ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ
Team Udayavani, Feb 13, 2021, 8:53 PM IST
ಕಾರವಾರ: ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳಡಿಜಿಲ್ಲೆಯಲ್ಲಿ ಕೈಗೆತ್ತಿಕೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಆರ್ಥಿಕ ವರ್ಷದಅಂತ್ಯದೊಳಗೆ ಪೂರ್ಣಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, 2021ರ ಮಾರ್ಚ್ ತಿಂಗಳಿಗೆ2020ರ ಆರ್ಥಿಕ ವರ್ಷ ಅಂತ್ಯವಗಲಿದೆ.ವಿವಿಧ ಯೋಜನೆಗಳ ಕೋಟಿ ಕೋಟಿಅನುದಾನದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನುಕೈಗೆತ್ತಿಕೊಳ್ಳಲಾಗಿದ್ದು, ಈ ಕಾಮಗಾರಿಗಳ ಪ್ರಗತಿ ಕುರಿತು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಜೊತೆಗೆ ಯಾವುದಾದರೂ ಕಾಮಗಾರಿಗಳುಅನುದಾನದ ಕೊರತೆಯಿಂದ ಸ್ಥಗಿತವಾಗಿದ್ದರೆ. ಅಂತಹ ಸಮಸ್ಯೆಗಳನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು ಎಂದು ತಿಳಿಸಿದರು.
ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ, ಪಿಡಬ್ಲ್ಯುಡಿ, ಕೆಆರ್‌ಐಡಿಎಲ್, ಹೆಸ್ಕಾಂ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇಕಾರಣಕ್ಕೂ ಜಿಲ್ಲೆಯ ಗ್ರಾಮೀಣ ಹಾಗೂನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಬೇಕು ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಇಷ್ಟುದಿನ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಶಾಲಾ,ಕಾಲೇಜುಗಳು ಇದೀಗ ಮರಳಿಪ್ರಾರಂಭವಾಗಿವೆ. ಜಿಲ್ಲೆಯ ಎಲ್ಲಭಾಗದಿಂದ ಶಿಕ್ಷಣಕ್ಕಾಗಿ ಮಕ್ಕಳು ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಸಂಚರಿಸಬೇಕಿದೆ.
ಹೀಗಾಗಿ ಸಂಬಂಧಿಸಿದ ಎಲ್ಲ ಇಲಾಖೆಅಧಿಕಾರಿಗಳು ಮಕ್ಕಳ ವಿದ್ಯಾಭ್ಯಾಸಕ್ಕೆಪೂರಕ ವಾತಾವರಣ ಕಲ್ಪಿಸಬೇಕಿದೆ. ಈನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ಕೋವಿಡ್-19 ಮುನ್ನೆಚ್ಚರಿಕೆ ಕ್ರಮ, ಕೆಎಸ್ ಆರ್‌ಟಿಸಿ ಸಂಚಾರ ವ್ಯವಸ್ಥೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಊಟ-ವಸತಿಸೇರಿದಂತೆ ವಿವಿಧ ವ್ಯವಸ್ಥೆಗಳ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಿನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಈಗಾಗಲೇ ಮನೆಗಳುಮಂಜೂರಾಗಿವೆ. ಆಯ್ಕೆ ಪ್ರಕ್ರಿಯೆಯೂಪೂರ್ಣಗೊಂಡಿದ್ದು, ಈವರೆಗೂ ಮನೆಗಳಹಂಚಿಕೆಯಾಗಿಲ್ಲ. ಹೀಗಾಗಿ ಸಂಬಂಧಿಸಿದಅಧಿಕಾರಿಗಳು ಫಲಾನುಭವಿಗಳಿಗೆ ಮನೆ ಹಂಚುವ ಪ್ರಕ್ರಿಯೆಗೆ ಏನಾದರೂ ತೊಡಕುಗಳಿದ್ದರೆ ಕೂಡಲೇಸರಿಪಡಿಸಿಕೊಂಡು ಆರ್ಥಿಕ ವರ್ಷದ ಅಂತ್ಯದೊಳಗೆ ಮನೆ ಹಂಚಿಕೆಗೆ ಚಾಲನೆ ನೀಡಬೇಕು ಎಂದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಅನೇಕ ಯೋಜನೆಗಳಡಿ ರೈತರಿಗೆ ಅನುಕೂಲವಾಗುವಂತ ಕಾರ್ಯ ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೀಜ, ಗೊಬ್ಬರ, ತಾಡಪತ್ರೆವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.ಅಧ್ಯಕ್ಷರ ಪ್ರಶ್ನೆಗೆ ಉತ್ತರಿಸಿದ ಕೃಷಿಅಧಿಕಾರಿ, ಪ್ರಸಕ್ತ ವರ್ಷದಿಂದ ಪ್ರತಿಯೊಬ್ಬರೈತ ಪ್ರತಿ ತಿಂಗಳು ತನ್ನ ಕೃಷಿ ಭೂಮಿಗೆ ಅನುಗುಣವಗಿ 50 ಚೀಲ ಗೊಬ್ಬರಪಡೆಯಬಹುದು ಎಂದು ಕೇಂದ್ರಸರಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗೊಬ್ಬರ ವಿತರಿಸಲಾಗುತ್ತಿದೆ.ಅಲ್ಲದೇ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ತಾಡಪತ್ರೆಗೆ ರೈತರು ಬೇಡಿಕೆ ಸಲ್ಲಿಸಿದ್ದಾರೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ತಾಡಪತ್ರೆ ಮಂಜೂರಾತಿಗೆ ಪತ್ರ ಬರೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿಜಿಲ್ಲೆಯ ಪ್ರತೀ ತಾಲೂಕಿಗೆ 4-5 ನೂರು ತಾಡಪತ್ರೆಗಳು ಮಂಜೂರಾಗಬಹುದು ಎಂದು ತಿಳಿಸಿದರು.
ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಅಧ್ಯಕ್ಷ ಬಸವರಾಜ ದೊಡ್ಮಮನಿ, ಶಿಕ್ಷಣಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷೆ ಚೈತ್ರಾ ಕೋಠಾರಕರ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿಸಮಿತಿ ಅಧ್ಯಕ್ಷೆ ಉಷಾ ನಾಯ್ಕ, ಜಿಪಂಆಡಳಿತ ವಿಭಾಗದ ಉಪಕಾರ್ಯದರ್ಶಿನಾಗೇಶ ರಾಯ್ಕರ್ ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.