ಮೀಸಲಾತಿ ಕುರಿತು ವಿಶೇಷ ಅಧಿವೇಶನ ಕರೆಯಿರಿ
Team Udayavani, Feb 11, 2021, 2:34 PM IST
ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸ ಲಾತಿ ವಿಚಾರವಾಗಿ ವಿಶೇಷ ಅಧಿವೇಶನ ಕರೆಯಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ನಾಶ ಮಾಡುವ ಹುನ್ನಾರದಿಂದ ಬಿಜೆಪಿ, ಆರ್‌ಆರ್‌ಎಸ್ ಪ್ರಬಲರ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡುತ್ತಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಕೂಡ ಇದಕ್ಕೆ ಬೆಂಬಲ ನೀಡುತ್ತಿದೆ ಎಂದು ದೂರಿದರು.
ಕುರುಬರ ಸಮುದಾಯ ಎಸ್‌ಟಿಗೆ ಸೇರ್ಪಡೆ ಮಾಡುವಂತೆ ದೊಡ್ಡ ಸಮಾವೇಶ ನಡೆಸಿದೆ. ಲಿಂಗಾಯತ ಸಮುದಾಯವು ಕೂಡ ಪ್ರವರ್ಗ 2ಗೆ ಸೇರಿಸುವಂತೆ ದೊಡ್ಡ ಹೋರಾಟ ಮಾಡು ತ್ತಿದೆ. ಅದೇ ರೀತಿ ಒಕ್ಕಲಿಗ ಸಮುದಾಯವು ಕೂಡ ಪ್ರವರ್ಗ 2 ಗೆ ಸೇರಿಸುವಂತೆ ಹೋರಾಟ ನಡೆಸುತ್ತಿದೆ. ಈ ನಡುವೆ ಬಿಲ್ಲವ ಹಾಗೂ ಈಡಿಗ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸಿ ಯಥಾಸ್ಥಿತಿ ಕಾಪಾಡುವಂತೆ ಒತ್ತಾಯ ಮಾಡಿದೆ. ಇದರಿಂದಾಗಿ ದುರ್ಬಲ ಸಮುದಾಯ ಹಾಗೂ ಪ್ರಬಲ ಸಮುದಾಯಗಳ ನಡುವೆ ಸಂಘರ್ಷ ಉಂಟಾಗಲಿದೆ ಎಂದರು.
ಇದನ್ನೂ ಓದಿ:ಪೊಲೀಸರ ಮಾನವೀಯತೆಗೆ ಸಾರ್ವಜನಿಕರ ಶ್ಲಾಘನೆ
ಪ್ರಾಧಾನ್ಯತೆ ಇಲ್ಲದ ವರ್ಗಗಳಿಗೆ ಶಾಸಕಾಂಗ, ಕಾರ್ಯಾಂಗ ,ನ್ಯಾಯಾಂಗದಲ್ಲಿ ಸಾಮಾಜಿಕ, ಶೈಕ್ಷಣಿಕವಾಗಿ ಮೀಸಲಾತಿಯನ್ನುಸಂವಿಧಾನದಲ್ಲಿ ದೊರಕಿಸಿಕೊಡಲಾಗಿದೆ. ಮೀಸಲಾತಿ ಬಡತನN ನಿರ್ಮೂಲನೆ ಕಾರ್ಯಕ್ರಮವಲ್ಲ. 12 ಬಾರಿ ಮುಖ್ಯಮಂತ್ರಿಯಾಗಿNರುವ ಲಿಂಗಾಯತ ಸಮುದಾಯ, 8 ಬಾರಿ ಮುಖ್ಯಮಂತ್ರಿಯಾಗಿ ರುವ ಒಕ್ಕಲಿಗ ಸಮುದಾಯ, ಹಾಗೂ ಒಮ್ಮೆ ಮುಖ್ಯಮಂತ್ರಿಯಾಗಿ ಕುರುಬರ ಸಮುದಾಯಗಳು, ಹಿಂದುಳಿದ ವರ್ಗ, ಎಸ್‌ಸಿ, ಎಸ್‌ಟಿ, ಪ್ರವರ್ಗ 2 ರಲ್ಲಿ ಪಾಲು ಕೇಳುತ್ತಿದೆ.
ಇದು ದುರ್ಬಲ, ಪ್ರಬಲ ಸಮುದಾಯಗಳ ಸಂಘರ್ಷಕ್ಕೆ ಕಾರಣವಾಗಿದೆ ಎಂದರು. ಕೇಂದ್ರ ಸರ್ಕಾರ ದೇಶದಲ್ಲಿ ಜಾತಿ, ಜನಸಂಖ್ಯೆವಾರು ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮ ಪಾಲು ತತ್ವದಂತೆ ಎಲ್ಲ ವರ್ಗಗಳ ಜನಸಂಖ್ಯೆಯ ಆಧಾರದಲ್ಲಿ ಶೇ.100ಕ್ಕೆ 100 ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ದರು. ಮೀಸಲಾತಿ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ
ರಾಜ್ಯದ 224 ಶಾಸಕರು, 28 ಸಂಸದರು, 100 ವಿಧಾನ ಪರಿಷತ್ ಸದಸ್ಯರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದರು..
ಮೊದಲನಿಂದಲೂ ಮೀಸಲಾತಿ ವಿರೋಧಿಸುತ್ತಿದ್ದ ವರ್ಗಗಳು ಈಗ ಮೀಸಲಾತಿಗಾಗಿ ಹೋರಾಟ ಮಾಡುತ್ತಿರುವುನ್ನು ನೋಡಿದರೆ ಮೀಸಲಾತಿ ನಾಶವಾಗುವ ಅನುಮಾನ ಮೂಡುತ್ತಿದೆ ಎಂದರು. ಪಕ್ಷ ಪ್ರಧಾನ ಕಾರ್ಯದರ್ಶಿ ಅರಕಲವಾಡಿನಾಗೇಂದ್ರ, ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಬ.ಮ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.