ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ತೊಡಕಾಗಿದ್ದ ಒತ್ತುವರಿ ತೆರವು

Team Udayavani, Feb 12, 2021, 4:15 AM IST

ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ತೊಡಕಾಗಿದ್ದ ಒತ್ತುವರಿ ತೆರವು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಅನಧಿಕೃತ ಗೂಡಂಗಡಿಗಳನ್ನು ಗುತ್ತಿಗೆದಾರ ನವಯುಗ ಕಂಪೆನಿಯು ಗುರುವಾರ ಉಡುಪಿ ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಚನೆಯಂತೆ ಪೊಲೀಸ್‌ ಬಂದೋಬಸ್ತ್ನೊಂದಿಗೆ ತೆರವುಗೊಳಿಸಿದೆ.

ಉಚ್ಚಿಲ ಪೇಟೆಯ ಇಕ್ಕೆಲಗಳಲ್ಲಿ ಇರುವ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡ ರಚನೆಯ ತೆರವಿಗೆ ಜೆಸಿಬಿ ಸಹಿತವಾಗಿ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ಪ್ರಯತ್ನಕ್ಕೆ ಸ್ಥಳೀಯರು ಮತ್ತು ಅಂಗಡಿಗಳ ಮಾಲಕರು ತಡೆಯೊಡ್ಡುವ ಪ್ರಯತ್ನ ನಡೆಸಿದರು. ಅನಧಿಕೃತ ಗೂಡಂಗಡಿಗಳ ತೆರವು ವಿಚಾರದಲ್ಲಿ ಗೂಡಂಗಡಿ ಮಾಲಕರು, ಸ್ಥಳೀಯರು ಮತ್ತು ಹೈವೇ ಗುತ್ತಿಗೆದಾರರ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆಯ ವಾತಾವರಣ ಉಂಟಾಗಿತ್ತು. ಸ್ಥಳೀಯರ ಒತ್ತಡದ ಹಿನ್ನೆಲೆಯಲ್ಲಿ ಅಕ್ರಮ ತೆರವು ಕಾರ್ಯಾಚರಣೆ ಒಂದೂವರೆ ಗಂಟೆ ವಿಳಂಬವಾಗಿ ಆರಂಭಗೊಂಡಿತು.

ಗುತ್ತಿಗೆದಾರ ಕಂಪೆನಿ, ಪೊಲೀಸರು ಮತ್ತು ಸ್ಥಳೀಯಾಡಳಿತ ಅಧಿಕಾರಿಗಳ ಮನವವೊಲಿಕೆಗೆ ಸ್ಪಂದಿಸಿದ ಕೆಲವು ಗೂಡಂಗಡಿಗಳ ಮಾಲಕರು ತಮ್ಮ ಅಂಗಡಿಗಳನ್ನು ತೆರವುಗೊಳಿಸಲು ಸಮ್ಮತಿ ಸೂಚಿಸಿದ್ದು, ಆ ಬಳಿಕ ಸರ್ವಿಸ್‌  ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು ತೆರವು ಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು.

ಇದೇ ವೇಳೆ ಗೂಡಂಗಡಿ ತೆರವು ಕಾರ್ಯಾಚರಣೆಗೆ ಕೆಲವು ಅಂಗಡಿಯವರು ಪ್ರಾರಂಭದಲ್ಲಿ ಅಂಗಡಿ ತೆರವುಗೊಳಿಸಲು ವಿರೋಧ ವ್ಯಕ್ತಪಡಿಸಿದರಾದರೂ ಗುತ್ತಿಗೆದಾರ ಕಂಪೆನಿಯು ಜೆಸಿಬಿಯ ಮೂಲಕ ಅಂಗಡಿಗಳ ತೆರವಿಗೆ ಮುಂದಾದಾಗ ಅಂಗಡಿಯ ಮಾಲಕರೇ ಮುಂದೆ ಬಂದು ಸಾಮಾನುಗಳನ್ನು ತೆರವು ಗೊಳಿಸಿ, ಕಾರ್ಯಾಚರಣೆಯೊಂದಿಗೆ ಸಹಕರಿಸಿದರು.

