ಇಂದಿನಿಂದ 3 ದಿನಗಳ ಕಾಲ ಕನ್ನಡ ಸಾಹಿತ್ಯ ಸಂಭ್ರಮ

Team Udayavani, Feb 12, 2021, 5:45 AM IST

ಇಂದಿನಿಂದ 3 ದಿನಗಳ ಕಾಲ ಕನ್ನಡ ಸಾಹಿತ್ಯ ಸಂಭ್ರಮ

ಕೊಡಿಯಾಲಬೈಲ್‌: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ 24ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಕೊಡಿಯಾಲಬೈಲಿನ ಶಾರದಾ ವಿದ್ಯಾಲಯ ಸಭಾಂಗಣದಲ್ಲಿ ಫೆ. 12ರಿಂದ 14ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ವ ಸಿದ್ಧತೆ ನಡೆಸಲಾಗಿದೆ.

“ಆತ್ಮ ನಿರ್ಭರ ಭಾರತಃ ಪರಂಪರೆ ಮತ್ತು ಆಧುನಿಕತೆ-ಅನುಸಂಧಾನ’ ಎಂಬ ಆಶಯದೊಂದಿಗೆ ಈ ಬಾರಿಯ ಸಮ್ಮೇಳನವು ನಡೆಯಲಿದ್ದು, ಜಿಲ್ಲೆ- ಹೊರಜಿಲ್ಲೆಗಳ ಹಲವು ಸಾಹಿತ್ಯಾಸಕ್ತರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಯಿದೆ. ಈ ಮೂಲಕ ಕನ್ನಡ ನಾಡು ನುಡಿ ಯ ಸಂಭ್ರಮಕ್ಕೆ ಕಡಲನಗರಿ ಸಜ್ಜಾಗಿದೆ.

ಅಗ್ರಮಾನ್ಯ ಅರ್ಥಧಾರಿ, ಪ್ರಭಾವೀ ಭಾಷಣಕಾರ, ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ ಅವರ ಸರ್ವಾಧ್ಯಕ್ಷತೆ ಯಲ್ಲಿ ಈ ಬಾರಿಯ ಸಮ್ಮೇಳನವು ಜರ ಗಲಿದೆ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಪ್ರಾಂಗಣ, ಪೇಜಾವರ ವಿಶ್ವೇಶತೀರ್ಥ ವೇದಿಕೆ, ಬನ್ನಂಜೆ ಗೋವಿಂದಾಚಾರ್ಯ ಮಹಾದ್ವಾರ ಹಾಗೂ ಜಾರ್ಜ್‌ ಫೆರ್ನಾಂ ಡಿಸ್‌ ಪ್ರದರ್ಶನಾಂಗಣದಲ್ಲಿ 3 ದಿನಗಳ ಕಾಲ ಸಮ್ಮೇಳನ ಸಂಪನ್ನಗೊಳ್ಳಲಿದೆ.

23ನೇ ಸಾಹಿತ್ಯ ಸಮ್ಮೇಳನವು 2019ರ ಜ. 29ರಿಂದ ಮೂರು ದಿನ ಮಂಗಳೂರು ಪುರಭವನದಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ 2020ರಲ್ಲಿ ಜಿಲ್ಲಾ ಸಮ್ಮೇಳನ ನಡೆದಿರಲಿಲ್ಲ. ಹೀಗಾಗಿ ಈ ಬಾರಿ ನಡೆಯುತ್ತಿರುವುದು 24ನೇ ಸಮ್ಮೇಳನ. ಫೆ. 12ರಂದು ಬೆಳಗ್ಗೆ 9.30ಕ್ಕೆ ಸಮ್ಮೇಳನದ ಸಭಾಂಗಣದ ಮುಂದೆ ರಾಷ್ಟ್ರಧ್ವಜಾರೋಹಣವನ್ನು ಮೇಯರ್‌ ದಿವಾಕರ ಪಾಂಡೇಶ್ವರ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ಎಸ್‌. ಪ್ರದೀಪ ಕುಮಾರ ಕಲ್ಕೂರ, ಸಮ್ಮೇಳನದ ಧ್ವಜಾ ರೋಹಣವನ್ನು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ|ಎಂ.ಬಿ. ಪುರಾಣಿಕ್‌ ನೆರವೇರಿಸಲಿದ್ದಾರೆ.

