ರಾಜ್ಯ ಕಾಂಗ್ರೆಸ್‌ಗೆ ಖರ್ಗೆ ಬಲ


Team Udayavani, Feb 13, 2021, 6:50 AM IST

ರಾಜ್ಯ ಕಾಂಗ್ರೆಸ್‌ಗೆ ಖರ್ಗೆ ಬಲ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಹುದ್ದೆ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸಂಘಟನೆಗೆ ಬಲ ತುಂಬಲು ಹೈಕಮಾಂಡ್‌ ಮುಂದಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕರಾಗಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಇದ್ದಾರೆ. ಈಗ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಹುದ್ದೆಗೆ ದಲಿತ ಸಮುದಾಯದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆಗಳ ಮೂಲಕ ಪಕ್ಷ ಸಂಘಟನೆಗೆ ಹೊರಟಿರುವ ಸಂದರ್ಭದಲ್ಲಿಯೇ ಖರ್ಗೆ ಅವರಿಗೆ ಸ್ಥಾನಮಾನ ನೀಡಿರುವುದು ಪಕ್ಷ ಸಂಘಟನೆಗೆ “ಟಾನಿಕ್‌’ ಸಿಕ್ಕಂತಾಗಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಮಲ್ಲಿಕಾರ್ಜುನ ಖರ್ಗೆ – ಈ ತ್ರಿಮೂರ್ತಿಗಳ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಕಾರ್ಯತಂತ್ರವನ್ನು ಹೈಕಮಾಂಡ್‌ ರೂಪಿಸಿದೆ. ಈ ನಿಟ್ಟಿನಲ್ಲಿ ಖರ್ಗೆ ಅವರಿಗೆ ವಿಪಕ್ಷ ನಾಯಕ ಹುದ್ದೆ ನೀಡಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ದಲಿತ ಎಡಗೈ ಸಮುದಾಯದ ನಾಯಕ ಕೆ.ಎಚ್‌. ಮುನಿಯಪ್ಪ ಅವರಿಗೆ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಯೂಸಿ) ಖಾಯಂ ಆಹ್ವಾನಿತ ಹುದ್ದೆ ನೀಡಲಾಗಿತ್ತು. ಮತ್ತೂಬ್ಬ ಹಿರಿಯ ನಾಯಕ ಎಚ್‌.ಕೆ. ಪಾಟೀಲ್‌ ಅವರಿಗೆ ಎಐಸಿಸಿ ಕಾರ್ಯದರ್ಶಿ ಹುದ್ದೆ ನೀಡಿ ಮಹಾರಾಷ್ಟ್ರ ಉಸ್ತುವಾರಿ ವಹಿಸಲಾಗಿತ್ತು.

ಈಗಾಗಲೇ ದಲಿತ ಬಲಗೈ ಸಮುದಾಯದ ಧ್ರುವನಾರಾಯಣ್‌, ರೆಡ್ಡಿ ಸಮುದಾಯದ ರಾಮಲಿಂಗಾ ರೆಡ್ಡಿ, ನಾಯಕ ಸಮುದಾಯದ ಸತೀಶ್‌ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಇವೆಲ್ಲವೂ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಹೈಕಮಾಂಡ್‌ ಕೈಗೊಂಡ ತೀರ್ಮಾನಗಳೇ ಆಗಿದ್ದವು.

ಖರ್ಗೆ ವಿಪಕ್ಷ ನಾಯಕ :

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನ ಒಲಿದಿದೆ. ಫೆ. 15ರಂದು ಹಾಲಿ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಅವರು ನಿವೃತ್ತಿಯಾಗಲಿದ್ದು, ಇವರ ಸ್ಥಾನವನ್ನು ಖರ್ಗೆ ತುಂಬಲಿದ್ದಾರೆ. ಮೋದಿ ಸರಕಾರ 1ರ ಅವಧಿಯಲ್ಲಿ  ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದ  ಖರ್ಗೆ ಸರಕಾರವನ್ನು ಹಲವಾರು ಬಾರಿ ಇಕ್ಕಟ್ಟಿಗೆ ಸಿಲುಕಿಸಿದ್ದರು. ಈಗ ರಾಜ್ಯಸಭೆಯಲ್ಲೂ ಇದೇ ಉದ್ದೇಶ ಇರಿಸಿಕೊಂಡು ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗಿದೆ.

ಪಕ್ಷ ವಹಿಸಿದ ಜವಾಬ್ದಾರಿ ನಿರ್ವಹಣೆ ಮೂಲಕ “ನಿಷ್ಠಾವಂತ’ರಾಗಿರುವ ಖರ್ಗೆ ಅವರು ರಾಜ್ಯಸಭೆ ವಿಪಕ್ಷ ನಾಯಕರಾಗಿರುವುದು ಕರ್ನಾಟಕದಲ್ಲಿ ಪಕ್ಷ ಬಲವರ್ಧನೆಗೆ ಸಹಕಾರಿಯಾಗಲಿದೆ. ಅವರ ಆಯ್ಕೆ ರಾಜ್ಯದ ನಾಯಕರಿಗೆ ಹೈಕಮಾಂಡ್‌ ನೀಡಿರುವ ಗೌರವ.ಸಲೀಂ ಅಹಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.