ಕೋವಿಡ್ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ; ಸದಾನಂದ ಗೌಡರಿಗೆ ಉಪರಾಷ್ಟ್ರಪತಿ ಮೆಚ್ಚುಗೆ


Team Udayavani, Feb 12, 2021, 7:40 PM IST

sadananda gowda

ನವದೆಹಲಿ: ಕೋವಿಡ್ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯಸಭೆಯಲ್ಲಿಂದು ಪ್ರಶ್ನೋತ್ತರ ವೇಳೆ ಜಿ.ಬಿ.ಎಲ್‌ ನರಸಿಂಹರಾವ್‌ ಅವರು ಕೇಳಿದ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೋವಿಡ್  ನಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಮಾಡುವುದು ಒಂದು ದೊಡ್ಡ ಸವಾಲಾಗಿತ್ತು. ಕೆಲಸಗಾರರ ಪೈಕಿ ಯಾರೀಗಾದರೂ ಕೋವಿಡ್ ಸೋಂಕು ತಗುಲಿದರೆ ಇಡೀ ಪ್ಯಾಕ್ಟರಿಯನ್ನೇ ಮುಚ್ಚಬೇಕಾದ ಪರಿಸ್ಥಿತಿ ಇತ್ತು. ಅದೇ ರೀತಿ ಸಾಗಣೆ ಮಾಡುವಾಗ, ಲೋಡ್‌, ಅನ್‌ಲೋಡ್‌ ಮಾಡುವಾಗ ಕಾರ್ಮಿಕರ ಕೊರತೆ ಎದುರಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನಿಭಾಯಿಸಲಾಯಿತು. ಅತಿವೃಷ್ಟಿಯಿಂದ ಕೆರೆ-ಕುಂಟೆಗಳು, ನೀರಾವರಿ ಜಲಾಶಯಗಳು ತುಂಬಿದವು. ಬಿತ್ತನೆ ಪ್ರದೇಶ ವೃದ್ಧಿಸಿ ರಸಗೊಬ್ಬರ ಬೇಡಿಕೆಯೂ ಹೆಚ್ಚಾಯಿತು. ಹೆಚ್ಚಾದ ಬೇಡಿಕೆಯನ್ನು ಪೂರೈಸಿ ಎಲ್ಲಿಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿ ವಲಯ ಶೇಕಡಾ 3.7 ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ವಿವರಿಸಿದರು.

ಇದಕ್ಕೆ ಮೊದಲು ವಿಜಯಸಾಯಿ ರೆಡ್ಡಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸದಾನಂದಗೌಡ, ಆಂಧ್ರ ಪ್ರದೇಶದಲ್ಲಿಯೂ ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಚೆನ್ನೈ; ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ…11 ಜನ ಸಾವು

ಪ್ರತಿ ಹಂಗಾಮು ಶುರುವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿಯೇ ನಮ್ಮ ಇಲಾಖೆಯು ಪ್ರತಿಯೊಂದು ರಾಜ್ಯಗಳ ಬೇಡಿಕೆಯ ವಿವರ ಪಡೆದು ಅದರ ಪ್ರಕಾರವೇ ವಿವಿಧ ನಮೂನೆಯ ರಸಗೊಬ್ಬರಗಳನ್ನು ಸರಬರಾಜಿಗೆ ವ್ಯವಸ್ಥೆ ಮಾಡುತ್ತದೆ. ಪ್ರತಿವಾರವೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಎಲ್ಲ ರಾಜ್ಯಗಳ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಇದಲ್ಲದೆ ಯಾವ-ಯಾವ ರಾಜ್ಯಗಳಲ್ಲಿ ಯಾವ-ಯಾವ ನಮೂನೆಯ ರಸಗೊಬ್ಬರಗಳು ಎಷ್ಟೆಷ್ಟು ಇವೆ ಎಂಬುದನ್ನು ನಮ್ಮ ಆನ್ಲೈನ್‌ ಡ್ಯಾಷ್‌ಬೋರ್ಡ್ – ʼಸಂಯೋಜಿತ ರಸಗೊಬ್ಬರ ಪರಿಶೀಲನಾ ವ್ಯವಸ್ಥೆ’ (ಐಎಫ್‌ಎಂಎಸ್) – ಮೂಲಕ ಪ್ರತಿದಿನವೂ ಪರಿಶೀಲಿಸಲಾಗುತ್ತದೆ ಮತ್ತು ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸದಾನಂದ ಗೌಡ ವಿವರಿಸಿದರು.

ಸದಸ್ಯರ (ವಿಜಯಸಾಯಿ ರೆಡ್ಡಿ) ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸಿದ ಸಚಿವರು ಆಂಧ್ರಪ್ರದೇಶದಲ್ಲಿ ಯಾವುದೇ ನಮೂನೆಯ ಗೊಬ್ಬರ ಕೊರತೆಯಾಗಿಲ್ಲ, ರಾಜ್ಯಕ್ಕೆ (ಎಪಿ) ಪ್ರಸಕ್ತ ಸಾಲಿನಲ್ಲಿ (2020-21) ಇದುವರೆಗೆ 17.5 ಲಕ್ಷ ಟನ್‌ ಯೂರಿಯಾ, 4 ಲಕ್ಷ ಟನ್‌ ಡಿಎಪಿ, 2.8 ಲಕ್ಷ ಟನ್‌ ಎಂಓಪಿ ಹಾಗೂ 13.5 ಲಕ್ಷ ಟನ್‌ ಎನ್‌ಪಿಕೆ ನಮೂನೆ ರಸಗೊಬ್ಬರ ಪೂರೈಕೆಯಾಗಿದೆ ಎಂದು ವಿವರಿಸಿದರು.

ಸಭಾಪೀಠದಲ್ಲಿದ್ದ ಉಪ-ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೋವಿಡ್ ಸಾಂಕ್ರಮಿಕದ ಮಧ್ಯೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡ ಸಚಿವ ಶ್ರೀ ಡಿ ವಿ ಸದಾನಂದ ಗೌಡರನ್ನು ಅಭಿನಂದಿಸಿದರು. ಸದಸ್ಯ ಜಿ.ಬಿ.ಎಲ್‌ ನರಸಿಂಹ ರಾವ್‌ ಅವರೂ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:  “ಮಾನವನ ಕೂದಲಿಗಿಂತ 10 ಪಟ್ಟು ಸಣ್ಣದಿರುವ ಬ್ರೈನ್ ಮೆಷಿನ್” ಅಭಿವೃದ್ಧಿಯಲ್ಲಿ ಎಲೊನ್ ಮಸ್ಕ್.!

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.