ಕೇಂದ್ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ: ವಿ.ಸೋಮಣ್ಣ

Team Udayavani, Feb 13, 2021, 12:48 PM IST

ಕೇಂದ್ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ: ವಿ.ಸೋಮಣ್ಣ

ಬೆಂಗಳೂರು: ಎಲ್ಲರಿಗೂ ಸಮಾನ ಆದ್ಯತೆ ನೀಡುವ ಹಾಗೂ ಎಲ್ಲಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಅತ್ಯತ್ತಮ ಆಯವ್ಯಯವನ್ನು ಕೇಂದ್ರ ಸರ್ಕಾರ ಮಂಡಿಸಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರೀಯ ಹೆದ್ದಾರಿಗೆ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಲಾಗಿದೆ. ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗೆ ಅಡಿಗಲ್ಲು ಹಾಕಲಾಗಿದೆ. ಲಕ್ಷ ಕೋಟಿಗೂ ಅಧಿಕ ಅನುದಾನವನ್ನು ಮೂಲಸೌಕರ್ಯಕ್ಕೆ ಮೀಸಲಿಡಲಾಗಿದೆ. ಮೆಟ್ರೋ‌ ಕಾಮಗಾರಿಗೆ 14 ಸಾವಿರಕ್ಕೂ ಅಧಿಕ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ರೈಲ್ವೆ ಉನ್ನತೀಕರಣಕ್ಕೂ ವಿಶೇಷ ಅನುದಾನ ನೀಡಲಾಗಿದೆ. ಸಣ್ಣ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೂ ಕ್ರಮ ತೆಗೆದುಕೊಂಡು, ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಬೆಂಗಳೂರು- ಮಂಗಳೂರು ಸುಗಮ‌ ಸಾರಿಗೆಗೆ ಸಿರಾಡಿ ಘಾಟಿನಲ್ಲಿ ಸುರಂಗ ನಿರ್ಮಾಣಕ್ಕೆ 10 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ

ಕೃಷಿಗೂ ವಿಶೇಷ ಆದ್ಯತೆ ನೀಡಲಾಗಿದೆ. ಹಕ್ಕು ಪತ್ರ ನೀಡುವುದು, ಹಳ್ಳಿಗಳಲ್ಲಿ ಸೌಲಭ್ಯ ಒದಗಿಸಲು ಕ್ರಮ ಆಗಿದೆ. ಕೃಷಿ ಸಾಲ ವಿತರಣೆಗೆ ಅನುದಾನ ಮೀಸಲಿಡಲಾಗಿದೆ. ಹೈನುಗಾರಿಕೆ ಮೀನುಗಾರಿಕೆಗೂ ಅನುದಾನ ನೀಡಲಾಗಿದೆ. ಹೀಗೆ ಎಪಿಎಂಸಿ ಬಲವರ್ಧನೆ, ಕೃಷಿ ಮೂಲಸೌಕರ್ಯ ನಿಧಿ ಬಳಕೆ, ಕೋಲ್ಡ್ ಸ್ಟೋರೇಜ್ ನಿರ್ಮಾಣ ಸೇರಿದಂತೆ ರೈತರಿಗೆ ಅನುಕೂಲ ಆಗುವಂತ ಅನೇಕ ಕ್ರಮ ಬಜೆಟ್ನಲ್ಲಿ ಆಗಿದೆ. ನರೇಗಾದಡಿ ನಗರ ವಲಸೆ ತಪ್ಪಿಸಲು 14ನೇ ಹಣಕಾಸು ಯೋಜನೆಯಡಿ ಪಂಚಾಯತಿಗೆ ನೇರ ಅನುದಾನ ನೀಡುವ ವ್ಯವಸ್ಥೆ ಜಾರಿಗೆ ಮಾಡಿ, ನರೇಗಾ ಯೋಜನೆಗೆ 73 ಸಾವಿರ ಕೋಟಿ ಮೀಸಲಿಡಲಾಗಿದೆ. ಕಾರ್ಮಿಕರಿಗೆ ವಿವಿಧ ಸೌಲಭ್ಯ, ವಿಮಾ ಭದ್ರತೆ ಒದಗಿಸಲು ಸೂಕ್ತ ಕಾನೂನು ಮಾಡಲಾಗಿದೆ ಎಂದರು.

ಇದನ್ನೂ ಓದಿ:ವಿಚಾರಕ್ಕಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಹುಲ್ ಗಾಂಧಿ

ಶುದ್ಧ ಕುಡಿಯುವ ನೀರು, ಬಂದರುಗಳ ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ, ಕೋವಿಡ್ ಲಸಿಕೆ ವಿತರಣೆಗೆ ವಿಶೇಷ ಅನುದಾನ ಸೇರಿದಂತೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ದಿ ಅನುದಾನವನ್ನು ಕೇಂದ್ರ ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.