ರೈತರು ಆರ್ಥಿಕವಾಗಿ ಸಬಲರಾಗಲಿ: ಎಂವೈಪಿ
ಆರ್‌ಐಡಿಎಫ್ ಯೋಜನೆಯಡಿ 36 ಲಕ್ಷ ರೂ. ವೆಚ್ಚದ ಪಶು ಆಸ್ಪತ್ರೆಗೆ ಚಾಲನೆ
Team Udayavani, Feb 14, 2021, 3:44 PM IST
ಅಫಜಲಪುರ: ರೈತರು ಆರ್ಥಿಕವಾಗಿ ಪ್ರಬಲರಾದಾಗ ಮಾತ್ರ ತಾಲೂಕು, ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಆರ್‌ಐಡಿಎಫ್ 23 ಯೋಜನೆ ಅಡಿಯಲ್ಲಿ 36 ಲಕ್ಷ ರೂ. ವೆಚ್ಚದ ಪಶು ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಲೂರ ಗ್ರಾಮದಲ್ಲಿ ಹಳೆಯ ಪಶು ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ಈ ಭಾಗದ ರೈತರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.
ಈಗ ನೂತನ ಕಟ್ಟಡ ನಿರ್ಮಾಣವಾಗಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ರಾಸುಗಳಿಗೆ ರೋಗ ರುಜಿನಗಳು ಬಂದಾಗ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.
ಜಿ.ಪಂ ಮಾಜಿ ಸದಸ್ಯರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ ಮಾತನಾಡಿ, ಶಾಸಕರು ಸಾವಿರಾರು ಕೋಟಿ ರೂ. ಅನುದಾನ ತಂದು
ತಾಲೂಕಿನಾದ್ಯಂತ ಅಭಿವೃದ್ಧಿ ಕೆಲಸ ಕೈಗೊಂಡಿದ್ದಾರೆ. ವಿರೋಧಿ ಬಣದವರು ಟೀಕಿಸುವ ಬದಲು, ಕಣ್ತೆರೆದು ನೋಡಲಿ ಎಂದು ಹೇಳಿದರು.
ಪಶು ಆಸ್ಪತ್ರೆ ಉದ್ಘಾಟನೆ ಬಳಿಕ 50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್ ಗೋಡೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು. ಜಿಲ್ಲಾ ಪಶು ಸಂಗೋಪನಾ ಉಪನಿರ್ದೇಶಕ ಡಾ| ವಿ.ಎಚ್. ಹನುಮಂತಪ್ಪ, ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಂ.ಎಸ್. ಗಂಗನಳ್ಳಿ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಶಂಕ್ರೆಪ್ಪ ಲಾಲು ಸಿಂಗೆ, ಮುಖಂಡರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ, ಶರಣು ಕುಂಬಾರ, ನಿಂಗು ಛಲವಾದಿ, ಅ ಕಾರಿಗಳಾದ ಟಿಎಚ್‌ಒ ರತ್ನಾಕರ ತೋರಣ, ವೈದ್ಯಾಧಿ ಕಾರಿ ಡಾ| ಸುಶೀಲ ಮತ್ತಿತರರು ಇದ್ದರು.
ಓದಿ : ಸಿಎಂ ಗಾದಿಗೆ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್ ಚೇರ್ ಆಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.