ಕನ್ನಡ ಭುವನೇಶ್ವರಿಯ ದಿಬ್ಬಣ
ಅಪರಾಹ್ನ 3ರಿಂದ ಶಾರದಾ ವಿದ್ಯಾ ಲಯದ ಮಹಾದ್ವಾರ (ಎಸ್‌.ಕೆ.ಡಿ.ಬಿ. ಆವರಣ)ದಿಂದ ಕನ್ನಡ ಭುವನೇಶ್ವರಿ ದಿಬ್ಬಣ ಹೊರಡಲಿದೆ. ಮೆರ ವಣಿಗೆಯನ್ನು ದ.ಕ. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿ ಸಲಿದ್ದಾರೆ. ಸಂಜೆ 4.15ರಿಂದ ಸಮ್ಮೇಳನದ ಉದ್ಘಾಟನೆ ನೆರವೇರಲಿದೆ. ಸರಕಾರ ರೂಪಿಸಿದ ಕೊರೊನಾ ನಿಯಮಗಳಿಗೆ ಅನುಸಾರವಾಗಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ತೀರ್ಮಾನಿಸಲಾಗಿದೆ. ಹೆಚ್ಚಿನ ಜನರು ಸಮ್ಮೇಳನ ಸ್ಥಳಕ್ಕೆ ಬರಲು ಕಷ್ಟವಾದರೆ ಅಂತಹವರಿಗಾಗಿ ಎಲ್ಲ ಕಾರ್ಯಕ್ರಮಗಳನ್ನು ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ
ಸಮ್ಮೇಳನದ ಅಂಗಣದಲ್ಲಿರುವ ಜಾರ್ಜ್‌ ಫೆರ್ನಾಂಡಿಸ್‌ ಪ್ರದರ್ಶನಾಂಗಣದಲ್ಲಿ ಕರಾವಳಿ ಚಿತ್ರಕಲಾ ಚಾವಡಿ ಮಂಗಳೂರು ಇವರಿಂದ ಚಿತ್ರಕಲಾ ಪ್ರದರ್ಶನ ಹಾಗೂ ಮಾರಾಟ ಮಳಿಗೆ, ಶಾರದಾ ಆಯುರ್ವೇದ ಕಾಲೇಜು, ನ್ಯಾಚುರೋಪತಿ ಕಾಲೇಜಿನ ಆಶ್ರಯದಲ್ಲಿ “ವೈದ್ಯಕೀಯ ಮಾಹಿತಿ ಮಳಿಗೆ’ ಹಾಗೂ ಕೋವಿಡ್‌ ಅನಂತರದ ಸ್ವಾಸ್ಥÂದ ಕುರಿತು ಅರಿವು ಮೂಡಿಸುವ ಪ್ರಾತ್ಯಕ್ಷಿಕೆ, ಪುಸ್ತಕ ಮಳಿಗೆಗಳ ಸಹಿತ ವಿವಿಧ ಗೃಹೋಪಯೋಗಿ, ಗುಡಿ ಕೈಗಾರಿಕ ವಸ್ತುಗಳ ಮಳಿಗೆ ಇರಲಿವೆ.

ಸಾಂಸ್ಕೃತಿಕ ವೈವಿಧ್ಯಗಳ ಪ್ರದರ್ಶನ
ಮೂರು ದಿನಗಳಲ್ಲೂ ವಿವಿಧ ತಂಡಗಳಿಂದ ಸಾಂಸ್ಕೃತಿಕ ವೈವಿಧ್ಯಗಳು ಪ್ರದರ್ಶನಗೊಳ್ಳಲಿವೆ. ಫೆ. 12ರಂದು ಸಂಜೆ 7.15ರಿಂದ ಯಕ್ಷ ಮಂಜುಳಾ ಕದ್ರಿ ಇವರಿಂದ ಮಹಿಳಾ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಫೆ. 13ರಂದು ಬೆಳಗ್ಗೆ 11.15ರಿಂದ ನವರಸ ಗಾಯನ ಆಯೋಜಿಸಲಾಗಿದೆ. ಸಂಜೆ 5.30ರಿಂದ ಡಾ| ಶಿವರಾಮ ಕಾರಂತರ ಚೋಮನ ದುಡಿ ಕಾದಂಬರಿ ಆಧಾರಿತ “ಚೋಮನ ದುಡಿ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಮಣಿಕೃಷ್ಣ ಸ್ವಾಮಿ ಅಕಾಡೆಮಿ ಇವರಿಂದ ಫೆ. 12, 13ರಂದು ಸಂಜೆ 4ರಿಂದ ರಾಷ್ಟ್ರೀಯ ಸಂಗೀತೋತ್ಸವ ಧ್ಯಾನ ಮಂದಿರದಲ್ಲಿ ನಡೆಯಲಿದೆ ಎಂದು ಎಸ್‌. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.