ರಂಗಭೂಮಿ ಮೌಲ್ಯ ಬಿತ್ತುವ ಮಾಧ್ಯಮ

25 ದಿನಗಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ

Team Udayavani, Feb 15, 2021, 4:34 PM IST

15-19

ಬಳ್ಳಾರಿ: ರಂಗಭೂಮಿಯು ಸಂಬಂಧಗಳನ್ನು ಬೆಸೆಯುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಬಿತ್ತುವ ಏಕೈಕ ಮಾಧ್ಯಮವಾಗಿದೆ ಎಂದು ಚಿತ್ರದುರ್ಗದ ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಅಭಿಪ್ರಾಯ ಪಟ್ಟರು.

ನಗರದ ಡಿಆರ್‌ಕೆ ರಂಗಸಿರಿಯ ರಾಮಕೃಷ್ಣ ವಿಲಾಸ ವೇದಿಕೆಯಲ್ಲಿ ರಂಗಜಂಗಮ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ 25 ದಿನಗಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಂಗಭೂಮಿಯು ಕಲೆಗಳೆಲ್ಲವನ್ನೂ ತನ್ನೊಡಲೊಳಗೆ ಅಡಗಿಸಿಕೊಂಡಿದೆ. ಇಂದಿನ ತಂತ್ರಜ್ಞಾನ ಯುಗದ ಅಬ್ಬರದಲ್ಲೂ ತನ್ನತನವನ್ನು ಅಚ್ಚಳಿಯದೇ ಸಮಾಜಮುಖೀ ಚಿಂತನೆಯತ್ತ ತೊಡಗಿಸಿಕೊಂಡಿರುವುದು ನಿಜಕ್ಕೂ ಅಭಿಮಾನದ ಸಂಗತಿಯಾಗಿದೆ. ರಂಗಭೂಮಿ ಜೀವಂತ
ಕಲೆಯಾಗಿ ವಾಸ್ತವಾಂಶಗಳನ್ನು ಬಿತ್ತರಿಸುವ ಕಲಾ ಮಾಧ್ಯಮವಾಗಿದೆ. ಮನುಷ್ಯನ ವ್ಯಕ್ತಿತ್ವದ ಹಲವಾರು ವೈವಿಧ್ಯತೆಗಳನ್ನು ಪರಿಚಯಿಸಲಿದೆ. ವ್ಯಕ್ತಿ ವಿಕಸನದತ್ತ ತೆಗೆದುಕೊಂಡು ಹೋಗುವ ಶ್ರೀಮಂತ ಕಲೆಯಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಹಿರಿಯ ರಂಗನಿರ್ದೇಶಕ ಸಾಂಬಶಿವ ದಳವಾಯಿ ಮಾತನಾಡಿ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹೀಗೆ ಪ್ರತಿಯೊಂದು ಕ್ಷೇತ್ರಗಳಿಗೆ ರಂಗಭೂಮಿ ಮೂಲಕ ಜಾಗೃತಿ ಮೂಡಿಸುವ ಕಲಾ ವೇದಿಕೆಯಾಗಿದೆ.
ರಂಗಭೂಮಿ ಕ್ಷೇತ್ರವು ಪ್ರಾಯೋಗಿಕವಾಗಿ ಅಭಿನಯದ ಮೂಲಕ ಗೊತ್ತುಪಡಿಸುವ ಕಾರ್ಯವನ್ನು ನಿರ್ವಹಿಸುತ್ತದೆ. ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಅವಶ್ಯಕತೆ ಇದೆ. ಪಠ್ಯದ ವಿಷಯವಸ್ತುಗಳನ್ನು ವಿದ್ಯಾರ್ಥಿಗಳಿಗೆ
ನೇರವಾಗಿ ಪರಿಚಯಿಸುವ ಸಾಧನೆಗೆ ರಂಗಭೂಮಿ ಉತ್ತಮ ಮಾರ್ಗದರ್ಶಕವಾಗಿದೆ ಎಂದರು.

ವಿಎಸ್‌ಕೆ ವಿವಿ ಪ್ರಾಧ್ಯಾಪಕ ಪ್ರೊ| ಶಾಂತಾನಾಯ್ಕ ಮಾತನಾಡಿ, ಕಥಾವಸ್ತುವನ್ನೇ ಹೊಸ ವಿನ್ಯಾಸದೊಂದಿಗೆ ಪುನಃಶ್ಚೇತನಗೊಳಿಸಿ ಹೊಸ ಅಲೆಯನ್ನು ಎಬ್ಬಿಸಿ ನಾಟಕಗಳನ್ನು ರಚಿಸಿ ಕಾಲದಿಂದ ಕಾಲದ ಬದಲಾವಣೆಗಳನ್ನು ರಂಗಭೂಮಿಯಲ್ಲಿ ತೋರಿಸಲು
ಸಾಧ್ಯವಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಸಿದ್ಧರಾಮ ಕಲ್ಮಠ ಮಾತನಾಡಿ, ಸಮಕಾಲೀನ ಜನಜೀವನವನ್ನು ಪ್ರತಿಬಿಂಬಿಸುವ ಸಾಮಾಜಿಕ ನಾಟಕ ಕಥೆ ಕಾದಂಬರಿಗಳು ಒಂದು ಸಮುದಾಯದ ಆತ್ಮಚರಿತ್ರೆ ಇದ್ದಂತೆ. ಪ್ರತಿಭೆಗಳನ್ನು ಗುರುತಿಸುವ ಮೂಲಕ ಕನ್ನಡ ನಾಟಕ ಸಾಹಿತ್ಯದಲ್ಲಿ
ಹೊಸ ಸಂಚಲನವನ್ನುಂಟು ಮಾಡಿ ವಿಚಾರವನ್ನು ಅವಲೋಕಿಸುವ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವ ವಿವಾದಗಳ ಜೊತೆಗೆ ಮಾನವೀಯ ನೆಲೆಗಳನ್ನು ಹುಡುಕುವ ಒಂದು ಕೇಂದ್ರ ರಗಭೂಮಿಯಾಗಿದೆ ಎಂದು ತಿಳಿಸಿದರು.

ರಂಗಜಂಗಮ ಸಂಸ್ಥೆ ಅಧ್ಯಕ್ಷ ವಿಷ್ಣು ಹಡಪದ, ಶಿಬಿರದ ಸಂಚಾಲಕ ರಂಗನಿರ್ದೇಶಕ ಡಾ| ಅಣ್ಣಾಜಿ ಕೃಷ್ಣಾರೆಡ್ಡಿ, ರಂಗ ಪದವೀಧರ ಕೆ.ನಾಗರಾಜ್‌ ಹಾಗೂ ಚನ್ನಕೇಶವರೆಡ್ಡಿ ಸೇರಿದಂತೆ ಶಿಬಿರಾರ್ಥಿಗಳು ಇದ್ದರು.

ಓದಿ : ರಾಜಕೀಯ ಪ್ರೇರಿತ ಮೀಸಲಾತಿಗಳು ಒಳ್ಳೆಯ ಬೆಳವಣಿಗೆಯಲ್ಲ: ಸದಾನಂದ ಗೌಡ

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.