ಕಳ್ಳರ ಅಟ್ಟಹಾಸಕ್ಕೆ ನಲುಗಿದ ಕುಂದಾನಗರಿ


Team Udayavani, Feb 12, 2021, 2:24 PM IST

Belagavi theft

ಬೆಳಗಾವಿ: ಕಳ್ಳತನ, ದರೋಡೆಯಲ್ಲಿ ಸಕ್ರಿಯವಾಗಿರುವ ಕಳ್ಳರ ಅಟ್ಟಹಾಸಕ್ಕೆ ಕುಂದಾನಗರಿ ಜನತೆ ಬೆಚ್ಚಿ ಬಿದ್ದಿದ್ದು, 2020ರ ಜನೇವರಿಯಿಂದ ಡಿಸೆಂಬರವರೆಗೆ ಐದೂವರೆ ಕೋಟಿ ರೂ. ಮೊತ್ತಕ್ಕಿಂತ ಹೆಚ್ಚು ಆಸ್ತಿ ಕಳ್ಳತನವಾಗಿದೆ.

ಪ್ರಕರಣಗಳ ಪತ್ತೆ ಹಚ್ಚುವಲ್ಲಿ ಮಹಾನಗರ ಪೊಲೀಸರು ವಿಫಲರಾಗಿದ್ದಕ್ಕೆ ಜನರು  ಅಸಮಾಧಾಗೊಂಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಬಹು ಸಂಸ್ಕೃತಿಯ ನಗರಿ ಬೆಳಗಾವಿಯಲ್ಲಿ ದಿನದಿನಕ್ಕೂ ಮನೆಗಳ್ಳತನ, ವಾಹನ, ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ಭೇದಿಸುವಲ್ಲಿ ಪೊಲೀಸರು ಸಫಲರಾಗಿಲ್ಲ. 2020 ಇಡೀ ವರ್ಷ ಕೊರೊನಾ ಹಾವಳಿಯಲ್ಲಿಯೇ ಜನರು ಕಾಲ ಕಳೆದಿದ್ದಾರೆ.

ಲಾಕ್‌ಡೌನ್‌ ಅವಧಿಯೇ ಬಹಳಷ್ಟು ದಿನ ಇತ್ತು. ಕಳ್ಳರು ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡು ಕೈಚಳಕ ತೋರಿಸಿದ್ದಾರೆ. ಒಂದು ವರ್ಷದ ಅವ ಧಿಯಲ್ಲಿ ನಡೆದ 275 ಕಳ್ಳತನ ಪ್ರಕರಣಗಳ ಪೈಕಿ 84 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಇನ್ನುಳಿದ ಪ್ರಕರಣಗಳ ಪತ್ತೆಗೆ ಇನ್ನೂ ಎಷ್ಟು ವರ್ಷ ಬೇಕು ಎಂಬುದೇ ಸಾರ್ವಜನಿಕರ ಪ್ರಶ್ನೆಯಾಗಿದೆ.

ಕಳ್ಳರ ಮೂಲ ಯಾವುದು?: ಕಳ್ಳತನದಲ್ಲಿ ಭಾಗಿಯಾಗಿರುವ ಖದೀಮರು ಉತ್ತರ ಭಾರತದ ಮೂಲದವರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ತೆಲಂಗಾಣ ಹಾಗೂ ಆಂಧ್ರ ಪ್ರದೇಶದ  ಮೂಲದವರೂ ನಗರದಲ್ಲಿ ವಕ್ರದೃಷ್ಟಿ ಹರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳ್ಳರ ಬಂಧನಕ್ಕೆ ಪೊಲೀಸರು ವ್ಯವಸ್ಥಿತ ಜಾಲ ಬೀಸಿದರೆ ಇಂಥ ಕೃತ್ಯಗಳಿಗೆ ಲಗಾಮು ಹಾಕಬಹುದಾಗಿದೆ. ಕಳ್ಳರ ಕೈಚಳಕದ ಬಗ್ಗೆ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮಹಾನಗರ ಪೊಲೀಸ್‌ ಕಮೀಷನರೇಟ್‌ನ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿಯೂ ಹೆಚ್ಚೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿರುವ ಮಾಹಿತಿ ಸಿಕ್ಕಿದೆ. ಒಂದು ವರ್ಷದ ಅವಧಿಯಲ್ಲಿ ಮನೆಗಳ್ಳತನ, ದರೋಡೆ, ಸರಗಳ್ಳತ, ವಾಹನ ಕಳ್ಳತನ ಸೇರಿ ಒಟ್ಟು 5.88 ಕೋಟಿ ರೂ. ಆಸ್ತಿ-ಪಾಸ್ತಿ ಕಳ್ಳತನವಾಗಿವೆ. ಈ ಪೈಕಿ ಪೊಲೀಸರು ಕೇವಲ 85.73 ಲಕ್ಷ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದು ಮೂಲ ಮಾಲೀಕರಿಗೆ ಮರಳಿಸಿದ್ದಾರೆ. ಆದರೆ ಇನ್ನೂ ಐದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಪತ್ತೆ ಹಚ್ಚಬೇಕಾಗಿದೆ.

