“ನಮ್ಮ ಹಕ್ಕುಗಳನ್ನು ಸದುಪಯೋಗಪಡಿಸಿಕೊಳ್ಳೋಣ’
ನಗರದ ದೇಶನೂರು ರಸ್ತೆಯ ಗಂಗೋತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕ ರಮೇಶ್ ಸುಗ್ಗೇನಹಳ್ಳಿ ಮಾತನಾಡಿದರು.
Team Udayavani, Feb 15, 2021, 4:45 PM IST
ಸಿರುಗುಪ್ಪ: ಭಾರತದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗಬೇಕು ಎನ್ನುವ ಉದ್ದೇಶದಿಂದ ಸಂವಿಧಾನವನ್ನು ಡಾ|
ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ್ದಾರೆ ಎಂದು ಉಪನ್ಯಾಸಕ ರಮೇಶ್ ಸುಗ್ಗೇನಹಳ್ಳಿ ತಿಳಿಸಿದರು.
ನಗರದ ದೇಶನೂರು ರಸ್ತೆಯ ಗಂಗೋತ್ರಿ ಕಲ್ಯಾಣ ಮಂಟಪದಲ್ಲಿ ಸಿರುಗುಪ್ಪ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಸಹಭಾಗಿತ್ವದಲ್ಲಿ ವಿಶ್ವಜ್ಞಾನಿ ಶೈಕ್ಷಣಿಕ ಸಾಂಸ್ಕೃತಿಕ ಅಭಿವೃದ್ಧಿ ಸಂಘಟನೆಯ ಉದ್ಘಾಟನೆ ಹಾಗೂ ದಲಿತ ಗ್ರಾಪಂ ಸದಸ್ಯರಿಗೆ ಸನ್ಮಾನ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಹಾಗೂ ಮೂಲ ಸೌಕರ್ಯಗಳು ಇಂದು ನಮಗೆ ದೊರೆತಿದೆ ಎಂದರೆ ಅದಕ್ಕೆ ಡಾ| ಬಿ.ಆರ್.ಅಂಬೇಡ್ಕರ್ ಅವರೆ ಕಾರಣರಾಗಿದ್ದಾರೆ.
ನಮಗೆ ದೊರೆತಿರುವ ಹಕ್ಕುಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಹೇಳಿದರು. ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಮಾತನಾಡಿದ ಎಂ. ಪಂಪಾಪತಿ ಪ್ರತಿ ಗ್ರಾಪಂನಲ್ಲಿ ನರೇಗಾ
ಯೋಜನೆ ಅಡಿ ಕೋಟ್ಯಾಂತರ ರೂ. ಅನುದಾನ ಸಿಗುತ್ತದೆ. ಅದೇ ರೀತಿ ಎಸ್ಸಿ ಎಸ್ಟಿ ಕೇರಿಗಳಲ್ಲಿ ಉಚಿತವಾಗಿ ಗ್ರಾಪಂನಿಂದ ಹಾಕಲಾಗುತ್ತದೆ. ಶೌಚಾಲಯ, ಮಕ್ಕಳ ವಿದ್ಯಾಭ್ಯಾಸ, ದಲಿತ ಕೇರಿಗಳಲ್ಲಿ ಸಭೆ ನಡೆಸಿ ಮೂಲಭೂತ ಸೌಲಭ್ಯ ಒದಗಿಸಲು ಗ್ರಾಪಂ ಅಧಿಕಾರಿಗಳಿಗೆ ತಿಳಿಸಿ ಮೂಲ ಸೌಕರ್ಯ ಒದಗಿಸಲು ದಲಿತ ಗ್ರಾಪಂ ಸದಸ್ಯರು ಶ್ರಮಿಸಬೇಕೆಂದರು. ಮುಖಂಡರಾದ ಧರಪ್ಪ ನಾಯ್ಕ, ಲಕ್ಷ್ಮಣ ಭಂಡಾರಿ ಮಾತನಾಡಿದರು.
ನಗರಸಭೆ ಅಧ್ಯಕ್ಷ ನಾಗರಾಜ, ಜಿಪಂ ಸದಸ್ಯೆ ರಾಧಾ ಧರಪ್ಪನಾಯ್ಕ, ಟಿಎಚ್‌ಒ ಈರಣ್ಣ, ಮುಖಂಡರಾದ ಕೊಡ್ಲೆ ಮಲ್ಲಿಕಾರ್ಜುನ,
ಷಣ್ಮುಖ ಬಂಡಾರಿ, ಎಚ್.ಬಿ. ಗಂಗಪ್ಪ, ಸಣ್ಣ ವೀರೇಶ, ಚಿದಾನಂದರಾಯುಡು, ಮಹದೇವ, ದೊಡ್ಡಬಸಪ್ಪ, ದೊಡ್ಡ ವೀರೇಶ,
ಮಲ್ಲೇಶ ನಾಯ್ಕ, ಗ್ರಾಪಂ ಸದಸ್ಯರು ಭಾಗವಹಿಸಿದ್ದರು.
ಓದಿ : ಯಡಿಯೂರಪ್ಪರಂತೆ ವಿಜಯೇಂದ್ರ ಕೂಡಾ ರಾಜಾಹುಲಿಯಾಗಿ ಹೊರಹೊಮ್ಮಲಿ: ಎಸ್ ಟಿ ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.