ಪಾರ್ಕಿಂಗ್ ಜಾಗ ಅತಿಕ್ರಮಿಸಿದರೆ ಟ್ರೇಡ್ ಲೈಸನ್ಸ್ ರದ್ದು : ಜಿಲ್ಲಾಧಿಕಾರಿ ಸೂಚನೆ
Team Udayavani, Feb 11, 2021, 10:43 PM IST
ಉಡುಪಿ: ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ಅನಂತರ ಪಾರ್ಕಿಂಗ್‌ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್‌ಗೆ ತೀವ್ರ ಸಮಸ್ಯೆಯಾಗುತ್ತಿದೆ. ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಚಯಗಳನ್ನು ನಿರ್ಮಿಸುವಾಗ ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ಅನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂಧಪಟ್ಟ ಮಾಲಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ, ಅತಿಕ್ರಮಣ ತೆರವಾಗದಿದ್ದಲ್ಲಿ ಸಂಸ್ಥೆಯ ಟ್ರೇಡ್ ಲೈಸನ್ಸ್ ರದ್ದುಗೊಳಿಸುವುದು ಸೇರಿದಂತೆ ನಗರಸಭೆ ವತಿಯಿಂದ ಅತಿಕ್ರಮಣವನ್ನು ತೆರವುಗೊಳಿಸುವಂತೆ ತಿಳಿಸಿದರು.
ಇದನ್ನೂ ಓದಿ:ಉಡುಪಿ : ಕಲ್ಸಂಕ ಜಂಕ್ಷನ್‌ನಲ್ಲಿ ಕಾಣಿಸಿಕೊಂಡ ನಾಗರಹಾವು! ಪೊಲೀಸರು, ಸವಾರರು ಗಲಿಬಿಲಿ
ವೈಜ್ಞಾನಿಕ ರೀತಿಯ ಹಂಪ್ಸ್ ನಿರ್ಮಿಸಿ
ನಗರ ಪ್ರದೇಶದಲ್ಲಿನ ಪಾಟ್ ಹೋಲ್‌ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ವೈಜ್ಞಾನಿಕ ರೀತಿಯಲ್ಲಿ ಹಂಪ್ಸ್‌ಗಳನ್ನು ನಿರ್ಮಿಸುವಂತೆ ಸೂಚನೆ ನೀಡಿದರು.
ಹೆದ್ದಾರಿಯಲ್ಲಿ ಎಚ್ಚರ ವಹಿಸಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಿ, ಪಾಟ್ ಹೋಲ್‌ಗಳನ್ನು ಮುಚ್ಚಲು ಅಗತ್ಯ ಕಾಮಗಾರಿ ಕೈಗೊಂಡು ಅಪಘಾತಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಕೋಟ ಬಳಿಯ ಅಂಡರ್‌ಪಾಸನ್ನು ವಿಸ್ತರಿಸಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚಿಸಿದರು.
ಮಕ್ಕಳಿಗೆ ವಾಹನ ನೀಡಿದರೆ ಪೋಷಕರಿಗೆ ಜೈಲು ಶಿಕ್ಷೆ ಎಚ್ಚರಿಕೆ
18 ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷಾ ನಿಯಮಗಳನ್ನು ಮೀರಿ, ವಾಹನ ಚಲಾಯಿಸುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಅಪ್ರಾಪ್ತ ವಯಸ್ಕರಿಗೆ ವಾಹನ ನೀಡಿದಲ್ಲಿ ಪೋಷಕರೂ ಸಹ ಜೈಲು ಶಿಕ್ಷೆಗೆ ಒಳಪಡುತ್ತಾರೆ. ಈ ಬಗ್ಗೆ ಎಚ್ಚರ ಮೂಡಿಸಿ ಎಂದರು.
ಕಲ್ಸಂಕ ಸೇತುವೆ ವಿಸ್ತರಣೆ
ಕಲ್ಸಂಕ ಬಳಿ ಕೃಷ್ಣಮಠಕ್ಕೆ ಪ್ರವೇಶಿಸುವ ಸ್ಥಳದಲ್ಲಿನ ಸೇತುವೆಯನ್ನು ವಿಸ್ತರಿಸಿ ಅಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ, ಸಂಬಂಧಿಸಿದ ಇಲಾಖೆಗಳು ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಅವುಗಳಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಸೂಚಿಸಿದರು.
ಜಿ.ಪಂ. ಸಿಇಒ ಡಾ| ನವೀನ್ ಭಟ್, ಎಡಿಸಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್ ಚಂದ್ರ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪಡ್ನೆಕರ್, ಪೌರಾಯುಕ್ತ ಉದಯ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.