ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ

Team Udayavani, Feb 12, 2021, 12:19 PM IST

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಸೋಲನ್ನು ಒಪ್ಪಿಕೊಳ್ಳಲು ಸಿದ್ದರಾಮಯ್ಯ ಸಿದ್ಧರಿಲ್ಲ. ಸಿದ್ದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆದರು ಎಂದರು.

ಸಿದ್ದರಾಮಯ್ಯ ಯಾರ ಯಶಸ್ಸನ್ನೂ ಸಹಿಸುವುದಿಲ್ಲ. ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ. ಸಿದ್ದರಾಮಯ್ಯ ಅವರಿಗೆ ಸ್ವಾರ್ಥ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಮಿಠಾಯಿ ನೆನಪಾಗುತ್ತದೆ. ಅದ‌ನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಅದು ನಮ್ಮ ಪಕ್ಷದ ಆಂತರಿಕ ವಿಚಾರ ಇವರಿಗೇಕೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ರಾಜ್ಯಸಭೆ ವಿರೋಧದ ಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ, ಗುಲಾಂ ನಬಿ ಫೆ.15ಕ್ಕೆ ನಿವೃತ್ತಿ

ಸಿದ್ದರಾಮಯ್ಯ ಹಾಗೂ ಎಚ್‌.ಸಿ.ಮಹದೇವಪ್ಪ ಅವರದು ಅಹಿಂದ ಹೋರಾಟ ಅಲ್ಲ, ಸ್ವಾರ್ಥದ ಹೋರಾಟ. ಸ್ವಾರ್ಥಕ್ಕಾಗಿ ಸಿದ್ದರಾಮಯ್ಯ ಹಿಂದ ಅಹಿಂದ ಎಂದು ಚಡಪಡಿಸುತ್ತಿದ್ದಾರೆ. ಅವರಿಗೆ ಅಸ್ತಿತ್ವ ಅಭದ್ರತೆ ಕಾಡುತ್ತಿದೆ. ಕುರುಬ ಸಮಾಜದ ಎಸ್ ಟಿ ಹೋರಾಟ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರನ್ನು ಸೇರಿಸಿ ಯಶಸ್ಸು ಕಂಡಿದ್ದೇವೆ. ನಾನು ಇಲ್ಲದಿದ್ದರೆ ಆಗಲ್ಲ ಅಂದುಕೊಂಡಿದ್ದರು. ಅವರಲ್ಲಿ ನಾನು ನಾನು ಎನ್ನುವ ಸ್ವಾರ್ಥ ಇತ್ತು. ಸಮುದಾಯ ನನ್ನ ಜೊತೆ ಇಲ್ಲ ಎನ್ನುವುದು ಈಗ ಅವರಿಗೆ ಕಾಣುತ್ತಿದೆ ಎಂದು ಟೀಕಿಸಿದರು.

ಡಿ.ಕೆ.ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದ್ದು, ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆ. ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ಯಾವ ಹೋರಾಟ ಮಾಡುತ್ತೀರಾ? ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಬಿಟ್ಟು ಅಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ. ಮುಸ್ಲಿಮರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆಂದು ವಿಶ್ವನಾಥ್ ಕಿಡಿಕಾರಿದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.