ಕನ್ನಡ ಇದು ನಮ್ಮ ಮೂಲ ಆಸ್ತಿ. ಅದು ಕ್ಷೀಣಿಸಬಾರದು :ಇಟಗಿ

Team Udayavani, Feb 14, 2021, 1:20 PM IST

Kannada is our basic asset

ಧಾರವಾಡ: ಕನ್ನಡ ಇದು ನಮ್ಮ ಮೂಲ ಆಸ್ತಿ. ಅದು ಕ್ಷೀಣಿಸಬಾರದು. ಈ ನಿಟ್ಟಿನಲ್ಲಿ ‌ನಮ್ಮ ಪ್ರಯತ್ನ ಇರಬೇಕು. ಕನ್ನಡದ ಬಗೆಗೆ ನಮಗಿರಬೇಕಾದ ನಿಷ್ಠೆ ಬದ್ದತೆ ನಿತ್ಯ ಜೊತೆಗಿರಬೇಕು ಎಂದು ಧಾರವಾಡ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನಾಧ್ಯಕ್ಷರಾದ ಮಕ್ಕಳ ಸಾಹಿತಿ ಲಿಂಗಣ್ಣ ಕುಂಟಿ ( ಇಟಗಿ)  ಹೇಳಿದರು.

ತಾಲೂಕಿನ ಇಟಿಗಟ್ಟಿ ಗ್ರಾಮದಲ್ಲಿ ಧಾರವಾಡ ತಾಲೂಕು ಕಸಾಪ ಘಟಕದಿಂದ ಹಮ್ಮಿಕೊಂಡಿದ್ದ ಧಾರವಾಡ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಕನ್ನಡವಿದು ನಮ್ಮೆದೆಯ ಭಾಷೆಯಿದು ಎಂಬಂತೆ ನಮ್ಮ ಕನ್ನಡ ಭಾಷೆಯು ನಮ್ಮದೆಯ ಭಾಷೆಯಾಗಬೇಕು. ಮನೆತನದ ಪಾಯವಾಗಬೇಕು. ಈ‌ ನಿಟ್ಟಿನಲ್ಲಿ ಪ್ರಾದೇಶಿಕ ( ಮಾತೃಭಾಷೆ) ಭಾಷೆಯಲ್ಲಿ 1 ರಿಂದ 5ನೇಯ ತರಗತಿವರೆಗಿನ ಮಕ್ಕಳಿಗೆ ಕೊಡುವ ಶಿಕ್ಷಣ ಭದ್ರ ಬುನಾದಿ ನೀಡುತ್ತದೆ‌ ಎಂದರು.

ಇದು ಭಾಷೆಯ ಮೇಲೆ ಪ್ರೀತಿ ಬೆಳೆಸಿಕೊಳ್ಳಲು ಹಾಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸಿಕೊಳ್ಳಲು ತುಂಬಾ ಸಹಕಾರಿ. ಬದಲಾವಣೆ ಬೇಕೆನ್ನುವ ಅನಿವಾರ್ಯತೆಯಲ್ಲಿಯೂ ಮಾತೃಭಾಷೆಯನ್ನು ಉಳಿಸಿಕೊಳ್ಳುವ ಪ್ರಯತ್ನ ನಿರಂತರವಾಗಿ ಇರಬೇಕೆನ್ನುವ ಬಗ್ಗೆ ಎಲ್ಲ ರೀತಿಯ ಪ್ರಯತ್ನ ಮಾಡಬೇಕು ಎಂದರು.

ಅಸಂಖ್ಯಾತ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸಂಖ್ಯೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿಲ್ಲ. ಹೀಗಾಗಿ ಶಿಕ್ಷಕರ ನೇಮಕಾತಿ ಚುರುಕುಗೊಳ್ಳಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಕಂಡು ಬರುವ ಕೊರತೆಗಳನ್ನು ನೀಗಿಸಬೇಕು ಎಂದರು.

ಇದನ್ನೂ ಓದಿ:ಕಾಣೆಯಾಗಿದ್ದ ತಾಯಿ, ಇಬ್ಬರು ಮಕ್ಕಳು ನದಿಯಲ್ಲಿ ಹೆಣವಾಗಿ ಪತ್ತೆ

ಶಾಲಾ ಕಟ್ಟಡಕ್ಕೆ ಕೇವಲ ಸುಣ್ಣ ಬಣ್ಣ ಬಳಿದು ಚಂದಗೊಳಿಸಿದರೆ ಸಾಲದು‌. ವರ್ಗದ ಕೋಣೆಗಳಲ್ಲಿಯ ಪ್ರಗತಿ ಹೆಚ್ಚಾಗಬೇಕು. ರಾಷ್ಟ್ರದ ಭವಿಷ್ಯ ಶಾಲಾ ಕೋಣೆಗಳಲ್ಲಿ ರೂಪಿತಗೊಳ್ಳುತ್ತದೆ. ಅದು ರಾಷ್ಟ್ರ ನಿರ್ಮಾಣದಲ್ಲಿ ಸಿಂಹಪಾಲು ಹೊಂದಿರುವ ಶಿಕ್ಷಕರಿಂದ ಮಾತ್ರ ಎನ್ನುವುದನ್ನು ಚೆನ್ನಾಗಿ ಮನಗಾಣಬೇಕು ಎಂದರು.

