ನಾಳೆಯಿಂದ ಶ್ರೀಮದಥಣಿ ಮುರುಘೇಂದ್ರ ಶ್ರೀಗಳ ಜಾತ್ರೆ
ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ! ಷಟಸ್ಥಲ ಧ್ವಜಾರೋಹಣ ! ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಸಚಿವ ಜಗದೀಶ ಶೆಟ್ಟರ್
Team Udayavani, Feb 11, 2021, 4:59 PM IST
ಧಾರವಾಡ: ಶ್ರೀಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ನಗರದ ಮುರುಘಾಮಠದಲ್ಲಿ ಫೆ.12 ರಿಂದ ಫೆ.16ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.12ರಂದು ಬೆಳಗ್ಗೆ 9:00 ಗಂಟೆಗೆ ದುರದುಂಡೀಶ್ವರ ಮಠದನೀಲಕಂಠ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸುವರು. ನಿಜಗುಣ ಶಿವಯೋಗಿ ಸ್ವಾಮೀಜಿ ಸಾನಿಧ್ಯ ವಹಿಸುವರು. ಅಂದು ಸಂಜೆ 6:30 ಗಂಟೆಗೆ ಜಿÇÉಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಹುಬ್ಬಳ್ಳಿ ಮೂರುಸಾವಿರಮಠದ ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗೆ ಗುರುವಂದನೆ ನಡೆಯಲಿದೆ. ವಿಜಯ ಮಹಾಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಡಿಸಿ ನಿತೀಶ ಪಾಟೀಲ, ವೀರೇಶ ಅಂಚಟಗೇರಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಫೆ.13ರಂದು ಸಂಜೆ 6:30 ಗಂಟೆಗೆ ಜಗದ್ಗುರು ಫಕೀರ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ ವಿಶೇಷ ಉಪನ್ಯಾಸ ಮಾಲೆ-1 ನಡೆಯಲಿದ್ದು, ವೀರೇಶ ಪಾಟೀಲ ಉಪನ್ಯಾಸ ನೀಡುವರು. ಶಾಸಕರಾದ ಅರವಿಂದ ಬೆಲ್ಲದ, ಕುಸುಮಾವತಿ ಶಿವಳ್ಳಿ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಫೆ.14ರಂದು ಸಂಜೆ 6:30 ಗಂಟೆಗೆ ಅಖೀಲ ಭಾರತ ಶಿವಾನುಭವ ಸಂಸ್ಥೆಯ ಸಮ್ಮೇಳನ, ವಿಶೇಷ ಉಪನ್ಯಾಸ ಮಾಲೆ-2 ನಡೆಯಲಿದೆ. ಸಿದ್ಧಸಂಸ್ಥಾನಮಠದ ಶ್ರೀಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ಡಾ| ವೈ.ಎಂ.ಯಾಕೊಳ್ಳಿ ಉಪನ್ಯಾಸ ನೀಡುವರು. ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರಮನ್ ಡಾ|ವಿಜಯ ಸಂಕೇಶ್ವರ, ಸಿಎಂ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಜಗದೀಶ ಗುಡಗುಂಟಿಮಠ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಫೆ.15ರಂದು ಸಂಜೆ 6:30 ಗಂಟೆಗೆ ಚಿತ್ರದುರ್ಗದ ಡಾ|ಶಿವಮೂರ್ತಿ ಮುರುಘಾ ಶರಣರು “ಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿ’ಯನ್ನು ತೋಂಟದಾರ್ಯ ಸಂಸ್ಥಾನಮಠದ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿಗೆ ಪ್ರದಾನ ಮಾಡುವರು. ಸಚಿವ ಬಸವರಾಜ ಬೊಮ್ಮಾಯಿ ಅತಿಥಿಯಾಗಿ ಪಾಲ್ಗೊಳ್ಳುವರು. ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರನ್ನು ಸನ್ಮಾನಿಸಲಾಗುವುದು ಎಂದರು.
ಇದನ್ನೂ ಓದಿ :ವ್ಯಾಲಂಟೈನ್ಸ್ ಡೇ ಗೆ ಹುಡುಗಿಯರ ಕಾಟ ತಪ್ಪಿಸಲು 5 ದಿನ ರಜೆ ಕೊಡಿ ಸರ್.. ರಜಾರ್ಜಿ ವೈರಲ್
ಫೆ.16ರಂದು ಬೆಳಗ್ಗೆ 4:00 ಗಂಟೆಗೆ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಲಿಂಗದೀಕ್ಷೆ ನಡೆಯಲಿದೆ. ಅಂದು ಸಂಜೆ 4:00 ಗಂಟೆಗೆ ಚಿತ್ರದುರ್ಗ ಡಾ|ಶಿವಮೂರ್ತಿ ಮುರುಘಾ ಶರಣರ ಸಾನಿಧ್ಯದಲ್ಲಿ ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ ರಥೋತ್ಸವ ನೆರವೇರಲಿದ್ದು, ನಾಡಿನ ವಿವಿಧ ಮಠಾಧೀಶರು ಪಾಳ್ಗೊಳ್ಳುವರು. ಈ ಪುಣ್ಯ ಕಾರ್ಯದಲ್ಲಿ ಸಕಲ ಸದ್ಭಕ್ತರು ಭಾಗವಹಿಸಿ ಉತ್ಸವ ಯಶಸ್ವಿಗೊಳಿಸಬೇಕೆಂದು ಕೋರಿದರು.
ನಾಗರಾಜ ಪಟ್ಟಣಶೆಟ್ಟಿ. ಡಿ.ಬಿ. ಲಕಮನಹಳ್ಳಿ, ಬಸಯ್ಯ ಗಣಾಚಾರಿ. ಸಿ.ಎಸ್. ಪಾಟೀಲ, ವಿರೂಪಾಕ್ಷಪ್ಪ ಕಟಗಿ, ಷಣ್ಮುಖಪ್ಪ ಅಗಡಿ, ಎಸ್.ಎಸ್. ಲಕ್ಷ್ಮೇಶ್ವರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.