ಶೀಘ್ರ ಸರ್ವಿಸ್‌ ರಸ್ತೆ ನಿರ್ಮಾಣ
ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ಬಗ್ಗೆ ನವಯುಗ್‌ ಕಂಪೆನಿಯ ಟೋಲ್‌ ವ್ಯವಸ್ಥಾಪಕ ಶಿವಪ್ರಸಾದ್‌ ರೈ ಮಾಹಿತಿ ನೀಡುತ್ತಾ, ರಾಷ್ಟ್ರೀಯ ಹೆದ್ದಾರಿ 66 ಉಚ್ಚಿಲ ಪೇಟೆಯಲ್ಲಿ ಸರ್ವಿàಸ್‌ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಕರೆಯಲಾಗಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ದೊರಕಲಿದೆ. ಅದಕ್ಕೆ ಪೂರ್ವಭಾವಿಯಾಗಿ ಹೆದ್ದಾರಿಯ ಇಕ್ಕೆಲಗಳಲ್ಲಿನ 30 ಮೀಟರ್‌ ಅಗಲದವರೆಗಿನ ಭೂಮಿಯನ್ನು ಗುತ್ತಿಗೆದಾರರಿಗೆ ನೀಡಬೇಕಿದ್ದು, ಅದಕ್ಕಾಗಿ ಹೆದ್ದಾರಿ ಇಲಾಖೆಯು ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶದಲ್ಲಿ ಇರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.

ಕಾಪು ಪೊಲೀಸ್‌ ವೃತ್ತ ನಿರೀಕ್ಷಕ ಪ್ರಕಾಶ್‌, ಪಡುಬಿದ್ರಿ ಪೊಲೀಸ್‌ ಠಾಣಾಧಿಕಾರಿ ದಿಲೀಪ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಿದ್ದರು. ನವಯುಗ್‌ ಕಂಪೆನಿಯ ಹೆಜಮಾಡಿ ಟೋಲ್‌ ಪ್ರಬಂಧಕ ಶಿವಪ್ರಸಾದ್‌ ರೈ, ಉಚ್ಚಿಲ ಬಡಾ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕುಶಾಲಿನಿ, ಗ್ರಾಮ ಲೆಕ್ಕಿಗ ಜಗದೀಶ್‌ ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

ಎಂದೋ ತೆರವಾಗಬೇಕಿತ್ತು
ಉಚ್ಚಿಲ ಪೇಟೆಯ ಎರಡೂ ಬದಿಯಲ್ಲಿ ಹೆದ್ದಾರಿಯಿಂದ 30 ಮೀಟರ್‌ ಅಗಲದವರೆಗಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಅದರ ಮೌಲ್ಯದಷ್ಟು ಪರಿಹಾರವನ್ನು ನೀಡಿ, ಭೂಸ್ವಾಧೀನ ಪಡಿಸಿಕೊಂಡು ಕಾಮಗಾರಿಗಾಗಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿತ್ತು. ಹೆದ್ದಾರಿ ಇಲಾಖೆಯು ಸ್ವಾಧೀನಕ್ಕೆ ತೆಗೆದುಕೊಂಡ ಪ್ರದೇಶದಲ್ಲಿ ಸ್ಥಳೀಯರು ಅನಧಿಕೃತವಾಗಿ ಗೂಡಂಗಡಿಗಳನ್ನು ನಿರ್ಮಿಸಿ, ವ್ಯವಹಾರ ನಡೆಸುತ್ತಿದ್ದರು. ಈ ಅಕ್ರಮ ಗೂಡಂಗಡಿಗಳನ್ನು ತೆರವುಗೊಳಿಸಲು ಗುತ್ತಿಗೆದಾರರು ಹಲವು ಬಾರಿ ಮುಂದಾಗಿದ್ದರೂ ಕೂಡಾ ರಾಜಕೀಯ ಮತ್ತು ಜನಪ್ರತಿನಿಧಿಗಳ ಒತ್ತಡದ ಕಾರಣದಿಂದಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದೂಡಲಾಗುತ್ತಿತ್ತು. ಸುಪ್ರೀಂ ಕೋಟ್‌ ಕೂಡ ಗೂಡಂಗಡಿ ತೆರವುಗೊಳಿಸಲು ನೊಟೀಸ್‌ ನೀಡಿದ್ದು ಅದನ್ನೇ ಮುಂದಿಟ್ಟು ಕೊಂಡು ಹೆದ್ದಾರಿ ಚತುಷ್ಪಥ ಯೋಜನೆಯ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಕಂಪೆನಿಯು ಗೂಡಂಗಡಿಗಳನ್ನು ತೆರವುಗೊಳಿಸಿದೆ.

ಟಾಪ್ ನ್ಯೂಸ್

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.