮಾಡುವ ಮೂಲಕ ಬದಲಾವಣೆಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಅಧಿವೇಶನದ ಸಂದರ್ಭ ಎಲ್ಲ ಸದಸ್ಯರು ತಮ್ಮ ವಿಷಯ ಇಲ್ಲದಿದ್ದರೂ, ಸದನ ದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಲು ಪ್ರೇರೇಪಿಸುವುದು. ಪ್ರತಿದಿನ ಕಾರ್ಯ ಸೂಚಿಯನ್ನು ಅಂದೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು .
-ಬಸವರಾಜ ಹೊರಟ್ಟಿ, ಸಭಾಪತಿ

ಟಾಪ್ ನ್ಯೂಸ್

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.