ರಾಜ್ಯದಲ್ಲಿ ಹೆಚ್ಚಿದ ಮೀಸಲಾತಿ ಹೋರಾಟದ ಕಿಚ್ಚು..ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು
Team Udayavani, Feb 14, 2021, 12:41 PM IST
ಬೆಂಗಳೂರು: ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಕರ್ನಾಟಕ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ? ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂದು ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ ಬಿಜೆಪಿ ನಾಯಕರೇ ಎಂದು ಗುಡುಗಿದ್ದಾರೆ.
ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?.
ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು. ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಇದನ್ನೂ ಓದಿ :ಮಸ್ಕಿ: ಪ್ರಥಮ ಸಾಹಿತ್ಯ ಸಮ್ಮೇಳನ ಸಡಗರ
ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಯಲ್ಲಿದೆ. ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.