ಪಕ್ಷ ನಿಷ್ಠ ಮಲ್ಲಿಕಾರ್ಜುನ ಖರ್ಗೆಗೆ ವಿಪಕ್ಷ ನಾಯಕ ಪಟ್ಟ

ಖರ್ಗೆ ಗೆಲ್ಲೇಬೇಕೆಂಬ ಛಲದಿಂದ ಕಾಲಿಗೆ ಚಕ್ರ ಕಟ್ಟಿಕೊಂಡದಂತೆ ಕ್ಷೇತ್ರದ ತುಂಬಾ ಸುತ್ತಿದರು.

Team Udayavani, Feb 13, 2021, 3:30 PM IST

ಪಕ್ಷ ನಿಷ್ಠ ಮಲ್ಲಿಕಾರ್ಜುನ ಖರ್ಗೆಗೆ ವಿಪಕ್ಷ ನಾಯಕ ಪಟ್ಟ

ಕಲಬುರಗಿ: ಹಿರಿಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಪಕ್ಷ ನಿಷ್ಠೆ ಮತ್ತು ಗಟ್ಟಿತನಕ್ಕೆ ಕಾಂಗ್ರೆಸ್‌ ಮತ್ತೂಮ್ಮೆ ಮನ್ನಣೆ ನೀಡಿದೆ. ಕಳೆದ ಬಾರಿ ಲೋಕಸಭೆಯಲ್ಲಿ ಪಕ್ಷದ ಸಂಸದೀಯ ನಾಯಕರಾಗಿ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಿದ್ದ ಖರ್ಗೆಗೆ ಈಗ ಸಂಸತ್‌ನ ಹಿರಿಯರ ಮನೆಯ ಅ ಧಿಕೃತ ವಿರೋಧ ಪಕ್ಷದ ನಾಯಕ ಪಟ್ಟ ಒಲಿದಿದ್ದು, ತವರು ಜಿಲ್ಲೆ ಕಲಬುರಗಿಯಲ್ಲಿ ಸಂಭ್ರಮ ಮನೆ ಮಾಡಿದೆ.

78 ವರ್ಷದ ಕರ್ನಾಟಕದ ಹಿರಿಯ ರಾಜಕಾರಣಿ ಯಾದ ಡಾ| ಮಲ್ಲಿಕಾರ್ಜುನ ಖರ್ಗೆ ಮೂಲತಃ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ವರವಟ್ಟಿ ಗ್ರಾಮದವರು. ತಂದೆ ಮಾಪಣ್ಣ ಕಲಬುರಗಿ ನಗರದ ಎಂಎಸ್‌ಕೆ ಮಿಲ್‌ನಲ್ಲಿ ಕಾರ್ಮಿಕರಾಗಿದ್ದರು. ಆದ್ದರಿಂದ ಖರ್ಗೆ ತಮ್ಮ ಕರ್ಮಭೂಮಿ ಮತ್ತು ತವರೂರಾಗಿ ಕಲಬುರಗಿಯನ್ನೇ
ಆಯ್ಕೆ ಮಾಡಿಕೊಂಡು ಇಲ್ಲಿಯೇ ಉಳಿದರು.

ಬಿಎ, ಎಲ್‌ಎಲ್‌ಬಿ ಪದವೀಧರರಾದ ಖರ್ಗೆ, ಆರಂಭದಲ್ಲಿ ವಕೀಲರಾಗಿ, ಕಾರ್ಮಿಕ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಕಲಬುರಗಿ ಮುನ್ಸಿಪಾಲಿಟಿ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದರು. ನಂತರ 1972ರಲ್ಲಿ ಅಂದಿನ ಅವಿಭಜಿತ ಕಲಬುರಗಿ ಜಿಲ್ಲೆಯ ಗುರುಮಠಕಲ್‌ ವಿಧಾನಸಭೆ ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಕಣಕ್ಕೆ ಧುಮುಕಿದರು. ಅಲ್ಲಿಂದ ಅವರು ಹಿಂತಿರುಗಿ ನೋಡಲೇ ಇಲ್ಲ. ಸತತವಾಗಿ ಒಂಭತ್ತು ಬಾರಿ ಅಂದರೆ 2009ರವರೆಗೆ (37 ವರ್ಷ) ವಿಧಾನಸಭೆಗೆ ಆಯ್ಕೆಯಾದರು.

