ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ವಿವಾದ: ಬೆಂಗಳೂರು ಯುವತಿಯನ್ನು ಬಂಧಿಸಿದ ದಿಲ್ಲಿ ಪೊಲೀಸರು
Team Udayavani, Feb 14, 2021, 4:30 PM IST
ಹೊಸದಿಲ್ಲಿ: ರೈತ ಪ್ರತಿಭಟನೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಟೂಲ್ ಕಿಟ್ ಗೆ ಸಂಬಂಧಿಸಿದಂತೆ ಬೆಂಗಳೂರಿನ ಪರಿಸರ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ದಿಶಾ ರವಿ ದೆಹಲಿಯ ರೈತ ಪ್ರತಿಭಟನೆಗೆ ಸಂಬಂಧಿಸಿದ ‘ಟೂಲ್ ಕಿಟ್’ ಅನ್ನು ಸಾಮಾಜಿಕ ಮಾಧ್ಯಮ ತಾಣಗಳ ಮೂಲಕ ಪ್ರಸಾರ ಮಾಡಿದ್ದರೆಂದು ಮೂಲಗಳು ತಿಳಿಸಿವೆ. ಬೆಂಗಳೂರಿಗೆ ಆಗಮಿಸಿದ್ದ ದಿಲ್ಲಿ ಸೈಬರ್ ಪೊಲೀಸರ ತಂಡ ದಿಶಾ ರವಿ ಅವರನ್ನು ಉತ್ತರ ಬೆಂಗಳೂರಿನ ಅವರ ಮನೆಯಿಂದ ವಿಚಾರಣೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ:ಜಾತಿ ಸಮಾವೇಶಗಳಿಗೆ ಯಾಕೆ ಸಂಘ ಪರಿವಾರ ಪ್ರಾಯೋಜಕತ್ವ ನೀಡುತ್ತಿದೆ ? : ಸಿದ್ದರಾಮಯ್ಯ
ಪರಿಸರಪರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಅವರು ಟ್ವೀಟ್ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡುವುದು ಹೇಗೆ ಎಂಬುದನ್ನು ವಿವರಿಸುವ ‘ಟೂಲ್ಕಿಟ್’ ಅನ್ನು ಹಂಚಿಕೊಂಡಿದ್ದರು. ಇದರ ಸೃಷ್ಟಿಕರ್ತರಿಗೆ ಸಂಬಂಧಿಸಿದ ಇಮೇಲ್ ಐಡಿ, ಯುಆರ್ಎಲ್ಗಳು ಮತ್ತು ಕೆಲವು ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ಪೊಲೀಸರು ಗೂಗಲ್ ಮತ್ತು ಸಾಮಾಜಿಕ ಮಾಧ್ಯಮ ಸಂಸ್ಥೆಗಳನ್ನು ಈ ಹಿಂದೆ ಕೇಳಿದ್ದರು.
ಇದನ್ನೂ ಓದಿ:ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ
ಗ್ರೇಟಾ ಥನ್ಬರ್ಗ್ ಅವರು ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಈ ವೇಳೆ ಟೂಲ್ ಕಿಟ್ ನ್ನು ಕೂಡಾ ಟ್ವೀಟ್ ಮಾಡಿದ್ದರು. ಇದರಲ್ಲಿ ಭಾರತದ ರೈತ ಹೋರಾಟವನ್ನು ಹೇಗೆ ಮಾಡಬೇಕು ಎನ್ನುವ ಯೋಜನೆಗಳಿದ್ದವು. ಇದು ವಿವಾದವಾಗುತ್ತಿದ್ದಂತೆ ಗ್ರೇಟಾ ಥನ್ಬರ್ಗ್ ಆ ಟೂಲ್ ಕಿಟ್ ಟ್ವೀಟ್ ನ್ನು ಅಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.