ಚಳ್ಳಕೆರೆ ಕಾಂಗ್ರೆಸ್‌ ಭದ್ರಕೋಟೆ: ರಘುಮೂರ್ತಿ

ಅಧ್ಯಕ್ಷ-ಉಪಾಧ್ಯಕರು-ಮತದಾರರಿಗೆ ಅಭಿನಂದನೆ! ­ಬೆಂಬಲಿಗರೊಂದಿಗೆ ಸಂಭ್ರಮಾಚರಣೆ

Team Udayavani, Feb 13, 2021, 3:35 PM IST

MLA Venkatesh

ಚಳ್ಳಕೆರೆ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಪಡೆಯುವ ಮೂಲಕ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಅವರು, ಸುಮಾರು ಮೂರು ದಿನಗಳಿಂದ ನಿರಂತರವಾಗಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾದ ನಂತರ ಪಕ್ಷದ ಕಾರ್ಯಾಲಯಕ್ಕೆ ಆಗಮಿಸುತ್ತಿದ್ದು, ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ ಪದವಿ ಪಡೆದವರೆಲ್ಲರನ್ನೂ ಅಭಿನಂದಿಸುವುದಲ್ಲದೆ, ಇದಕ್ಕೆ ಸಹಕಾರ ನೀಡಿದ ಗ್ರಾಮ ಪಂಚಾಯಿತಿ ಸದಸ್ಯ, ಕಾಂಗ್ರೆಸ್‌ ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರು, ಶ್ರಮಿಸಿದ ಪಕ್ಷದ ಮುಖಂಡರು, ಪದಾ ಕಾರಿಗಳು ಹಾಗೂ ಪಕ್ಷದ ಅಭಿಮಾನಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನೆಲಕಚ್ಚಲಿದೆ ಎಂದು ವಿರೋಧ ಪಕ್ಷದವರು ನಿರಂತರವಾಗಿ ಪಕ್ಷದ ಮೇಲೆ ಸುಳ್ಳು ಆರೋಪಗಳ ಮೂಲಕ ಸವಾರಿ ಮಾಡುತ್ತಿದ್ದು, ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿರೀಕ್ಷೆಗೂ ಮೀರಿ ಹೆಚ್ಚಿನ ಸ್ಥಾನಗಳಿಸಿದೆ. ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡುವತ್ತ ಪಕ್ಷ ಹೆಜ್ಜೆ ಇಟ್ಟಿದೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 26 ಗ್ರಾಪಂಗಳಿದ್ದು, ಆ ಪೈಕಿ 20ಕ್ಕೂ ಹೆಚ್ಚು ಗ್ರಾಪಂಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತಗಳಿಸಿ ವಿರೋಧ ಪಕ್ಷಗಳ ಟೀಕೆಗೆ ಉತ್ತರ ನೀಡಿದೆ. ಮುಂಬರುವ ದಿನಗಳಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಎಲ್ಲರೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚು ಗಮನ ನೀಡುವಂತೆ ಈಗಾಗಲೇ ಎಲ್ಲರಿಗೂ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣಾ ಸಂದರ್ಭದಲ್ಲಿ ಮತ ಎಣಿಕೆ ಮತ್ತು ಮೀಸಲಾತಿ ನಿಗದಿಯಲ್ಲಿ ಕಾಂಗ್ರೆಸ್‌ ಯಾವುದೇ ರೀತಿಯ ತಕರಾರು ಎತ್ತದೆ ಸಹಕಾರ ನೀಡಿದ ಫಲವಾಗಿ ಕ್ಷೇತ್ರದ  ಮತದಾರರು ಮತ್ತೂಮ್ಮೆ ಕಾಂಗ್ರೆಸ್‌ ಮೇಲೆ ಬಲವಾದ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದು, 20 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಿರಂತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈ ಜೋಡಿಸುವ ಕುರಿತು ಆಯಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಲಾಗುವುದು ಎಂದರು.

ಇದನ್ನೂ ಓದಿ :

ಕ್ಷೇತ್ರದ ಪ್ರತಿಷ್ಠಿತನ ಎಲ್ಲಾ ಗ್ರಾಪಂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ನಿಚ್ಚಳ ಬಹುಮತ ಪಡೆದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದರೂ ಸಹ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜನತೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತ ಚಲಾವಣೆ ಮಾಡುವ ಮೂಲಕ ಪಕ್ಷವನ್ನು ಬೆಂಬಲಿಸಿದೆ ಎಂದರು.

ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಸಿ.ಎಂ. ಶಿವಕುಮಾರಸ್ವಾಮಿ, ಚಲುಮೇಶ್‌, ಜಾಜೂರು ಗ್ರಾಪಂ ಅಧ್ಯಕ್ಷೆ ವರಲಕ್ಷ್ಮಿ, ಉಪಾಧ್ಯಕ್ಷ ರಂಜನ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.