ಸೂಕ್ಷ್ಮತೆ ಇದ್ದ ಪತ್ರಕರ್ತನಿಗೆ ಸಮಸ್ಯೆಗಳ ಅರಿವು
: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಅಭಿವೃದ್ಧಿ ವರದಿಗಾರಿಕೆಯ ಸವಾಲುಗಳು ಉಪನ್ಯಾಸ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಹೆಗ್ಗಳಗಿ ಚಾಲನೆ ನೀಡಿದರು.
Team Udayavani, Feb 14, 2021, 5:18 PM IST
ವಿಜಯಪುರ: ಸಮಾಜದಲ್ಲಿರುವ ಲೋಪ, ಸಮಸ್ಯೆಗಳನ್ನು ಸೂಕ್ಷ್ಮ ಸಂವೇದನೆಯಿಂದ ಗ್ರಹಿಸುವ ಪತ್ರಕರ್ತರಿಗೆ ಮಾತ್ರ ಸಮಾಜದ ಅಭಿವೃದ್ಧಿ, ಗ್ರಾಮಗಳ ಪ್ರಗತಿಯ ಚಿಂತನೆ ಸಾಧ್ಯ ಎಂದು ಮುಧೋಳ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ರಜತ ಮಹೋತ್ಸವ ಸಮಿತಿ ದತ್ತನಿ ಧಿ ಉಪನ್ಯಾಸ ಮಾಲಿಕೆ ಅಡಿಯಲ್ಲಿ ಗ್ರಾಮೀಣ ಅಭಿವೃದ್ಧಿ ವರದಿಗಾರಿಕೆಯ ಸವಾಲುಗಳು ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿರುವ ಮೂಢನಂಬಿಕೆ ಹೋಗಲಾಡಿಸಲು ಪತ್ರಕರ್ತನಿಗೆ ವೈಜ್ಞಾನಿಕ ಮನೋಭಾವನೆ ಬೇಕು. ಇಂತ ಸಂದರ್ಭದಲ್ಲಿ ವರಿದಿಗಾರರು ಮೂಢನಂಬಿಕೆಗಳ ವಿರುದ್ಧ ಹೋರಾಟಕ್ಕೂ ಸಿದ್ಧವಾಗಬೇಕು. ಆಗಲೇ ವೈಜ್ಞಾನಿಕ ಮನೋಭಾವ ಸಮಾಜ ನಿರ್ಮಾಣ ಸಾಧ್ಯ ಎಂದು ಕಿವಿಮಾತು ಹೇಳಿದರು.
ಪತ್ರಿಕೆಗಳು ಸಮಾಜದ ಧ್ವನಿ ಇದ್ದಂತೆ. ಹೀಗಾಗಿ ಪತ್ರಕರ್ತರೂ ಜನರ ಸಮಸ್ಯೆ, ಜೀವನಶೈಲಿಯ ಬಗ್ಗೆ ಬರೆಯುವಾಗ ಯಾರ ಭಾವನೆಗೂ ಧಕ್ಕೆ ಆಗದಂತೆ ಎಚ್ಚರಿಕೆ ವಹಿಸಬೇಕು. ವರದಿಗಾರ ಯಾವಾಗಲು ಸಮಾಜವನ್ನು ತನ್ನ ಮನೆಯಂತೆ ಭಾವಿಸಿ ವರದಿ ಮಾಡಬೇಕು.
ಸಮಾಜ ಸುಧಾರಣೆಯತ್ತಲೇ ಚಿತ್ತ ಇರಬೇಕು. ಮಾಧ್ಯಮಗಳಲ್ಲಿ ಬರುವ ವರದಿಗಳು ಸಮಾಜದಲ್ಲಿ ತ್ವರಿತ ಪರಿಣಾಮ ಬೀರುತ್ತವೆ. ಹೀಗಾಗಿ
ವರದಿಗಾರ ಪ್ರತಿಯೊಂದು ಸೂಕ್ಷ್ಮತೆ ಅರಿತು ವರದಿ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ ಮಾತನಾಡಿ, ಸ್ವಯಂ ಪರಿಶ್ರಮ ಇಲ್ಲದೇ ಅತ್ಯುತ್ತಮ ಫಲ ಸಿಗಲು ಸಾಧ್ಯವಿಲ್ಲ. ಸರಳವಾಗಿ ಸಿಗುವುದಕ್ಕೆ ಹೆಚ್ಚಿನ ಭವಿಷ್ಯವೂ ಇಲ್ಲ. ಹೀಗಾಗಿ ಆಸಕ್ತಯಿಂದ ಕಲಿಯಲು ಮಹಿಳಾ ವಿಶ್ವವಿದ್ಯಾಲಯದಲ್ಲಿ ಉತ್ತಮ
ವಾತಾವರಣವಿದೆ. ಇದಕ್ಕಾಗಿ ಲಭ್ಯ ಇರುವ ಸೌಕರ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ
ರೂಪಿಸಿಕೊಳ್ಳುವಂತೆ ಮಾರ್ಗದರ್ಶನ ಮಾಡಿದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ತಹಮೀನಾ ಕೋಲಾರ ಪ್ರಾಸ್ತಾವಿಕ ಮಾತನಾಡಿದರು.
ಮಾಯಾ ಹೊಸಟ್ಟಿ ನಿರೂಪಿಸಿದರು. ಅರ್ಚನಾ ಸೂರ್ಯವಂಶಿ ಸ್ವಾಗತಿಸಿದರು. ಶುಭಲಕ್ಷ್ಮೀ ಹೊಸಮನಿ ಪರಿಚಯಿಸಿದರು. ವಿನುತಾ ಹವಾಲ್ದಾರ್ ವಂದಿಸಿದರು.
ಓದಿ : ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗುವುದು: BSY
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.