‘ಗೋ ಬ್ಯಾಕ್ ಮೋದಿ’ ಎಂದು ಕುಟುಕಿದ ನಟಿ ವಿರುದ್ಧ ದಾಖಲಾಯ್ತು ದೂರು..!
Team Udayavani, Feb 15, 2021, 7:20 PM IST
ತಮಿಳುನಾಡು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿರೋಧಿಸಿ ‘ಗೋ ಬ್ಯಾಕ್ ಮೋದಿ’ ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಿದ್ದ ತಮಿಳು ನಟಿ ಒವಿಯಾ ಹೆಲೆನ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಪೊಲೀಸ್ ಠಾಣೆಗೆ ದೂರು ನೀಡಿದೆ.
ನಿನ್ನೆ (ಫೆ.14 ಭಾನುವಾರ) ಹಲವು ಸರ್ಕಾರಿ ಯೋಜನೆಗಳ ಚಾಲನೆಗೆಂದು ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಭೇಟಿ ವಿರೋಧಿಸಿ ಸೋಷಿಯಲ್ ಮೀಡಿಯಾದಲ್ಲಿ ‘ಗೋ ಬ್ಯಾಕ್ ಮೋದಿ’ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ನಟಿ ಒವಿಯಾ ಕೂಡ ಈ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದರು.
ನಟಿಯ ಟ್ವೀಟ್ ಗಂಭೀರವಾಗಿ ತೆಗೆದುಕೊಂಡಿರುವ ತಮಿಳುನಾಡು ರಾಜ್ಯ ಬಿಜೆಪಿ ಕಾರ್ಯದರ್ಶಿ ಎ. ಸುಧಾರಕರ್, ಚೈನ್ನೈ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೋದಿ ಆಗಮನದ ಹಿನ್ನೆಲೆ ಕೆಲವರು ಗುಂಪು ರಚಿಸಿಕೊಂಡು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ಪ್ರಯತ್ನಿಸಿದ್ದವು. ನಟಿಯ ಈ ಟ್ವೀಟ್ ಸಮಾಜದಲ್ಲಿ ಶಾಂತಿ ಭಂಗ ತರಲು ಪ್ರಚೋದಿಸುವಂತಿದೆ. ಈ ಹಿನ್ನೆಲೆ ಅವರ ವಿರುದ್ಧ ಸೆಕ್ಷನ್ 69(ಎ)ನಡಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಚಮೋಲಿ ದುರ್ಘಟನೆ : ಮೃತರ ಸಂಖ್ಯೆ 56ಕ್ಕೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.