ಅನುಭವಿ ರಾಜಕಾರಣಿ: ದೇವರಾಜ ಅರಸು, ಗುಂಡೂರಾವ್‌, ಎಸ್‌.ಬಂಗಾರಪ್ಪ, ಎಂ.ವೀರಪ್ಪ ಮೊಯ್ಲಿ,ಎಸ್‌.ಎಂ. ಕೃಷ್ಣ, ಎನ್‌.ಧರ್ಮಸಿಂಗ್‌ ಸಂಪುಟದಲ್ಲಿ ಹಲವು ಖಾತೆಗಳನ್ನು ನಿಭಾಯಿಸಿದರು. 1976ರಲ್ಲಿ ಮೊದಲ ಬಾರಿಗೆ ದೇವರಾಜು ಅರಸು ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ಸಹಾಯಕ ಸಚಿವರಾಗಿದ್ದರು. ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌, ಕಂದಾಯ, ಸಹಕಾರ, ಮಧ್ಯಮ ಮತ್ತು ಬೃಹತ್‌ ಕೈಗಾರಿಕೆ, ಗೃಹ, ಮೂಲಭೂತ ಸೌಕರ್ಯ, ಜಲಸಂಪನ್ಮೂಲ ಹೀಗೆ ಅನೇಕ ಖಾತೆಗಳನ್ನು ನಿರ್ವಹಿಸಿದ ಅನುಭವಿ ರಾಜಕಾರಣಿ ಖರ್ಗೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ,
ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ, ವಿಧಾನಸಭೆ ವಿರೋಧ ನಾಯಕರಾಗಿಯೂ ಕೆಲಸ ಮಾಡಿದ್ದಾರೆ.

2009ರ ಲೋಕಸಭೆ ಚುನಾವಣೆ ಮೂಲಕ ಖರ್ಗೆ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟರು. ಲೋಕಸಭೆಗೆ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿ, ಎಐಸಿಸಿ ಪ್ರಧಾನ
ಕಾರ್ಯದರ್ಶಿಯಾಗಿ, ಮಹಾರಾಷ್ಟ್ರದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯಾಗಿಯೂ ದುಡಿದರು.

ಡಾ| ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ-2 ಸರ್ಕಾರದಲ್ಲಿ ಸಂಸದರಾದ ಅವರು ಮೊದಲ ಬಾರಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿ, ನಂತರ
ಮಹತ್ವದ ರೈಲ್ವೆ ಖಾತೆ ಮತ್ತು ಹೆಚ್ಚುವರಿಯಾಗಿ ಸಾಮಾಜಿಕ ನ್ಯಾಯ, ಸಬಲೀಕರಣ ಖಾತೆಗಳನ್ನು ನಿರ್ವಹಿಸಿದರು. 2014ರಲ್ಲಿ ದೇಶದಲ್ಲಿ ನರೇಂದ್ರ ಮೋದಿ ಅಲೆ ನಡುವೆಯೂ ಎರಡನೇ ಬಾರಿಗೆ ಸಂಸತ್‌ ಗೆ ಆಯ್ಕೆಯಾಗಿ ಸೋಲಿಲ್ಲದ ಸರ್ದಾರ ಎಂದೇ ಹೆಸರುವಾಸಿಯಾದರು.

ಮಾತಿನೇಟು ಕೊಡುವ ಚಾಣಾಕ್ಷ: 2014ರಿಂದ 2019ರ ವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕನಾಗಿ ತಮ್ಮ ವಾಗ್ಝರಿ ಮೂಲಕ ದೇಶದ ಗಮನ ಸೆಳೆದರು. ಕಾಂಗ್ರೆಸ್‌ಗೆ ಶೇ.10ಕ್ಕಿಂತಲೂ ಕಡಿಮೆ ಸ್ಥಾನ ಬಂದ ಕಾರಣ ಅಧಿಕೃತ ಪ್ರತಿಪಕ್ಷದ ಸ್ಥಾನ ಸಿಕ್ಕಿರಲಿಲ್ಲ. ಆದರೆ, ಪಕ್ಷದ ಸಂಸದೀಯ ನಾಯಕರಾಗಿ ಖರ್ಗೆ ಅವರು, ಲೋಕಸಭೆಯಲ್ಲಿ ದಾಖಲೆ ಸಮೇತವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದರು. ಕನ್ನಡದಷ್ಟೇ ಸರಾಗವಾಗಿ ಹಿಂದಿ, ಉರ್ದು ಮಾತನಾಡುವ ಅವರು,ಇಂಗ್ಲಿಷ್‌ ಮೇಲೂ ಬಿಗಿಹಿಡಿತ ಹೊಂದಿದ್ದಾರೆ. ತಮ್ಮ ಮೊನಚು ಮಾತುಗಳ ಮೂಲಕವೇ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿ ಸೈ ಎನಿಸಿಕೊಂಡಿದ್ದರು.

