![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 13, 2021, 5:08 PM IST
ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಸ್ಟಾರ್ ಸಂಗೀತ ನಿರ್ದೇಶಕ ರವಿ ಬಸ್ರೂರು ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್ 2 ಸಿನಿಮಾ ಬಿಡುಗಡೆ ಮುನ್ನವೆ ಭರ್ಜರಿ ಹೈಪ್ ಕ್ರಿಯೇಟ್ ಮಾಡಿದೆ.
ಕೆಲ ದಿನಗಳ ಹಿಂದೆ ಬಿಡುಗಡೆಯಾದ ಕೆಜಿಎಫ್ 2 ಚಿತ್ರದ ಟೀಸರ್ ಸಾರ್ವಕಾಲಿಕ ದಾಖಲೆ ಬರೆದು ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿತ್ತು. ಟೀಸರ್ ಗೆ ಸಿಕ್ಕ ಯಶಸ್ಸು ಚಿತ್ರತಂಡಕ್ಕೆ ಸಂತಸ ನೀಡಿತು. ಇದೇ ಖುಷಿಯಲ್ಲಿರುವ ಚಿತ್ರತಂಡ 2021ರ ಜುಲೈ 16 ರಂದು ಕೆಜಿಎಫ್ 2 ಚಿತ್ರ ತೆರೆ ಮೇಲೆ ಪ್ರದರ್ಶಿಸುತ್ತಿದೆ. ಅಂದು ಎಲ್ಲೆಡೆ ರಾಕಿ ಭಾಯ್ ಅಬ್ಬರ ಶುರುವಾಗಲಿದೆ.
ಸದ್ಯ ಕೆಜಿಎಫ್ 2 ಸಿನಿಮಾ ಕುರಿತು ಮತ್ತೊಂದು ಹೊಸ ಮಾಹಿತಿ ಹೊರಬಿದ್ದಿದೆ. ಈ ಚಿತ್ರದ ಡಿಜಿಟಲ್ ರೈಟ್ಸ್ ಅಮೆಜಾನ್ ಪ್ರೈಂ ತೆಕ್ಕೆಗೆ ಬಿದ್ದಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಲಂ ಸಿನಿಮಾ ಡಿಜಿಟಲ್ ಹಕ್ಕುಗಳನ್ನು ಅಮೆಜಾನ್ ಪ್ರೈಂ ಖರೀದಿಸಿದೆ ಎಂದು ತಿಳಿದು ಬಂದಿದೆ. ಆದರೆ, ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ :‘ಪೊಗರು’ಗೆ ಟಗರು ಸಾಥ್… ಆಡಿಯೋ ಬಿಡುಗಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆಹ್ವಾನ
ಇನ್ನು ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಮೊದಲ ಭಾಗ ಭರ್ಜರಿ ಹಿಟ್ ಆಗಿತ್ತು. ಈ ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ದೊಡ್ಡ ಹೆಸರು ದಯಪಾಲಿಸಿತ್ತು. ಇದೀಗ ಕೆಜಿಎಫ್ 2 ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಜುಲೈ 16 ರಂದು ಚಿತ್ರಮಂದಿರಗಳಿಗೆ ಕೆಜಿಎಫ್ 2 ಸಿನಿಮಾ ಎಂಟ್ರಿ ಕೊಡಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.