ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಕಲ್ಪಿಸಿ


Team Udayavani, Feb 13, 2021, 4:00 PM IST

ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಕಲ್ಪಿಸಿ

ಚಿಕ್ಕಬಳ್ಳಾಪುರ: ಜಲ ಜೀವನ್‌ ಮಿಷನ್‌ ಯೋಜನೆಯಡಿ ಜಿಲ್ಲೆಯ ಎಲ್ಲಾ ಸರ್ಕಾರಿಶಾಲೆಗಳಲ್ಲಿ ಅಡುಗೆ ಮನೆ, ಶೌಚಾಲಯ ಹಾಗೂಕುಡಿಯುವ ನೀರಿಗಾಗಿ ಪ್ರತ್ಯೇಕ ಪೈಪ್‌ಲೈನ್‌ಅಳವಡಿಸಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್‌ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಲಜೀವನ್‌ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯೋಜನೆಯಡಿ ಈಗಾಗಲೇ ಹಲವು ಕಾಮಗಾರಿ ಕೈಗೊಂಡಿದ್ದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಅಡುಗೆ ಕೊಠಡಿ, ಶೌಚಾಲಯ, ಕುಡಿಯುವುದಕ್ಕಾಗಿ ಹೀಗೆ ಮೂರು ಕಡೆ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಧಾರ್‌ ಲಿಂಕ್‌ ಮಾಡಿಸಿ: ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಆಧಾರ್‌ ಲಿಂಕ್‌ ಮಾಡಬೇಕು. ಪಿಂಚಣಿದಾರರು ಮೃತಪಟ್ಟಿದ್ದರೆ, ಅಂತಹವರನ್ನು ಪತ್ತೆ ಮಾಡಿ, ಅವರ ಪಿಂಚಣಿ ರದ್ದು ಮಾಡಬೇಕು. ಎಲ್ಲಾ ಪಡಿತರ ಚೀಟಿಗಳಿಗೂ ಶೇ.100ರಷ್ಟು ಆಧಾರ್‌ ಸೀಡಿಂಗ್‌ನ್ನು ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದರು.

ಪೋಡಿ ಮುಕ್ತ ತಾಲೂಕು: ಜಿಲ್ಲಾಧಿಕಾರಿ ಆರ್‌. ಲತಾ ಮಾತನಾಡಿ, ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ ಮೂರು ತಾಲೂಕುಗಳನ್ನು ಈಗಾಗಲೇ ಪೋಡಿಮುಕ್ತ ತಾಲೂಕುಗಳನ್ನಾಗಿಘೋಷಣೆ ಮಾಡಲಾಗಿದೆ. ಗುಡಿಬಂಡೆ ತಾಲೂಕುಜಿಲ್ಲೆಯ ಮೊಟ್ಟ ಮೊದಲ ಪೋಡಿಮುಕ್ತ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇನ್ನುಳಿದಂತೆ 3ಮೂರು ತಾಲೂಕುಗಳನ್ನು ಶೀಘ್ರದಲ್ಲೇ ಪೋಡಿಮುಕ್ತವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

1,596 ಗ್ರಾಮಗಳಿಗೆ ರುದ್ರಭೂಮಿ ಬೇಕು: ಜಿಲ್ಲೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳವಿಲೇವಾರಿ ಘಟಕಗಳ ನಿರ್ಮಾಣಕ್ಕಾಗಿ ಒಟ್ಟು 157ಪ್ರಸ್ತಾವನೆ ಸ್ವೀಕರಿಸಲಾಗಿದ್ದು, ಈ ಪೈಕಿ ಒಟ್ಟು 124 ಗ್ರಾಪಂಗಳಿಗೆ 51 ಪ್ರಸ್ತಾವನೆಗಳಿಗೆ ಮಂಜೂರಾತಿಸಿಕ್ಕಿದೆ. ಇನ್ನೂ 26 ಗ್ರಾಪಂಗಳಿಗೆ ಮ ಪಂಚಾಯಿತಿಗಳಿಗೆ ಬಾಕಿ ಇದೆ. ಇನ್ನು ಜಿಲ್ಲೆಯಲ್ಲಿರುದ್ರಭೂಮಿ ನಿರ್ಮಾಣ ಸಂಬಂಧ ಒಟ್ಟು 1,606 ಗ್ರಾಮಗಳ ಪೈಕಿ 1,596 ಗ್ರಾಮಗಳಿಗೆ ರುದ್ರಭೂಮಿ ಕಲ್ಪಿಸಲಾಗಿದ್ದು, 10 ಗ್ರಾಮಗಳಿಗೆ ರುದ್ರಭೂಮಿ ಕಲ್ಪಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರ್ತಿಸಲಾಗಿದ್ದು, ಈ ಪೈಕಿ 2 ಗ್ರಾಮಗಳಿಗೆಟ್ಯಾಂಕರ್‌ ಮೂಲಕ ಹಾಗೂ 23 ಗ್ರಾಮಗಳಿಗೆಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್‌ಲೋಕೂರ್‌ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್‌. ಅಮರೇಶ್‌, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಡಿವೈಎಸ್‌ಪಿ ರವಿಶಂಕರ್‌ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅದಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.