ಪೊಲೀಸರು ಸೈಲೆಂಟ್‌ ಆಗಿದ್ದು ಏಕೆ?: ನಗರ ವ್ಯಾಪ್ತಿಯಲ್ಲಿ ಇಷ್ಟೊಂದು ಕಳ್ಳತನ ನಡೆಯುತ್ತಿದ್ದರೂ ಪೊಲೀಸರು ಸಮ್ಮನಿದ್ದಿದ್ದಾದರೂ ಏಕೆ. ವಿಶೇಷ ತಂಡ ರಚಿಸಿ ಪತ್ತೆ ಹಚ್ಚುವಲ್ಲಿ ನಿಷ್ಕ್ರಿಯರಾಗಿದ್ದು ಏಕೆ ಎಂಬ ಪ್ರಶ್ನೆ ಕಾಡುತ್ತಿದೆ. ಸಂಚಾರಿ ಪೊಲೀಸರಂತೆ ಬಹುತೇಕ ಪೊಲೀಸ್‌ ಠಾಣೆಯ ಸಿಬ್ಬಂದಿ ವಾಹನ ತಪಾಸಣೆಯಲ್ಲಿಯೇ ನಿರತರಾಗಿದ್ದಾರೆ. ಒಂಟಿ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆದಿವೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳ್ಳರು ಬಾಗಿಲು, ಕಿಟಕಿ ಮುರಿದು ಒಳ ನುಗ್ಗಿ ಚಿನ್ನಾಭರಣ, ನಗದು ಹಣ ದೋಚಿರುವ ಪ್ರಕರಣಗಳು ಬಹಳಷ್ಟಿವೆ. ವಾಹನ ಕಳ್ಳತನಗಳೂ ಸಾಕಷ್ಟಿವೆ. 275 ಪ್ರಕರಣಗಳ ಪೈಕಿ ಮನೆ ಹಾಗೂ ವಾಹನ ಕಳ್ಳತ ಹೆಚ್ಚಾಗಿ ನಡೆದಿವೆ.

ಇದನ್ನೂ ಓದಿ :ಶೌಚಗೃಹ ನಿರ್ಮಾಣ ವಿಚಾರ: ಸಭೆಯಲ್ಲಿ ಧರಣಿ ನಡೆಸಿದ ಜಿಪಂ ಸದಸ್ಯರು

ಏಳು ಒಂಟಿ ಮನೆಗೆ ಕನ್ನ ಹಾಕಿದ್ದ ಖದೀಮರು 6,57,747 ರೂ. ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ. ಈ ಪೈಕಿ ಎರಡೇ ಪ್ರಕರಣ ಪತ್ತೆಯಾಗಿದ್ದು, ಇನ್ನೂ ಐದು ಪ್ರಕರಣಗಳನ್ನು ಪತ್ತೆ ಹಚ್ಚಬೇಕಿದೆ. 2.35 ಲಕ್ಷ ರೂ.  ಮೌಲ್ಯದ ವಸ್ತುಗಳನ್ನು ಮಾಲೀಕರಿಗೆ ವಾಪಸ್ಸು ನೀಡಲಾಗಿದೆ. ನಗರದಲ್ಲಿ ಮನೆ, ಅಂಗಡಿ ಸೇರಿದಂತೆ ಮಾರುಕಟ್ಟೆ ಪ್ರದೇಶಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಕಳವು ಮಾಡಲಾಗಿದೆ. 145 ವಾಹನ ಕಳ್ಳತನ ಪ್ರಕರಣ ದಾಖಲಾಗಿದ್ದು, ಇದರಲ್ಲಿ 43 ಪ್ರಕರಣ ಪತ್ತೆ ಹಚ್ಚಲಾಗಿದೆ. ಇನ್ನೂ 102 ಪ್ರಕರಣ ಪತ್ತೆಯಾಗಬೇಕಿದೆ.

ಸರಗಳ್ಳತನ ಪ್ರಕರಣ ಪತ್ತೆ ಆಗಿಲ್ಲ: ಆರು ದರೋಡೆ ಪ್ರಕರಣಗಳಲ್ಲಿ 8,58,720 ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಮೂರು ಪ್ರಕರಣ ಪತ್ತೆ ಹಚ್ಚಿ 6,27,000 ರೂ. ಮೌಲ್ಯದ ವಸ್ತುಗಳನ್ನು ಮೂಲ ಮಾಲೀಕರಿಗೆ ಮರಳಿಸಲಾಗಿದೆ. ಇನ್ನೂ ಮೂರು ಪ್ರಕರಣಗಳು ಪತ್ತೆಯಾಗಬೇಕಿದೆ. 3.49 ಲಕ್ಷ ರೂ. ಮೌಲ್ಯದ ನಾಲ್ಕು ಸರಗಳ್ಳತನ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಇನ್ನೂವರೆಗೆ ಒಂದೂ ಪ್ರಕರಣ ಪತ್ತೆಯಾಗಿಲ್ಲ.

27 ಸಾಮಾನ್ಯ ಕಳ್ಳತನಗಳ ಪ್ರಕರಣಗಳ ಪೈಕಿ 9 ಪ್ರಕರಣ ಭೇದಿಸಲಾಗಿದ್ದು, ಇನ್ನೂ 18 ಪ್ರಕರಣಗಳು ಪತ್ತೆಯಾಗಬೇಕಿದೆ. 70,77,288 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ. 83 ಸಾವಿರ ರೂ. ಮೌಲ್ಯದ ಎರಡು ಜಾನುವಾರುಗಳ ಕಳ್ಳತನವಾಗಿವೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.