ಇಂಧನ ಬೆಲೆ ಏರಿಕೆ, ತಗ್ಗಲಿ ರಾಜ್ಯ-ಕೇಂದ್ರಗಳ ತೆರಿಗೆ

Team Udayavani, Feb 16, 2021, 7:30 AM IST

ಇಂಧನ ಬೆಲೆ ಏರಿಕೆ, ತಗ್ಗಲಿ ರಾಜ್ಯ-ಕೇಂದ್ರಗಳ ತೆರಿಗೆ

ಒಂದು ಉತ್ಪನ್ನದ ಬೇಡಿಕೆ ಹೆಚ್ಚಾದಾಗ, ಪೂರೈಕೆಯ ಮೇಲೆ ಭಾರ ಬೀಳುವುದು, ದರ ಏರಿಕೆಯಾಗುವುದು ಸಹಜ. ಅದೇ ವೇಳೆಯಲ್ಲೇ ಉತ್ಪನ್ನದ ಲಭ್ಯತೆ ಹೆಚ್ಚಾಗಿ, ಬೇಡಿಕೆಯಲ್ಲಿ ಹೆಚ್ಚಳವಾಗದಿದ್ದರೆ ದರಗಳು ಕುಸಿಯುವುದು ಸಹಜ. ಆದರೆ ಈ ಸಂಗತಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯ ವಿಚಾರಕ್ಕೆ ಅನ್ವಯವಾದದ್ದು ಕಡಿಮೆಯೇ. ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದಾಗಿ ವಿಶ್ವಾದ್ಯಂತ ತರಲಾದ ಲಾಕ್‌ಡೌನ್‌ಗಳು ಹಾಗೂ ಸಂಚಾರ ನಿರ್ಬಂಧಗಳಿಂದಾಗಿ ಅಂತಾ ರಾಷ್ಟ್ರೀಯ ಸ್ತರದಲ್ಲಿ ಕಚ್ಚಾ ತೈಲದ ದರದಲ್ಲಿ ಗಣನೀಯ ಇಳಿಕೆ ಯಾಗಿದ್ದರೂ ಭಾರತದಲ್ಲಿ ಇಂಧನ ದರ ಕಡಿಮೆಯಾಗುವ ಬದಲು ಹೆಚ್ಚಾಗುತ್ತಲೇ ಸಾಗಿದೆ.

ರವಿವಾರ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ 91.70 ರೂಪಾಯಿ ತಲುಪಿದರೆ, ಇನ್ನೊಂದೆಡೆ ಡೀಸೆಲ್‌ ದರ 83.81 ರೂಪಾಯಿ ತಲುಪಿತ್ತು. ಮಹಾರಾಷ್ಟ್ರದ ಪರ್ಬನಿಯಲ್ಲಂತೂ ಪೆಟ್ರೋಲ್‌ ದರ 100 ರೂಪಾಯಿ ದಾಟಿದ್ದು ಸುದ್ದಿಯಾಯಿತು. ಕೋವಿಡ್‌ ಕಾರಣದಿಂದಾಗಿ ತತ್ತರಿಸಿರುವ ಭಾರತೀಯರಿಗೆ ನಿಸ್ಸಂಶಯ ವಾಗಿಯೂ ಪೆಟ್ರೋಲ್‌, ಡೀಸೆಲ್‌ ಮೇಲಿನ ದರ ಏರಿಕೆ ಬಹಳ ಒತ್ತಡ ಸೃಷ್ಟಿಸುತ್ತಿದೆ.

