ಮದ್ಯದಂಗಡಿ ಆರಂಭಕ್ಕೆ ವಿರೋಧ
Team Udayavani, Feb 14, 2021, 4:11 PM IST
ಚಳ್ಳಕೆರೆ: ತಾಲೂಕಿನ ಸಿದ್ದೇಶ್ವರನದುರ್ಗದಲ್ಲಿ ಮದ್ಯ ಮಾರಾಟ ಅಂಗಡಿಗೆ ಅಬಕಾರಿ ಇಲಾಖೆ ಪರವಾನಗಿ ನೀಡಿದೆ. ಮಾಲೀಕರು ಗ್ರಾಮದ ಗೊಲ್ಲರಹಟ್ಟಿ ಬಳಿ ಪ್ರಾರಂಭಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುತ್ತಮುತ್ತಲಿನ ಗ್ರಾಮಸ್ಥರು, ರೈತ ಸಂಘಟನೆ, ಯುವ ಸಂಘಟನೆ, ಮಹಿಳಾ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು.
ಸಿದ್ದೇಶ್ವರನದುರ್ಗದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಈಗಾಗಲೇ ಅಬಕಾರಿ ಇಲಾಖೆ ಅಧಿಕಾರಿ, ಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರೂ ಮದ್ಯದಂಗಡಿ ತೆರೆಯಲಾಗುತ್ತಿದೆ. ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭಿಸಿದರೆ ಕಾನೂನು ಬಾಹಿರ ಚಟುವಟಿಕೆಗಳಿಗೆ, ಕಳ್ಳಕಾಕರಿಗೆ, ಜೂಜುಕೋರರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.
ಇದನ್ನೂ ಓದಿ:ಗುರು ಕರುಣೆಯಿಂದ ಜೀವನ ಪಾವನ
ಶಾಸಕ ಟಿ. ರಘುಮೂರ್ತಿ ಬೆಂಗಳೂರಿನಿಂದ ಸಿದ್ದೇಶ್ವರನದುರ್ಗಕ್ಕೆ ಆಗಮಿಸಿ ಜನರ ಅಹವಾಲು ಆಲಿಸಿದರು. ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ನಾಗಶಯನ ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರದ ನಿಯಮಗಳನ್ನು ಪಾಲಿಸಬೇಕಿದೆ ಎಂದರು. ಯಾವುದೇ ಕಾರಣಕ್ಕೂ ಇಲ್ಲಿ ಮದ್ಯದಂಗಡಿ ಪ್ರಾರಂಭಕ್ಕೆಅವಕಾಶ ನೀಡುವುದಿಲ್ಲವೆಂದು ಜನರು ಪಟ್ಟು ಹಿಡಿಡದರು.
ಆಗ ವಾಹನದಲ್ಲಿ ತಂದಿದ್ದ ಮದ್ಯದ ಬಾಕ್ಸ್‌ಗಳನ್ನು ವಾಪಸ್ ಕಳುಹಿಸಲಾಯಿತು. ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದು ಕೆ. ರಂಗಸ್ವಾಮಿ, ರೈತ ಸಂಘದ (ನಂಜುಂಡಸ್ವಾಮಿ ಬಣ) ರಾಜ್ಯ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ, ಮುಖಂಡರಾದ ಕೆ. ನಾಗರಾಜ, ಚನ್ನಕೇಶವ, ರಾಜಣ್ಣ, ಕೆ.ಎಂ. ಶಿವಕುಮಾರಸ್ವಾಮಿ, ಓಬಮ್ಮ, ಲಕ್ಷ್ಮಕ್ಕ, ಚಂದ್ರಮ್ಮ, ತಿಪ್ಪೀರಮ್ಮ, ಓಬಕ್ಕ ಮತ್ತಿತರರು ಇದ್ದರು. ಡಿವೈಎಸ್ಪಿ ಕೆ.ವಿ. ಶ್ರೀಧರ್, ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ, ಪಿಎಸ್‌ಐಗಳಾದ ಚಂದ್ರಶೇಖರ್, ಮಹೇಶ್ ಹೊಸಪೇಟೆ, ಮಂಜುನಾಥ ಲಿಂಗಾರೆಡ್ಡಿ ಬಂದೋಬಸ್ತ್ ಕಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.