ಧಾರವಾಡ ತಾಲೂಕು ಸಾಹಿತ್ಯ ಪರಿಷತ್ತು, ಧಾರವಾಡ ಶಹರವನ್ನು ಒಳಗೊಂಡು ಬಹಳ ದೊಡ್ಡ ವ್ಯಾಪ್ತಿ‌ ಹೊಂದಿದೆ. ಆದರೆ ಶಹರದಲ್ಲಿಯೇ ಹೆಚ್ಚು ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯುವುದರಿಂದ ಗ್ರಾಮೀಣ ಭಾಗಕ್ಕೆ ಕೊಡಬೇಕಾದಷ್ಟು ಅವಕಾಶ ಸಿಗುತ್ತಿಲ್ಲ. ಈ ಕಾರಣದಿಂದ ಧಾರವಾಡ ಶಹರವನ್ನು ಒಂದು‌ ಸಾಹಿತ್ಯ ಘಟಕವನ್ನಾಗಿಸಿ ಧಾರವಾಡ ತಾಲೂಕಿನ ಹಳ್ಳಿಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುವ ಹಾಗೇ ಕ್ರಮ‌ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಿರ್ಜೀವ ವಸ್ತುಗಳಿಗೆ ಕೃತಕ ಜೀವ ತುಂಬಿ ಅದರಿಂದ ಭವಿಷ್ಯ ರೂಪಿಸುವುದು ಸದ್ಯದ ಆಘಾತಕಾರಿ ಅಂಶ. ಅಂತರ್ಜಾಲ (ಆನ್ ಲೈನ್) ಶಿಕ್ಷಣದ ತೊಳಲಾಟದಿಂದ ಮಕ್ಕಳನ್ನು ಪಾರು ಮಾಡುವಲ್ಲಿ ಶಿಕ್ಷಣ ತಜ್ಞರು, ಪಾಲಕರು, ಪೋಷಕರು ಚಿಂತನೆ ಮಾಡುವ ಅವಶ್ಯಕ ಎಂದು ನುಡಿದರು.

ಸಮ್ಮೇಳನ ಉದ್ಘಾಟಿಸಿದ ಕಲಬುರ್ಗಿ ಕೇಂದ್ರೀಯ ವಿಶ್ರಾಂತ ಕುಲಪತಿ ಡಾ.ಎಚ್.ಎಂ.ಮಹೇಶ್ವರಯ್ಯ ಮಾತನಾಡಿ, ಕನ್ನಡ ಪ್ರಜ್ಞೆಯನ್ನು ವಿಶ್ವದ ಪ್ರಜ್ಞೆಯನ್ನಾಗಿ ಮಾಡಬೇಕಿದೆ ಎಂದರು‌.

ಸಾವಿರಾರು ಇತಿಹಾಸ ಹೊಂದಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಆದರೆ ಅದಕ್ಕೆ ತಕ್ಕಂತೆ ಕೆಲಸ ಆಗುತ್ತಿಲ್ಲ. ವಿಳಂಬ ಆಗುತ್ತಿದೆ. ಅದಕ್ಕಾಗಿ ಕನ್ನಡವನ್ನು ತಂತ್ರಜ್ಞಾನಕ್ಕೆ ಅಳವಡಿಸುವ ಕಾರ್ಯ ಆಗಬೇಕು. ಅದಕ್ಕಾಗಿ ಒಂದು ಸಚಿವಾಲಯ ಮಾಡಬೇಕಿದೆ ಎಂದರು.

ವಿಶ್ವದ ಭೂಪಟದಲ್ಲಿ ಕನ್ನಡ ಗುರುತಿಸುವಂತೆ ಮಾಡಲು ಕನ್ನಡವನ್ನು ಡಿಜಿಟಲೀಕರಣ ಮಾಡಿ ತಂತ್ರಜ್ಞಾನಕ್ಕೆ ಅಳವಡಿಸುವ ತುರ್ತು ಅಗತ್ಯವಿದೆ. ಕನ್ನಡವನ್ನು ವಿಶ್ವದ ಶಕ್ತಿ, ಜ್ಞಾನ ಕೋಶದ‌ ಶ್ರೇಷ್ಠ ಭಾಷೆಯನ್ನಾಗಿ‌ ಮಾಡಲು ಕನ್ನಡಕ್ಕಾಗಿ ಕನ್ನಡಲ್ಲಿಯೇ ಪ್ರತ್ಯೇಕ‌ ವಿಕಿಪೀಡಿಯಾ ರೂಪಿಸುವ ಅಗತ್ಯವಿದೆ ಎಂದರು.

ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜೇಶ್ವರಿ ಮಹೇಶ್ವರಯ್ಯ, ಮಾಜಿ ಶಾಸಕಿ ಸೀಮಾ ಮಸೂತಿ, ತಾ.ಪಂ.ಅಧ್ಯಕ್ಷ ರವಿವರ್ಮ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ, ತಾಲೂಕಾಧ್ಯಕ್ಷ ಎಫ್.ಬಿ.ಕಣವಿ ಇದ್ದರು. ಇದಕ್ಕೂ ಮುನ್ನ ಗ್ರಾಮದಲ್ಲಿ ಚಕ್ಕಡಿಯಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಿತು. ಈ ಮೆರವಣಿಗೆಯಲ್ಲಿ ಕಲಾತಂಡಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.