ಆರ್ಥಿಕತೆ ಸಹಜತೆಯತ್ತ ಮರಳಬೇಕೆಂದರೆ, ಬೇಡಿಕೆ ಹೆಚ್ಚಾಗಬೇಕು ಎನ್ನುತ್ತಾರೆ ವಿತ್ತ ಪರಿಣತರು. ಗ್ರಾಹಕರು ಹೆಚ್ಚು ವಸ್ತುಗಳನ್ನು ಕೊಳ್ಳುವಂತಾದರೆ, ವಿತ್ತೀಯ ಸ್ಥಿತಿ ಸುಧಾರಿಸುತ್ತದೆ ಎನ್ನುವ ದೃಷ್ಟಿಯಿಂದ ಕೇಂದ್ರ ಸರಕಾರವೂ ತನ್ನ ಬಜೆಟ್‌ನಲ್ಲಿ ಪೂರಕ ಕ್ರಮಗಳನ್ನು ಘೋಷಿಸಿದೆ. ಆದರೆ ಕೇಂದ್ರ ಬಜೆಟ್‌ನ ಆಶಯಕ್ಕೆ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಅಡ್ಡಗಾಲಾಗಿ ಪರಿಣಮಿಸುತ್ತಿದೆ. ಇಂಧನ ಬೆಲೆ ಏರಿಕೆಯು ದೇಶದಲ್ಲಿ ಉಳಿದೆಲ್ಲ ಉತ್ಪನ್ನಗಳ ಮೇಲಿನ ಬೆಲೆಯೂ ಹೆಚ್ಚುವಂತೆ ಮಾಡುತ್ತಿದೆ. ದವಸ -ಧಾನ್ಯ, ತರಕಾರಿ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆಗಳೂ ಇಂಧನದ ಬೆಲೆಯನ್ನು ಅವಲಂಬಿಸಿರುತ್ತವೆ. ಇಂಧನ ದರ ಹೆಚ್ಚಾ ದಂತೆಲ್ಲ ಸರಕು-ಸಾಗಣೆಯ ಖರ್ಚೂ ಹೆಚ್ಚಾಗುತ್ತದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವುದು ಸಹಜ. ಹೀಗಾದಾಗ, ಜನರು ವಸ್ತುಗಳ ಖರೀದಿಯ ವಿಚಾರದಲ್ಲಿ ಹಿಂದೆ ಮುಂದೆ ನೋಡುವ ಸಾಧ್ಯತೆ ಅಧಿಕವಾಗುತ್ತದೆ. ಹೀಗಾಗಿ ಬೇಡಿಕೆ ಹೆಚ್ಚಬೇಕೆಂಬ ಆಶಯಕ್ಕೇ ಪೆಟ್ಟು ಬೀಳುತ್ತದಲ್ಲವೇ? ಇದೊಂದೇ ವಲಯವೆಂದಷ್ಟೇ ಅಲ್ಲ, ತೈಲ ದರ ಏರಿಕೆಯಿಂದಾಗಿ ಹೊಟೇಲ್‌ಗ‌ಳು, ಆಟೋ ಚಾಲಕರು, ಓಲಾ ಉಬರ್‌ನಂಥ ಸಂಚಾರ ವಲಯಕ್ಕೂ ಕಷ್ಟವಾಗುತ್ತಿದೆ.

ಸಮಸ್ಯೆಯೇನೆಂದರೆ, ಭಾರತದಲ್ಲಿ ಪೆಟ್ರೋಲ್‌ ಡೀಸೆಲ್‌ ದರಗಳ ಮೇಲೆ 69 ಪ್ರತಿಶತದಷ್ಟು ತೆರಿಗೆ ವಿಧಿಸಲಾಗುತ್ತದೆ. ಇದರಲ್ಲಿ ರಸ್ತೆ ಮೂಲಸೌಕರ್ಯ ಸೆಸ್‌, ಕೃಷಿ ಮೂಲ ಸೌಕರ್ಯ ಸೆಸ್‌ನಂಥ ಅಭಿವೃದ್ಧಿ ಯೋಜನೆಗೆ ಪೂರಕವಾದ ಸೆಸ್‌ ಇವೆ. ಆದರೆ ಬೇರೆಲ್ಲೋ ಆಗಿರುವ ಕೊರತೆಯನ್ನು ಇಂಧನ ಬೆಲೆ ಏರಿಕೆಯ ಮೂಲಕ ತುಂಬಿಕೊಳ್ಳುವ ಪ್ರಯತ್ನ ಆಗಬಾರದು. ಈ ಕಾರಣಕ್ಕಾಗಿಯೇ, ಕರ್ನಾಟಕ ಸರಕಾರ ಮುಂಬರುವ ಬಜೆಟ್‌ನಲ್ಲಿ ಇಂಧನದ ಮೇಲಿನ ರಾಜ್ಯದ ಪಾಲಿನ ತೆರಿಗೆಯನ್ನು ಕಡಿತಗೊಳಿಸಿ ಜನರು ನಿರಾಳರಾಗುವಂತೆ ಮಾಡಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.