ಜಿಲ್ಲಾ ಕೇಂದ್ರ ದೇವನಹಳ್ಳಿ ಆಗಲಿ: ಶಿವಪ್ಪ


Team Udayavani, Feb 16, 2021, 12:51 PM IST

ಜಿಲ್ಲಾ ಕೇಂದ್ರ ದೇವನಹಳ್ಳಿ ಆಗಲಿ: ಶಿವಪ್ಪ

ದೇವನಹಳ್ಳಿ: ತಾಲೂಕಿನಲ್ಲಿ ಬೆಂ.ಗ್ರಾ. ಜಿಲ್ಲೆಯ ಜಿಲ್ಲಾಡಳಿತ ಭವನವು ಕಾರ್ಯನಿರ್ವಹಿಸುತ್ತಿದೆ. ಕೆಲವರು ರಾಜಕೀಯ ತೆವಲಿಗೆ ಅಲ್ಲಿ ಆಗಬೇಕು, ಇಲ್ಲಿ ಆಗಬೇಕು ಎಂದು ಹೇಳಿಕೆ ನೀಡಿ, ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೇವನಹಳ್ಳಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಶಿವಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಕೇಂದ್ರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಬೀರಸಂದ್ರ ಸಮೀಪದಲ್ಲಿರುವ ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 7ರ ಪಕ್ಕದಲ್ಲಿರುವ 43 ಕೋಟಿ ರೂ. ವೆಚ cದಲ್ಲಿ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬಜೆಟ್‌ನಲ್ಲಿ ಅನುದಾನವಿಟ್ಟು, ಕಟ್ಟಡವನ್ನು ಪೂರ್ಣಗೊಳಿಸಿದ್ದಾರೆ. ಬೆಂ.ಗ್ರಾ.ಜಿಲ್ಲೆಯ ಜಿಲ್ಲಾಡಳಿತ ಭವನ ನಿರ್ಮಾಣವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ದೇವನಹಳ್ಳಿಗೆ ಜಿಲ್ಲಾ ಕೇಂದ್ರ ಸ್ಥಾನಮಾನ ನೀಡಬೇಕು ಎಂದರು.

ಸಚಿವರು ಇತಿಹಾಸ ತಿಳಿಯಲಿ:

ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ಅವರು ಇನ್ನೊಂದು ತಿಂಗಳೊಳಗಾಗಿ ಜಿಲ್ಲಾ ಕೇಂದ್ರ ಯಾವುದು ಎಂದು ಘೋಷಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ, ದೇವನಹಳ್ಳಿ ಜಿಲ್ಲಾ ಕೇಂದ್ರ ಸ್ಥಾನಕ್ಕೆ ಬರಲು ಸಾಕಷ್ಟು ಹೋರಾಟ ಪಕ್ಷಾತೀತವಾಗಿ ಎಲ್ಲ ಸಂಘಟನೆಗಳು ಜಾತಿ, ಜನಾಂಗಗಳು ಹೋರಾಟದ ಪ್ರತಿಫಲವಾಗಿ ದೇವನಹಳ್ಳಿ ತಾಲೂಕಿನಲ್ಲಿ ಜಿಲ್ಲಾಡಳಿತ ಭವನ ಬರಲು ಸಹಕಾರಿಯಾಗಿದೆ. ಮೊದಲು ಇದರ ಇತಿಹಾಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ತಿಳಿದುಕೊಳ್ಳಬೇಕು ಎಂದರು. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‌ಪಿ ಕಚೇರಿ ಸೇರಿದಂತೆ ಇನ್ನುಳಿದ ಎಲ್ಲ ಇಲಾಖೆ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರವಾಗಬೇಕು ಎಂದು ಒತ್ತಾಯಿಸಿದರು.

ಬಜೆಟ್‌ನಲ್ಲಿ ಕೋಟಿ ರೂ.ಮೀಸಲಿಡಿ:

ತಾಲೂಕಿನಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನಕ್ಕೆ ಕೆಲವು ಜಿಲ್ಲಾಮಟ್ಟದ ಇಲಾಖೆ ಈಗಾಗಲೇ ಆಗಮಿಸಿ ಕೆಲಸ ನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿರುವ ಇನ್ನುಳಿದ ಇಲಾಖೆ ಕೂಡಲೇ ಜಿಲ್ಲಾಡಳಿತ ಭವನಕ್ಕೆ ಬರುವಂತೆ ಕ್ರಮಕೈಗೊಳ್ಳುವುದು. ದೇವನಹಳ್ಳಿ ತಾಲೂಕನ್ನು ಉಪನಗರ ಎಂದು ಘೋಷಿಸಿ ಕೆಎಸ್‌ಆರ್‌ಟಿಸಿ ಬಸ್‌ ಡಿಫೋ, ಹೈಟೆಕ್‌ ಬಸ್‌ನಿಲ್ದಾಣ, ಕುಡಿಯಲು ಕಾವೇರಿ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಾರ್ಚ್‌ ತಿಂಗಳಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‌ ನಲ್ಲಿ ಕೋಟಿ ರೂ.ಮೀಸಲಿಡಬೇಕು. ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ಕೆಲಸ ನಿರ್ವಸುತ್ತಿರುವ ಅಧಿಕಾರಿಗಳ ವಸತಿ ಗೃಹಗಳನ್ನು ದೇವನಹಳ್ಳಿ ತಾಲೂಕಿನಲ್ಲಿಯೇ ಕಟ್ಟಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡ ಡಾ.ಮೂರ್ತಿ, ಮಹಿಳಾ ಸಾಂತ್ವನ ಕೇಂದ್ರದ ಸೂರ್ಯ ಕಲಾಮೂರ್ತಿ, ಕರವೇ ಗೌರವಾಧ್ಯಕ್ಷ ಚಂದ್ರ ಶೇಖರ್‌, ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌, ವರ್ತಕರ ಸಂಘದ ಅಧ್ಯಕ್ಷ ಬಿ.ವಿ.ನಾಗರಾಜ್‌, ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ಡಾ.ವೆಂಕಟರಾಜು, ಮಂಜುನಾಥ್‌, ಮುನಿರಾಜು, ಅಪ್ಪಯ್ಯಣ್ಣ, ಮುನಿಶಾಮಪ್ಪ, ಜೊನ್ನಹಳ್ಳಿ ರಾಮಾಂಜಿನಪ್ಪ, ಅಂದ್ರಹಳ್ಳಿ ರಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.