ನೀರು ನಿರ್ವಹಣೆ ಮಹತ್ವ ಅರಿಯಲು ರೈತರಿಗೆ ಪ್ರವಾಸ


Team Udayavani, Feb 13, 2021, 3:33 PM IST

ನೀರು ನಿರ್ವಹಣೆ ಮಹತ್ವ ಅರಿಯಲು ರೈತರಿಗೆ ಪ್ರವಾಸ

ಮಂಡ್ಯ: ರೈತರಿಗೆ ನೀರು ನಿರ್ವಹಣೆ ಮಹತ್ವ ಅರಿತು ಸುಧಾರಿತ ಬೆಳೆ ಬೆಳೆಯಲು ಅನುಕೂಲವಾಗುವ ನಿಟ್ಟಿನಲ್ಲಿ ನೀರು ಬಳಕೆದಾರರಸಹಕಾರ ಸಂಘಗಳ ಸದಸ್ಯರಿಗೆ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಲಿಂಗಯ್ಯ ತಿಳಿಸಿದರು.

ನಗರದ ಕಾವೇರಿ ನೀರಾವರಿ ನಿಗಮದ ಆವರಣದಿಂದ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯನೀರು ಬಳಕೆದಾರರ ಸಹಕಾರ ಸಂಘಗಳ ಬಳಕೆದಾರರಿಗೆ ಒಂದು ದಿನದ ಅಧ್ಯಯನ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ, ರೈತರು ಕೃಷಿಯಲ್ಲಿ ತಂತ್ರಜ್ಞಾನ ಮನೋಭಾವ ಬೆಳೆಸಿಕೊಳ್ಳಬೇಕಾಗಿದೆ. ವಿಜ್ಞಾನಿಗಳು ಅಥವಾ ಅಧ್ಯಯನಶೀಲರು ಬರಹದ ಮೂಲಕ ಎಷ್ಟೇ ಅರಿವು ಹೊಂದಿದ್ದರೂ, ರೈತರ ಅನು ಭವದ ಆಧಾರದ ಮೇಲೆ ಬಂದ ಬೆಳೆ ನಿರ್ವಹಣೆ, ಸಂಶೋಧನೆ ಹಾಗೂ ಇಳುವರಿಯ ಮಹತ್ವ ಅತಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳಲಿದೆ ಎಂದರು.

ಪ್ರಾತ್ಯಕ್ಷಿತೆ ಮೂಲಕ ಅಧ್ಯಯನ: ರೈತರು ತಾವು ಬೆಳೆದ ಬೆಳೆಗಳನ್ನು ವಿನಿಮಯ ಮಾಡಿಕೊಳ್ಳಲುಕಾಲಕ್ಕನುಗುಣವಾಗಿ ಪ್ರಾತ್ಯಕ್ಷಿತೆ ಮೂಲಕಅಧ್ಯಯನ ಮಾಡುವುದು ಅವಶ್ಯ. ಈ ನಿಟ್ಟಿನಲ್ಲಿಕಾಡಾ ಹಲವು ಕಾರ್ಯ ಸುಧಾರಣಾ ಯೋಜನೆಗಳನ್ನುಹಮ್ಮಿಕೊಳ್ಳಲಾಗಿದೆ ಎಂದರು.

ಕಾಲಕ್ಕನುಗುಣವಾಗಿ ಬೆಳೆ ಬೆಳಿಯಿರಿ: ಕೃಷ್ಣರಾಜಸಾಗರ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಸಹಕಾರ ಮಹಾ ಮಂಡಲದ ಉಪಾಧ್ಯಕ್ಷ ಮಂಗಲ ಎಂ.ಯೋಗೀಶ್‌ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಕೃಷಿಕರು ಸ್ವಾವಲಂಬನೆಯಾಗಲು ಹಲವು ಕಾರ್ಯಯೋಜನೆಗಳನ್ನು ರೂಪಿಸಿದೆ. ಪ್ರಸ್ತುತ ದಿನ ಗಳಲ್ಲಿ ಋತುಮಾನ ಆಧಾರಿತ ಬೆಳೆಗಳ ಮೂಲಕ ಕೃಷಿಯಲ್ಲಿ ಕಾಲಕ್ಕನುಗುಣವಾಗಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಬಹು ವಿಧ ಬೆಳೆಗಳ ಮೂಲಕ ಅಳವಡಿಸಿಕೊಂಡಿದ್ದಾರೆ ಎಂದರು.

ಕಾಯ್ದೆ ಸಮರ್ಪಕವಾಗಿ ಬಳಸಿಕೊಳ್ಳಿ: ನೀರು ಬಳಕೆದಾರರ ಸಹಕಾರ ಸಂಘಗಳು ನೀರಾವರಿ ಕಾಯ್ದೆಗೆ ಅನು ಗುಣವಾಗಿ ಕರ್ತವ್ಯ ನಿರ್ವಹಿಸು ತ್ತಿದ್ದು, ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜಯಲ್ಲಿನೀರು ನಿರ್ವಹಣೆಗೆ ರೈತರ ಸಹಭಾಗಿತ್ವ ಅಗತ್ಯ ಎಂದು ಮನಗಂಡು 2000ನೇ ಇಸವಿಯಲ್ಲಿ ರಾಜ್ಯ ಸರ್ಕಾರ ಇಡೀ ರಾಜ್ಯಕ್ಕೆ ಮಾದರಿ ಯಾದ ಕಾಯ್ದೆಯನ್ನು ರೂಪಿಸಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದರು.

ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್‌ ವಿಜಯ ಕುಮಾರ್‌,ಕಾಡಾದ ಸಹಾಯಕ ಕೃಷಿ ಅಧಿಕಾರಿ ಗಳಾದ ಜೆ. ಕುಮಾರ್‌, ಕೆ.ರಂಗಸ್ವಾಮಿ, ಕೃಷಿಕ ಲಯನ್ಸ್‌ ಸಂಸ್ಥೆಯ ಪೋಷಕ ಕೆ.ಟಿ.ಹನುಮಂತು ಹಾಜರಿದ್ದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.