ಇಷ್ಟು ಸುಧೀರ್ಘ‌ ರಾಜಕೀಯ ಹಿನ್ನೆಲೆ ಹೊಂದಿರುವ ಖರ್ಗೆ, 2019ರ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದರು. ಲೋಕಸಭೆಯ
ಚರ್ಚೆಯೊಂದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರನ್ನು ಉದ್ದೇಶಿಸಿ “ನೀವು ಮುಂದೆ ಈ ಸ್ಥಳದಲ್ಲಿ ಇರುತ್ತಿರೋ, ಇಲ್ಲವೋ ಗೊತ್ತಿಲ್ಲ’ ಎಂದು
ಛೇಡಿಸಿದ್ದರು. ಹೀಗಾಗಿಯೋ ಏನೋ, ಖರ್ಗೆ ಗೆಲ್ಲೇಬೇಕೆಂಬ ಛಲದಿಂದ ಕಾಲಿಗೆ ಚಕ್ರ ಕಟ್ಟಿಕೊಂಡದಂತೆ ಕ್ಷೇತ್ರದ ತುಂಬಾ ಸುತ್ತಿದರು. ಆದರೆ, ಬಿಜೆಪಿಯಿಂದ
ಸ್ಪರ್ಧಿಸಿದ್ದ ಡಾ|ಉಮೇಶ ಜಾಧವ ಎದುರು ಖರ್ಗೆ ಪರಾಭವಗೊಂಡರು.

ಆದರೂ, ಖರ್ಗೆ ಅವರ ಪಕ್ಷ ನಿಷ್ಠೆಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಗುರುತಿಸಿತ್ತು. ಕಳೆದ ಜೂನ್‌ನಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ
ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರಿಗೂ ಯಾವುದೇ ಮುನ್ಸೂಚನೆ ನೀಡದೆ ಖರ್ಗೆ ಅವರನ್ನು ಆಯ್ಕೆ ಮಾಡಿತ್ತು. ಆಗ ಖರ್ಗೆ ಅವರ ಪಕ್ಷ ನಿಷ್ಠೆಗೆ
ಒಲಿದ ಗೆಲುವು ಎಂದೇ ವಿಶ್ಲೇಷಿಸಲಾಗಿತ್ತು. ಈಗ ಅದೇ ಪಕ್ಷ ನಿಷ್ಠೆಗೆ ರಾಜ್ಯಸಭೆಯಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೈಕಮಾಂಡ್‌ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ನೀಡಿದ್ದಾರೆ. ಸೋಮವಾರ ಅಥವಾ ಮಂಗಳವಾರ ಅಧಿಕೃತವಾಗಿ ಪ್ರಕಟಣೆಯಾಗಬಹುದು. ನಂತರ ನಾನು ಮಾತನಾಡುತ್ತೇನೆ. ಪಕ್ಷ ವಹಿಸಿದ ಹೊಣೆಗಾರಿಕೆ ನಿರ್ವಹಣೆ ಮಾಡುವುದಷ್ಟೇ ನನ್ನ ಕೆಲಸ.
ಡಾ| ಮಲ್ಲಿಕಾರ್ಜುನ ಖರ್ಗೆ

ಇಡೀ ದೇಶದ ಜನತೆ ಪ್ರಧಾನಿ ಮೋದಿ ದುರಾಡಳಿತ ಹಾಗೂ ಜನವಿರೋಧಿ  ನೀತಿ ವಿರುದ್ಧ ಸಿಡಿದೆದ್ದಿದ್ದಾರೆ. ಎಲ್ಲರ ಧ್ವನಿಯಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ತಮ್ಮ ರಾಜಕೀಯ ಜೀವಮಾನದುದ್ದಕ್ಕೂ ಸವಾಲುಗಳನ್ನೇ ಎದುರಿಸಿಕೊಂಡು ಬಂದಿರುವ ಅವರು ಪಕ್ಷ ನೀಡಿರುವ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ.
ಪ್ರಿಯಾಂಕ್‌ ಖರ್ಗೆ, ಮಾಜಿ ಸಚಿವ

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.