ಕರ್ನಾಟಕಕ್ಕೆ ಟೆಸ್ಲಾ: ಇವಿ ವಲಯದ ಕಿರೀಟಕ್ಕೆ ಇನ್ನೊಂದು ಗರಿ


Team Udayavani, Feb 15, 2021, 6:50 AM IST

ಕರ್ನಾಟಕಕ್ಕೆ ಟೆಸ್ಲಾ: ಇವಿ ವಲಯದ ಕಿರೀಟಕ್ಕೆ ಇನ್ನೊಂದು ಗರಿ

ಐಷಾರಾಮಿ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿ ರುವ ಟೆಸ್ಲಾ ಕಂಪೆನಿ ಕರ್ನಾಟಕದ ಹೆಬ್ಟಾಗಿಲಿನ ಮೂಲಕ ಭಾರತ ಪ್ರವೇಶಿ ಸುತ್ತಿರುವುದು ಹೆಮ್ಮೆಯ ವಿಚಾರ. ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಈ ವಿಷಯವನ್ನು ಪ್ರಕಟಿಸಿದ್ದಾರೆ. ಈಗಾಗಲೇ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕಕ್ಕೆ ಈಗ ಆಟೊಮೊಬೈಲ್‌ ಕ್ಷೇತ್ರದಲ್ಲಿ ನೆರೆಯ ರಾಜ್ಯಗಳೊಂದಿಗೆ ಪ್ರಬಲ ಸ್ಪರ್ಧೆ ಒಡ್ಡಲು ಇದೊಂದು ಮಹತ್ವದ ಅವಕಾಶ. ಅದರಲ್ಲೂ ವಿದ್ಯುತ್‌ಚಾಲಿತ ವಾಹನ(ಇವಿ)ಗಳ  ಉತ್ಪಾದನೆ ಕ್ಷೇತ್ರದಲ್ಲಿ  ದಾಪುಗಾಲಿಡಲು ಕರ್ನಾಟಕಕ್ಕೆ ಇದೊಂದು ಸುವರ್ಣಾವಕಾಶ.

ಈಗಾಗಲೇ ಟೆಸ್ಲಾ ಇಂಡಿಯಾ ಎಂಬ ಹೆಸರಿನ ಕಂಪೆನಿಯನ್ನು ರೂಪಿಸುವ ಟೆಸ್ಲಾ ಕಂಪೆನಿ, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ತನ್ನ ಕಚೇರಿ ಆರಂಭಿಸಿದೆ. ಈ ಹಿಂದೆ ಟೆಸ್ಲಾ ಸಂಶೋಧನ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗ ಳೂರಿನಲ್ಲಿ ಆರಂಭಿಸುವುದಾಗಿ ಪ್ರಕಟಿಸಿತ್ತು. ಇದೀಗ ಮುಖ್ಯಮಂತ್ರಿ ಗಳು ತಯಾರಿಕಾ ಘಟಕವನ್ನು ಕರ್ನಾಟಕದಲ್ಲಿ ಆರಂಭಿಸುವುದಾಗಿ ಪ್ರಕಟಿಸು ವುದರಿಂದ ರಾಜ್ಯದ ತಯಾರಿಕಾ ವಲಯಕ್ಕೆ ಹೊಸ ಶಕ್ತಿ ಬಂದಿದೆ. ಟೆಸ್ಲಾದಂಥ ಜಾಗತಿಕ ಕಂಪೆನಿ ಕರ್ನಾಟಕ ಪ್ರವೇಶಿಸುತ್ತಿರುವುದು ಸಹಜ ವಾಗಿಯೇ ಜಗತ್ತಿನ ಕಣ್ಣಲ್ಲಿ ನಮ್ಮ ರಾಜ್ಯದ ಮಹತ್ವವನ್ನು ಬಿಂಬಿಸುವಂಥದ್ದು. ಈ ಬಗ್ಗೆ ಹೆಮ್ಮೆಪಡುವುದರ ಜತೆಗೆ ರಾಜ್ಯ ಸರಕಾರ ಔದ್ಯಮಿಕ ವಲಯಗಳ ನಿರೀಕ್ಷೆಯನ್ನು ಈಡೇರಿಸುವ ನಿಟ್ಟಿನಲ್ಲಿ  ಧಾರಾಳಿತನದ ಹೆಜ್ಜೆ ಇಡಬೇಕಾಗಿದೆ.

