ಮಾ.2: ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆ
Team Udayavani, Feb 12, 2021, 3:15 AM IST
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ 33ನೇ ಅವಧಿಯ ಮೇಯರ್-ಉಪಮೇಯರ್ ಚುನಾವಣೆ ಮಾರ್ಚ್ 2ರಂದು ನಿಗದಿಯಾಗಿದೆ.
ಹಾಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧಿಕಾರಾವಧಿ ಫೆ. 28ರಂದು ಕೊನೆಗೊಳ್ಳಲಿದ್ದು, ನೂತನ ಮೇಯರ್ ಆಯ್ಕೆ ಮಾ. 2ರಂದು ನಡೆಸಲು ತೀರ್ಮಾನಿಸಲಾಗಿದೆ. ಪಾಲಿಕೆಯಲ್ಲಿ 33ನೇ ಅವಧಿಯ ಮೇಯರ್/ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು, ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.
ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಜಯಾನಂದ ಅಂಚನ್ ಸಹಿತ ಬಿಜೆಪಿಯ ಎಲ್ಲ ಸದಸ್ಯರು ಅರ್ಹರಾಗುತ್ತಾರೆ. ಆದರೆ ಪಾಲಿಕೆ ಸದಸ್ಯ, ಪ್ರಸ್ತುತ ಆಡಳಿತ ಪಕ್ಷದ ಮುಖ್ಯ ಸಚೇತಕ, ಅತ್ಯಂತ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಅವರ ಹೆಸರು ಮೇಯರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಪಕ್ಷದ ತೀರ್ಮಾನ ಕೆಲವೇ ದಿನಗಳಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ.
ಮನ ಪಾ ಚುನಾವಣೆಯು 2019ರ ನ. 12ರಂದು ನಡೆದು, ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ಸ್ಥಾನ ಪಡೆದಿತ್ತು. ಆದರೆ ಈ ವೇಳೆ ಮೇಯರ್-ಉಪಮೇಯರ್ ಮೀಸಲಾತಿ ವಿಚಾರದಲ್ಲಿ ಮೂಡಿದ್ದ ಗೊಂದಲದಿಂದಾಗಿ 3 ತಿಂಗಳವರೆಗೆ ಪಾಲಿಕೆ ಸದಸ್ಯರಿಗೆ ಅಧಿಕಾರ ದೊರೆತಿರಲಿಲ್ಲ. 32ನೇ ಮೇಯರ್ ಆಗಿ ದಿವಾಕರ್ ಪಾಂಡೇಶ್ವರ, ಉಪ ಮೇಯರ್ ಆಗಿ ವೇದಾವತಿ ಅವರು 2020ರ ಫೆ. 28ರಂದು ಆಯ್ಕೆಯಾಗಿದ್ದರು. ಈ ವರ್ಷ ಫೆ. 28ಕ್ಕೆ ಅವರ ಅವಧಿ ಮುಕ್ತಾಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.