ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ
ಆರೋಗ್ಯಕರ ಸಮಾಜಕ್ಕೆ ದಾರಿ ,ಹಾಲು, ಮೊಟ್ಟೆ ವಿತರಣೆ ಪೌಷ್ಟಿಕತೆಗೆ ಸಹಕಾರಿ
Team Udayavani, Feb 15, 2021, 3:09 PM IST
ದೇವನಹಳ್ಳಿ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಫ್ಲೋರೈಡ್ ಅಂಶ ಹೆಚ್ಚಾಗಿದ್ದು, ನಾನಾ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಅಂಶದ ನಡುವೆಯೂ ಅಪೌಷ್ಟಿಕ ಮಕ್ಕಳ ಸಂಖ್ಯೆ ವರ್ಷಕ್ಕಿಂತ, ವರ್ಷ ಸಂಖ್ಯೆ ಕಡಿಮೆಯಾಗುತ್ತಿದೆ.
ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 22 ಇದ್ದು, ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಇಳಿಮುಖ ಕಂಡುಬರುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ದಾರಿಯಾಗಿದೆ. ಸರ್ಕಾರ ಅಂಗನವಾಡಿಗಳಲ್ಲಿ ಹಾಲು, ಮೊಟ್ಟೆ ವಿತರಣೆ ಮಾಡುತ್ತಿರುವುದು ಸಹಕಾರಿಯಾಗಿದೆ. ಅಪೌಷ್ಟಿಕ ನಿವಾರಣೆಗೆ ಪೋಷಕರು ಮಾತ್ರವಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿ ಕೊಳ್ಳುವ ಪೋಷಣ ಅಭಿಯಾನ ಕಾರ್ಯಕ್ರಮವು ಕೂಡ ಪ್ರಮಾಣ ತಗ್ಗಿಸುವಲ್ಲಿ ನೆರವಾಗಿದೆ. ಕಳೆದ 4 ವರ್ಷಗಳಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಇಳಿ ಮುಖವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.
ಪೌಷ್ಟಿಕ ಆಹಾರ ಸೇವಿಸಲು ಉತ್ತೇಜನ: ತೀವ್ರ ಅಪೌಷ್ಟಿಕ ಮಕ್ಕಳನ್ನು ಗುರುತಿಸುವಿಕೆ ಮತ್ತು ಚಿಕಿತ್ಸೆ ನೀಡುವುದು. ಕೈ ತೋಟಗಳನ್ನು ಬಳಸಿ, ಪೌಷ್ಟಿಕ ಆಹಾರ ಸೇವಿಸಲು ಉತ್ತೇಜಿಸುವಂತಹ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಸುತ್ತ ಕಿಚನ್ ಗಾರ್ಡ್ ನ್ ನಿರ್ಮಿಸಿ, ಕರಿಬೇವು, ಸೀಬೆ, ಹಲಸು, ನುಗ್ಗೆ ಇತೆ ಗಿಡ ನೆಟ್ಟುಪೋಷಿಸಿ ಅದರಲ್ಲಿ ಬರುವ ಪೌಷ್ಟಿಕ ಆಹಾರದ ಅಂಶಗಳನ್ನು ನೀಡುವ ಕಾರ್ಯ ಮಾಡಲಾಗಿದೆ.
ಚಿಕಿತ್ಸೆಗೆ 2000 ರೂ. : ಪೌಷ್ಟಿಕ ಆಹಾರವನ್ನು 6 ತಿಂಗಳಿನಿಂದ 6 ವರ್ಷದೊರಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಪೌಷ್ಟಿಕ, ಹಾಲು, ಪುಷ್ಟಿ ಪೌಡರ್, ಅಪೌಷ್ಟಿಕ ಮಕ್ಕಳಿಗೆ ಚಿಕಿತ್ಸೆ ವೆಚ್ಚ 2000 ರೂ. ಗಳನ್ನು ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳಿಗೆ ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ಸಹ ನೀಡಲಾಗುತ್ತಿದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುವಂತೆ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹೇಳುತ್ತಾರೆ.
ಅಪೌಷ್ಟಿಕ ಇಳಿಮುಖ :
ಅಪೌಷ್ಟಿಕ ಮಕ್ಕಳು ಜಿಲ್ಲೆಯಲ್ಲಿ 22 ಇದ್ದು, ತಾಲೂಕುವಾರು ಅಂಕಿ-ಅಂಶ ಪ್ರಕಾರ ದೇವನ ಹಳ್ಳಿ-4, ದೊಡ್ಡಬಳ್ಳಾಪುರ-13, ಹೊಸಕೋಟೆ-2, ನೆಲಮಂಗಲ-3 ಅಪೌಷ್ಟಿಕ ಮಕ್ಕಳಿದ್ದಾರೆ. 2016- 17ರಲ್ಲಿ 169, 2017-18ರಲ್ಲಿ 120, 2018-19ರಲ್ಲಿ 35 ಹಾಗೂ 2019-20ರಲ್ಲಿ 26, ಪ್ರಸ್ತುತ ವರ್ಷದಲ್ಲಿ 22 ಅಪೌಷ್ಟಿಕ ಮಕ್ಕಳನ್ನು ಹೊಂದಿದೆ
ಅಪೌಷ್ಟಿಕ ಮಕ್ಕಳು ಕಂಡುಬಂದಲ್ಲಿ ಅವರಿಗೆ ತಕ್ಷಣ ಚಿಕಿತ್ಸೆ ಕೊಡಿಸುವುದು. ಬೇರೆ ಜಿಲ್ಲೆಗೆಹೋಲಿಸಿದರೆ, ನಮ್ಮಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಕಡಿಮೆಯಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ,ಆರೋಗ್ಯವಂತ ಮಕ್ಕಳನ್ನಾಗಿ ಮಾಡಲಾಗುತ್ತದೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂಬುವುದು ನಮ್ಮ ಗುರಿ. –ಪುಷ್ಪಲತಾ ರಾಯ್ಕರ್, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.