ಉದ್ಯಮಸ್ನೇಹಿ ವಾತಾವರಣ ಸೃಷ್ಟಿ ಮಾಡುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗ ಅವಕಾಶ ಲಭಿಸುವ ಬಗ್ಗೆ ಸರಕಾರ ಗಮನಹರಿಸಬೇಕಾಗಿದೆ. ಈಚೆಗೆ ಬಿಡದಿಯ ಟೊಯೊಟಾ ಘಟಕ ಹಾಗೂ ಕೋಲಾರದ ವಿಸ್ಟ್ರಾ ಘಟಕಗಳಲ್ಲಿ ನಡೆದ ಬೆಳವಣಿಗೆಗಳು ಉದ್ಯಮ ವಲಯದಲ್ಲಿ ರಾಜ್ಯದ ಹೆಸರಿಗೆ ಮಸಿ ಬಳಿದಿವೆ ಎನ್ನುವುದರಲ್ಲಿ ಅನುಮಾನವಿಲ್ಲ. ಉದ್ಯಮ ವಲಯದ ನಿರೀಕ್ಷೆ ಮತ್ತು ಸ್ಥಳೀಯರ ಬೇಡಿಕೆಗಳನ್ನು ಸಮತೋಲನದಿಂದ ತೂಗಿಸಿಕೊಂಡು ಹೋದರೆ ಮಾತ್ರ ಕರ್ನಾಟಕ ಉದ್ಯಮಸ್ನೇಹಿ ಎಂಬ ತನ್ನ ಹೆಗ್ಗಳಿಕೆಯನ್ನು ಉಳಿಸಿಕೊಳ್ಳಬಹುದು ಮತ್ತು ವಿಸ್ತರಿಸಿಕೊಳ್ಳಬಹುದು.

ವಾಹನ ಉದ್ಯಮದಲ್ಲಿ  ದೇಶದಲ್ಲಿ ಕರ್ನಾಟಕ  ನಾಲ್ಕನೇ ಸ್ಥಾನದಲ್ಲಿದ್ದು, ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶ-ತೆಲಂಗಾಣ ಸರಕಾರದ ಜತೆ ನಿರಂತರವಾಗಿ ಸ್ಪರ್ಧೆ ಒಡ್ಡುತ್ತಲೇ ಇದೆ. ಅದರಲ್ಲೂ  ವಿದ್ಯುತ್‌ಚಾಲಿತ ವಾಹನ(ಇವಿ)ಗಳ ತಯಾರಿಕಾ ವಲಯದಲ್ಲಿ ಕರ್ನಾಟಕ ಹಿಂದಿನಿಂದಲೂ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸಿಕೊಂಡೇ ಇದ್ದು, ರೇವಾ ಘಟಕ ರಾಜ್ಯದಲ್ಲಿ ಆರಂಭವಾಗಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ. ಈಗಲಂತೂ ವಿದ್ಯುತ್‌ಚಾಲಿತ ವಾಹನಗಳು ಮತ್ತು ಅವುಗಳ ಬಿಡಿಭಾಗಗಳ ಉತ್ಪಾ³ದನಾ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹೀಂದ್ರಾ ಎಲೆಕ್ಟ್ರಿಕ್‌, ಏಥರ್‌, ಓಲಾ ಎಲೆಕ್ಟ್ರಿಕ್‌ ಮತ್ತು ಬೋಷ್‌ ಕಂಪೆನಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಪ್ರಮುಖ ಉತ್ತೇಜನ ಎಂದರೆ ಸರಕಾರದ ಮುಕ್ತ ನಿಲುವು. ಇಡೀ ದೇಶದಲ್ಲಿ  ವಿದ್ಯುತ್‌ಚಾಲಿತ ವಾಹನಗಳ ವಲಯಕ್ಕೆ ಪ್ರತ್ಯೇಕ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಇವಿ ವಲಯದಲ್ಲಿ ಕರ್ನಾಟಕವನ್ನು ಕೇಂದ್ರ ಬಿಂದುವಾಗಿಸಬೇಕು ಎಂಬ ಸ್ಪಷ್ಟ ಆಶಯದೊಂದಿಗೆ ರೂಪಿತವಾಗಿರುವ ಈ ನೀತಿಯನ್ನು ಸಮಗ್ರವಾಗಿ ಹಾಗೂ ಪರಿಣಾಮ ಕಾರಿಯಾಗಿ ಜಾರಿಗೆ ತರುವ ಹೊಣೆ ಸರಕಾರದ್ದಾಗಿದೆ. ಹಾಗಿದ್ದಾಗ ಮಾತ್ರ ನಾವು ನೆರೆಯ ರಾಜ್ಯಗಳ ಸ್ಪರ್ಧೆಯನ್ನು ಹಿಂದೂಡಿ,  ಇವಿ ಕ್ಷೇತ್ರದಲ್ಲಿ  ಕರ್ನಾಟಕವೇ ಮುಂದೆ ಎಂಬ ಕಿರೀಟವನ್ನು ನಮ್ಮದಾಗಿಸಿಕೊಳ್ಳಬಹುದು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.